ಕುಮಾರಸ್ವಾಮಿಗೆ ಸಿಕ್ತಾ ರಾಜಕೀಯ ಬದ್ಧ ವೈರಿಯ ಬೆಂಬಲ? ಸುಮಲತಾ ಆಡಿದ ಆ ಒಂದು ಮಾತಿನಿಂದ ಎಚ್​ಡಿಕೆ ಫುಲ್ ಖುಷ್

ಮಂಡ್ಯ ಲೋಕಸಭಾ ಅಖಾಡ ಮತ್ತಷ್ಟು ರಂಗೇರಿದೆ. ಮಂಡ್ಯ ಬಿಟ್ಟು ಹೋಗಲ್ಲ ಎಂದು ಸಸ್ಪೆನ್ಸ್ ಉಳಿಸಿಕೊಂಡಿರುವ ಸುಮಲತಾ ಅಂಬರೀಶ್ ನಡೆಯಿಂದ ಬಿಜೆಪಿ-ಜೆಡಿಎಸ್ ದೋಸ್ತಿಗಳಿಗೆ ಟೆನ್ಷನ್ ಶುರುವಾಗಿದೆ. ಹೀಗಾಗಿ ಮಂಡ್ಯ ಮೈತ್ರಿ ಅಭ್ಯರ್ಥಿ ಎಚ್​ಡಿ ಕುಮಾರಸ್ವಾಮಿ ಅವರೇ ಖುದ್ದು ಸುಮಲತಾ ಅವರನ್ನು ಭೇಟಿ ಮಾಡಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಹಾಗಾದ್ರೆ, ಸುಮಲತಾ ಕುಮಾರಸ್ವಾಮಿಗೆ ಬೆಂಬಲ ಸೂಚಿಸಿದ್ರಾ? ‘ಅಂಬಿ ಮನೆ’ಯಲ್ಲಿ ನಡೆದ ಅಸಲಿ ಆದ ಮಾತುಕತೆ ಏನು? ಎನ್ನುವ ವಿವರ ಇಲ್ಲಿದೆ.

ಕುಮಾರಸ್ವಾಮಿಗೆ ಸಿಕ್ತಾ ರಾಜಕೀಯ ಬದ್ಧ ವೈರಿಯ ಬೆಂಬಲ? ಸುಮಲತಾ ಆಡಿದ ಆ ಒಂದು ಮಾತಿನಿಂದ ಎಚ್​ಡಿಕೆ ಫುಲ್ ಖುಷ್
ಸುಮಲತಾ ಭೇಟಿಯಾದ ಎಚ್​​ಡಿಕೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 01, 2024 | 3:20 PM

ಬೆಂಗಳೂರು, (ಏಪ್ರಿಲ್ 01: ಕಳೆದ ಬಾರಿ ಸದ್ದು ಮಾಡಿದ್ದ ಮಂಡ್ಯ (Mandya) ಅಖಾಡ, ಈ ಬಾರಿಯೂ ಕಾವೇರಿದೆ. ನಾಮಪತ್ರ ಸಲ್ಲಿಕೆಗೆ 3 ದಿನ ಬಾಕಿ ಇದೆ. ಏಪ್ರಿಲ್ 3ಕ್ಕೆ ನಿರ್ಧಾರ ತಿಳಿಸುವುದಾಗಿ ಸುಮಲತಾ ಅಂಬರೀಶ್(Sumlatha Ambareesh,)  ಹೇಳಿರುವುದು ಮಂಡ್ಯ ಯುದ್ಧಕ್ಕೆ ಹೊಸ ಆಯಾಮ ಕೊಟ್ಟಿದೆ. ಹೀಗಾಗಿ ಸುಮಲತಾರನ್ನ ಭೇಟಿಯಾಗಿದ್ದ ಎಚ್.ಡಿ ಕುಮಾರಸ್ವಾಮಿ(HD Kumaraswamy ), ಮನವೊಲಿಸೋ ಪ್ರಯತ್ನ ಮಾಡಿದ್ದಾರೆ. ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸುತ್ತಿದ್ದೇನೆ. ಸಹಕಾರ ಕೊಡಿ ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಇನ್ನು ಭೇಟಿ ವೇಳೆ ಸುಮಲತಾ ಅಂಬರೀಶ್ ಏನು ಹೇಳಿದ್ದಾರೆ ಎನ್ನುವುದಕ್ಕೆ ಎಚ್​ಡಿ ಪ್ರತಿಕ್ರಿಯಿಸಿದ್ದು, ಆರೋಗ್ಯಕರ ಚರ್ಚೆ ಆಗಿದೆ ಎಂದು ಹೇಳಿದ್ದಾರೆ. ಫಲಪ್ರದವಾಗಿದೆ ಎಂದು ಆ ಪದದಲ್ಲಿದೆ. ಅದನ್ನು ಅವರು ಸೂಕ್ಷ್ಮವಾಗಿ ಹೇಳಿದ್ದಾರೆ. ಅದಕ್ಕೆ ಕಾಂಗ್ರೆಸ್​ನವರು ಭಯ ಬಿದ್ದು ಮಾತನಾಡುತ್ತಿದ್ದಾರೆ ಎಂದು ಹೇಳಿದರು. ಈ ಮೂಲಕ ಪರೋಕ್ಷವಾಗಿ ಸುಮಲತಾ ಜೊತೆಗಿನ ಭೇಟಿ ಫಲಪ್ರದವಾಗಿದೆ ಎಂದು ಹೇಳಿದರು.

ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಎಚ್​ಡಿ ಕುಮಾರಸ್ವಾಮಿ ಅವರು ಈ ಬಾರಿ ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದ್ರೆ, ಅವರಿಗೆ ರಾಜಕೀಯ ಬದ್ಧ ವೈರಿಯಾಗಿರುವ ಸುಮಲತಾ ಅಂಬರೀಶ್ ಅವರ ನಡೆ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ವೈಷಮ್ಯ ಮರೆತು ಖುದ್ದು ಕುಮಾರಸ್ವಾಮಿಯೇ ಸುಮಲತಾ ಅಂಬರೀಶ್ ಅವರ ಮನೆ ಬಾಗಿಲಿಗೆ ಹೋಗಿದ್ದಾರೆ. ಹೌದು..ಕುಮಾರಸ್ವಾಮಿಯವರು ನಿನ್ನೆ(ಮಾರ್ಚ್ 31) ಬೆಂಗಳೂರಿನ ನಿವಾಸದಲ್ಲಿ ಸುಮಲತಾ ಅವರನ್ನು ಭೇಟಿ ಮಾಡಿ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಆದ್ರೆ, ಸುಮಲತಾ ಅಂಬರೀಶ್ ಇನ್ನೂ ಯಾವುದೇ ಅಂತಿಮ ತೀರ್ಮಾನ ಪ್ರಕಟಿಸಿಲ್ಲ.

ಇದನ್ನೂ ಓದಿ: ಮಂಡ್ಯ ಕ್ಷೇತ್ರದಲ್ಲಿ ಬೆಂಬಲ ನೀಡುವಂತೆ ಸುಮಲತಾಗೆ ಮನವಿ ಮಾಡಿದ ಕುಮಾರಸ್ವಾಮಿ

ಸುಮಲತಾ ಇಟ್ಟಿರುವ ಹೆಜ್ಜೆಯನ್ನ ಹಿಂದಕ್ಕೆ ತೆಗೆಯುತ್ತಿಲ್ಲ. ಸಹಕಾರ ಕೋರಿದ ಕುಮಾರಸ್ವಾಮಿಗೆ, ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧಾರ ತಿಳಿಸುವುದಾಗಿ ಹೇಳಿ ಕಳುಹಿಸಿದ್ದಾರೆ. ಏಪ್ರಿಲ್ 3ಕ್ಕೆ ನಿರ್ಧಾರ ಘೋಷಿಸಲು ಸಜ್ಜಾಗಿರುವ ಸುಮಲತಾಗೆ ಶಾಕ್ ಆಗಿದೆ. ಅತ್ತ ಮಂಡ್ಯದಲ್ಲಿ ಸುಮಲತಾ ಆಪ್ತ ಸಚ್ಚಿದಾನಂದ ಮೈತ್ರಿ ಬೆಂಬಲಿಸಿ ಕುಮಾರಸ್ವಾಮಿ ಪರ ಪ್ರಚಾರ ಮಾಡುತ್ತಿದ್ದಾರೆ. ಇಷ್ಟೆಲ್ಲದರ ನಡುವೆ ಸುಮಲತಾ ಮುಂದಿನ ನಡೆ ಏನು ಎನ್ನುವುದೇ ಸಸ್ಪೆನ್ಸ್ ಆಗಿಯೇ ಉಳಿದಿದೆ. ಆದ್ರೆ, ಸದ್ಯ ಸುಮಲತಾ, ಹೆಚ್‌ಡಿಕೆಗೆ ಬೆಂಬಲ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ.

ಬಾಹ್ಯ ಬೆಂಬಲ ಘೋಷಿಸುವ ಸಾಧ್ಯತೆ

2019ರಲ್ಲಿ ಇದ್ದ ಸ್ಥಿತಿ ಈಗ ಮಂಡ್ಯದಲ್ಲಿ ಇಲ್ಲ. ಮಂಡ್ಯದ ಜನ ಸುಮಲತಾ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಬಾರಿಯೂ ಸ್ವತಂತ್ರವಾಗಿ ಕಣಕ್ಕಿಳಿದ್ರೆ ಹಿನ್ನಡೆಯಾಗಬಹುದೆಂಬ ಭಯ ಸುಮಲತಾ ಅವರನ್ನು ಕಾಡತೊಡಗಿದೆ. ಕಾಂಗ್ರೆಸ್ ಬಾಗಿಲು ಕೂಡಾ ಬಂದ್ ಆಗಿದೆ. ಹೀಗಾಗಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎನ್ನುವುದುಸುಮಲತಾ ಇಚ್ಛೆಯಾಗಿರುವುದರಿಂದ ಮೈತ್ರಿಗೆ ಬೆಂಬಲಿಸಬೇಕಾದ ಅನಿವಾರ್ಯತೆ ಇದೆ. ಮೈತ್ರಿ ವಿರುದ್ಧ ನಡೆದುಕೊಂಡ್ರೆ ಭವಿಷ್ಯದಲ್ಲಿ ಸಂಕಷ್ಟ ಸಾಧ್ಯತೆಯೇ ಹೆಚ್ಚಿದೆ ಎನ್ನಲಾಗಿದೆ. ಹೀಗಾಗಿ ಇದೀಗ ಕುಮಾರಸ್ವಾಮಿಅ ಅವರ ಮಾತುಗಳನ್ನು ಗಮನಿಸಿದರೆ ಸುಮಲತಾ ಅಂಬರೀಶ್​ ಅವರು ಬೆಂಬಲಿಸುವ ಸಾಧ್ಯತೆಗಳಿವೆ. ಆದ್ರೆ, ರಾಜಕೀಯ ಬದ್ಧ ವೈರಿಯಾಗಿರುವ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಹೋಗದೇ ಬಾಹ್ಯವಾಗಿ ಬೆಂಬಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಾರೆ ಸಂಸದೆ ಸುಮಲತಾ ನಡೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಕುಮಾರಸ್ವಾಮಿ ಸಹ ಮನವೊಲಿಸೋ ಪ್ರಯತ್ನ ಮಾಡಿದ್ದಾರೆ. ಆದ್ರೆ, ಸುಮಲತಾ ಏನ್ ಮಾಡುತ್ತಾರೆ ಎನ್ನುವುದೇ ಕುತೂಹಲ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ