AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕಾಶಕ್ಕೆ ಉಗಿದ್ರೆ ಮುಖದ ಮೇಲೆಯೇ ಬೀಳುತ್ತೆ ಮಂಕೆ: ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ಯಾರಿಗೆ?

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿಯ ಗಂಭೀರ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಇತ್ತೀಚೆಗೆ ಮಾತನಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್​, ಕುಮಾರಸ್ವಾಮಿ ಅವರ ಡಿಎನ್ಎಯಲ್ಲಿಯೇ ದ್ವೇಷದ ರಾಜಕೀಯವಿದೆ ಎಂದಿದ್ದರು. ಇದೀಗ ತಿರುಗೇಟು ನೀಡಿರುವ ಹೆಚ್​ಡಿ ಕುಮಾರಸ್ವಾಮಿ, ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತೆ ಮಂಕೆ ಎಂದು ಟಾಂಗ್​ ಕೊಟ್ಟಿದ್ದಾರೆ.

ಆಕಾಶಕ್ಕೆ ಉಗಿದ್ರೆ ಮುಖದ ಮೇಲೆಯೇ ಬೀಳುತ್ತೆ ಮಂಕೆ: ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ಯಾರಿಗೆ?
ಆಕಾಶಕ್ಕೆ ಉಗಿದ್ರೆ ಮುಖದ ಮೇಲೆಯೇ ಬೀಳುತ್ತೆ ಮಂಕೆ: ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ಯಾರಿಗೆ?
TV9 Web
| Edited By: |

Updated on: Mar 20, 2025 | 8:07 PM

Share

ಬೆಂಗಳೂರು, ಮಾರ್ಚ್​ 20: ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ. ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ. ಹೀಗಂತ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಹೆಸರು ಹೇಳದೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರ ಡಿಎನ್ಎಯಲ್ಲಿಯೇ ದ್ವೇಷದ ರಾಜಕೀಯವಿದೆ. ಅಧಿಕಾರಿಗಳು ನ್ಯಾಯಾಲಯದ ಆದೇಶಗಳನ್ನು ಮಾತ್ರ ಪಾಲಿಸಿದ್ದಾರೆ. ಕೋರ್ಟ್ ಆದೇಶದಂತೆ ಸರ್ಕಾರಿ ಜಮೀನು ಒತ್ತುವರಿ ತೆರವು ಮಾಡುತ್ತಿದ್ದಾರೆ ಎಂದು ಡಿಕೆಶಿ ಹೆಚ್​ಡಿಕೆಗೆ ಟಾಂಗ್ ಕೊಟ್ಟಿದ್ದರು. ಇದಕ್ಕೆ ಇದೀಗ ಹೆಚ್​ಡಿಕೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್​​ಡಿ ಕುಮಾರಸ್ವಾಮಿ, ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ
Image
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
Image
ಕಾನೂನು ಬಾಹಿರವಾಗಿ ಭೂಮಿ ಇದ್ರೆ ವಶಪಡಿಸಿಕೊಳ್ಳಿ: ಕುಮಾರಸ್ವಾಮಿ ಪತ್ರ
Image
ಕೇಂದ್ರ ಸಚಿವ ಕುಮಾರಸ್ವಾಮಿ ತೋಟದ ಮನೆ ಸುತ್ತ ಒತ್ತುವರಿ ತೆರವಿಗೆ ಸಿದ್ಧತೆ
Image
ಡಿನೋಟಿಫಿಕೇಷನ್‌ ಪ್ರಕರಣ: ಕುಮಾರಸ್ವಾಮಿ ಅರ್ಜಿ ವಜಾ ಮಾಡಿದ ಸುಪ್ರೀಂ

ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​ 

ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ. ಇದೂ ಒಂದು ಬದುಕೇ? ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನಡೆಗೆ ನಾಲಿಗೆ ಚಾಚಿದೆ! ಇಂಥ ಕ್ರಿಮಿನಲ್ ಒಬ್ಬ ಕೆಟ್ಟ ಆಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ಕ್ರಿಮಿನಲ್’ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು. ಇದರಲ್ಲಿ ನನಗೇನೂ ಅಚ್ಚರಿ ಇಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ತೋಟದ ಮನೆ ಸುತ್ತ ಸರ್ಕಾರಿ ಭೂಮಿ ಒತ್ತುವರಿ ತೆರವು: ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ಹೀಗಿದೆ

ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನವಾಗುತ್ತದೆ. ಈಗ ನನ್ನ ಮರ್ಯಾದೆ ವಿಷಯ ಇರಲಿ, ಇವತ್ತು ಸ್ವಪಕ್ಷೀಯರೇ ಈ ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಹಾಕಿದ್ದಾರೆ! ಅದಕ್ಕೆ ಉತ್ತರವೇನು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.