AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್​ ಮೈತ್ರಿ ಬಗ್ಗೆ ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್​ ಹೊಂದಾಣಿಕೆ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಮಾರ್ಮಿಕವಾಗಿ ಮಾತನಾಡಿದ್ದಾರೆ. ಈ ಬಗ್ಗೆ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್​ ಮೈತ್ರಿ ಬಗ್ಗೆ ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
ರಮೇಶ್ ಬಿ. ಜವಳಗೇರಾ
|

Updated on: Jun 12, 2023 | 1:39 PM

Share

ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಕಂಡಿರುವ ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು​ ಲೋಕಸಭಾ ಚುನಾವಣೆಗೆ ಹೋಗಲಿವೆ ಎನ್ನುವ ಸುದ್ದಿ ಹರಿದಾಡುತ್ತಿದೆ. 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಸೋಲಿಸಲು ಬಿಜೆಪಿಯೇ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಿದೆ. ಈ ಬಗ್ಗೆ ಹೈಕಮಾಂಡ್​ ಮಟ್ಟದಲ್ಲಿ ಚರ್ಚೆಯಾಗಿದೆ ಎನ್ನುವ ಸುದ್ದಿ ಹಬ್ಬಿದೆ.​ ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗಳು ನಡೆದಿವೆ. ಆದ್ರೆ, ಇದನ್ನು ಸ್ವತಃ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅಲ್ಲಗಳೆದಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ? ಹೀಗಿದೆ ಕ್ಷೇತ್ರ ಹಂಚಿಕೆ ಲೆಕ್ಕಾಚಾರ

ಈ ಬಗ್ಗೆ ಇಂದು(ಜೂನ್ 12) ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿರುವ ಕುಮಾರಸ್ವಾಮಿ, ರಾಜಕಾರಣದಲ್ಲಿ ಚರ್ಚೆ, ಊಹಾಪೋಹಗಳು ಹುಟ್ಟುವುದು ಸಹಜ. ಕೆಲವೊಮ್ಮೆ ಗಾಳಿ ಸುದ್ದಿಗಾಗಿ ಚರ್ಚೆ ಮಾಡುತ್ತಾರೆ. ಇದಕ್ಕೆಲ್ಲ ಚುನಾವಣೆಯ ಪ್ರಕ್ರಿಯೆ ಆರಂಭವಾದಾಗ ಉತ್ತರ ಸಿಗಲಿದೆ. ಆ ರೀತಿ ನನ್ನ‌ ಮುಂದೆ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ಲೋಕಸಭಾ ಚುನಾವಣೆಗೆ ನಿಲ್ಲುವ ನಿರ್ಧಾರವಾಗಿಲ್ಲ. ಜಿಲ್ಲಾವಾರು ಜೆಡಿಎಸ್ ಮುಖಂಡರ ಸಭೆ‌ ಮಾಡಿದ್ದೇನೆ ನಿಮ್ಮ ಜೊತೆ ನಿಲ್ಲುತ್ತೇವೆ ಎಂದು ಮುಖಂಡರು ಹೇಳಿದ್ದಾರೆ. ಏನು ಮಾಡಬೇಕು ಎಂಬುದನ್ನ ಆ ಸಂದರ್ಭದಲ್ಲಿ ‌ತೆಗೆದುಕೊಳ್ಳುತ್ತೇವೆ. ನನಗೆ ರಾಜಕಾರಣದಲ್ಲಿ ಒಲವಿಲ್ಲ. ಸಿಎಂ ಸ್ಥಾನದಿಂದ ಕೆಳಗೆ ಇಳಿದಾಗಲೇ ತೀರ್ಮಾನ ಮಾಡಬೇಕು ಎಂದುಕೊಂಡಿದ್ದೆ. ಆದ್ರೆ, ಕಾರ್ಯಕರ್ತರಿಗೋಸ್ಕರ ಇದ್ದೇನೆ ಎಂದು ರಾಜಕಾರಣ ಸಾಕು ಎನ್ನುವ ಅರ್ಥದಲ್ಲಿ ಹೇಳಿದರು.

ನನ್ನದು ಬಿಡಿ, ಇಗೀದ ಎಂಪಿ ಸುರೇಶ್ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಅವರೇ ಈ ರೀತಿ ಯೋಚನೆ ಮಾಡಬೇಕಾದರೇ ನನ್ನಂತವನ ಪರಿಸ್ಥಿತಿ ಏನು? ಅಂತವರೇ ಆ ರೀತಿ ಹೇಳುತ್ತಿದ್ದಾರೆ. ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡುತ್ತಾರೆ. ಯಾಕೆಂದರೆ ಅವರ ಸಾಕ್ಷಿ ಗುಡ್ಡೆ ಬಹಳ ಇದೆ. ನಾನು ಯಾವ ರೀತಿ ಚುನಾವಣೆ ಎದುರಿಸಲಿ ಎಂದರು.

ಇನ್ನು ಇದೇ ವೇಳೆ ಕಾಂಗ್ರೆಸ್ ನ ಐದು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಮಾತನಾಡಿ, ಈ ಯೋಜನೆಗಳ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಬಗ್ಗೆ ಚರ್ಚೆ ಮಾಡುವುದು ಪ್ರೀ ಮೆಚ್ಯುರ್. ಚರ್ಚೆ ಮಾಡುವುದಕ್ಕೆ ಇನ್ನು ಸಮಯ ಇದೆ. ಸರ್ಕಾರಕ್ಕೆ ಯಾವುದೇ ಕಾರ್ಯಕ್ರಮ ಕೊಡಬೇಕಾದರೆ ಹಣ ಒದಗಿಸುವುದು ಕಷ್ಟವಲ್ಲ. ಆದರೆ‌ ಫಲಾನುಭವಿಗಳಿಗೆ ಎಷ್ಟರಮಟ್ಟಿಗೆ ತಲಪಿಸುತ್ತಾರೆ ಎಂಬುದು‌ ಮುಖ್ಯ. ಇದೀಗ ಬಾಡಿಗೆದಾರರಿಗೆ ಓನರ್ ಗಳು ಅಗ್ರಿಮೆಂಟ್ ಪೇಪರ್ ಕೊಡಲು ತಯಾರಿಲ್ಲ. ಘೋಷಣೆ ‌ಮಾಡಿದಾಗ ನನಗೂ 200, ನಿನಗೂ 200 ಎಂದು ಹೇಳಿದವರು ಈಗ ಏನು ಹೇಳುತ್ತಿದ್ದಾರೆ. ಅವತ್ತು ಪರಿಜ್ಞಾನ ‌ಎಲ್ಲಿತ್ತು ಎಂದು ಕಾಂಗ್ರೆಸ್​ ಪ್ರಶ್ನಿಸಿದರು.

ಬೆಂಗಳೂರು ಬಿಬಿಎಂಪಿಯಲ್ಲಿ ಮೇ.8 ರಂದಯ 675 ಕೋಟಿ ರೂ. ರಿಲೀಸ್ ಮಾಡಿದ್ರು. ಅದು ಟೆಂಡರ್ ಕೆಲಸಕ್ಕೆ ಅಲ್ಲ. ಕೆಲಸ ಮುಗಿಸಿದ ಗುತ್ತಿಗೆದಾರನಿಗೆ ಹಣ ಬಿಡುಗಡೆ ‌ಮಾಡಿದ್ರು. ಹಣ ಬಿಡುಗಡೆ ಮಾಡಬೇಡಿ ಎಂದು ಕಾಂಗ್ರೆಸ್ ನವರು ಅಟ್ಯಾಕ್ ಮಾಡಿದ್ರು. ಮೀಟಿಂಗ್ ‌ಮಾಡಿ, ಕೆಲಸದ ಬಗ್ಗೆ ವರದಿಯೂ ಪಡೆದರೂ ಏಕೆ ಹಣವನ್ನ ಬಿಡುಗಡೆ ಮಾಡಿಲ್ಲ. 40 ಪರ್ಸೆಂಟ್ ಬಗ್ಗೆ ರಾಜ್ಯಾದ್ಯಂತ ಗುತ್ತಿಗೆದಾರರು ಹಬ್ಬಿಸಿದ್ರು. ಅವರ ಬಳಿಯೇ 5 ಪರ್ಸೆಂಟ್ ತಂದುಕೊಡಿ ಎಂದು ಯಾರು ಕೇಳುತ್ತಿದ್ದಾರೆ ಎನ್ನುವುದನ್ನು ಸತ್ಯ ಹೇಳಿ. 40 ಪರ್ಸೆಂಟ್ ಎಂದು ಡಂಗೂರ ಹೊಡೆದುಕೊಂಡು ಬಂದರು. ಕಾಂಗ್ರೆಸ್ ನವರು ಯಾವ ಸಾಕ್ಷಿಯನ್ನ ಇಟ್ಟರು. ಅವನು ಯಾವನೋ ಗುತ್ತಿಗೆದಾರರ ಸಂಘದ ಪದಾಧಿಕಾರಿ ಆರೋಪ ಮಾಡಿದ್ದನಲ್ಲ ಸಾಕ್ಷಿ ಕೊಟ್ಟಿದ್ದಾನಾ? ಏಕೆ ಇವರು ಲೋಕಾಯುಕ್ತಕ್ಕೆ ದೂರು ಕೊಡಲಿಲ್ಲ ಎಂದು ಗುಡುಗಿದರು.

ಈಗ ನಿಮ್ಮದೆ ಸರ್ಕಾರ ಇದೆ. ಜನ ನಿಮಗೆ ಅಧಿಕಾರ ಕೊಟ್ಟಿದ್ದಾರೆ. 40 ಪರ್ಸೆಂಟ್ ಹೊರಗೆ ತನ್ನಿ. ಈ ಆಟ ನನ್ನ ಬಳಿ ನಡೆಯಲ್ಲ. ಏನೇನು ಮಾಡಿತ್ತಿದ್ದೀರಿ ಎನ್ನುವುದು ನನಗೆ ಗೊತ್ತಿದೆ. 675 ಕೋಟಿ ಎಲ್ ಒಸಿ ಯಾಕೆ ಬಿಡುಗಡೆ ಮಾಡಿಲ್ಲ. ಅದನ್ನ ಜನತೆ ಮುಂದೆ ಇಡಿ. ಇದು ಒಂದು ಸ್ಯಾಂಪಲ್ ಹೇಳುತ್ತಿದ್ದೇನೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ