ರಾಜಕೀಯ ಬದುಕು ಕೊಟ್ಟ ಪಕ್ಷವನ್ನೇ ನಿಂದಿಸುತ್ತಿದ್ದಾರೆ; ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಸರಣಿ ಟ್ವೀಟ್

TV9 Digital Desk

| Edited By: sandhya thejappa

Updated on:Oct 10, 2021 | 12:21 PM

ಬುದ್ಧಿವಂತರು ಜೆಡಿಎಸ್​ಗೆ ಮತ ಹಾಕಲ್ಲ ಎಂದು ಹೇಳಿದ್ದಾರೆ. ಜನ ಸಿದ್ದರಾಮಯ್ಯನವರ ಜೇಬಿನಲ್ಲಿದ್ದಾರಾ? ಎಂದು ಟ್ವೀಟ್​ನಲ್ಲಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ರಾಜಕೀಯ ಬದುಕು ಕೊಟ್ಟ ಪಕ್ಷವನ್ನೇ ನಿಂದಿಸುತ್ತಿದ್ದಾರೆ; ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಸರಣಿ ಟ್ವೀಟ್
ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ (HD Kumaraswmy) ಸರಣಿ ಟ್ವೀಟ್ ಮಾಡಿದ್ದಾರೆ. ಜೆಡಿಎಸ್ ಪಕ್ಷವನ್ನ ಟೀಕಿಸದಿದ್ರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ. ರಾಜಕೀಯ ಬದುಕು ಕೊಟ್ಟ ಪಕ್ಷವನ್ನೇ ನಿಂದಿಸುತ್ತಿದ್ದಾರೆ. ಅನುಕಂಪದಲ್ಲಿ ತೇಲುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಸಿಂದಗಿಯಲ್ಲಿ ಅನುಕಂಪ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ. ಬುದ್ಧಿವಂತರು ಜೆಡಿಎಸ್​ಗೆ ಮತ ಹಾಕಲ್ಲ ಎಂದು ಹೇಳಿದ್ದಾರೆ. ಜನ ಸಿದ್ದರಾಮಯ್ಯನವರ ಜೇಬಿನಲ್ಲಿದ್ದಾರಾ? ಎಂದು ಟ್ವೀಟ್​ನಲ್ಲಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸಿಂದಗಿ ಕ್ಷೇತ್ರದಲ್ಲಿ ಅವರ ಪಕ್ಷ 3ನೇ ಸ್ಥಾನದಲ್ಲಿತ್ತು. ಇಲ್ಲಿ ಕಾಂಗ್ರೆಸ್ 2ನೇ ಸ್ಥಾನಕ್ಕೆ ಬಂದ ಇತಿಹಾಸವೇ ಇಲ್ಲ. ಈಗ ನೋಡಿದರೇ ರಾಜಕೀಯ ಬದುಕು ಕೊಟ್ಟ ಪಕ್ಷವನ್ನೆ ನಿಂದಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ ಹೆಚ್​ಡಿಕೆ, ಈಗ ಎಂಸಿ ಮನಗೂಳಿ ನಿಧನದ ಅನುಕಂಪದಲ್ಲಿ ತೇಲುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಇದ್ದ ಅವರ ಪುತ್ರನನ್ನು ಹೈಜಾಕ್ ಮಾಡಿ, ಜನರಿಗೆ ತಮ್ಮ ಸಿದ್ದಕಲೆ ದರ್ಶನ ಆಗುತ್ತಿದ್ದಂತೆಯೇ ಈಗ ಅನುಕಂಪ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬುದ್ಧಿವಂತ ಮತದಾರರು ಜೆಡಿಎಸ್ ಪಕ್ಷಕ್ಕೆ ಮತ ಹಾಕಲ್ಲ ಎಂದು ಸಿದ್ಧಹಸ್ತರು ಫರ್ಮಾನು ಹೊರಡಿಸಿದ್ದಾರೆ. ಜನರು ಇವರ ಜೇಬಿನಲ್ಲಿ ಇದ್ದಾರಾ? ಇದು ಸಿಂದಗಿ ಜನರಿಗೆ ಅಪಮಾನ ಮಾಡುವ ಅಹಂಕಾರದ ಹೇಳಿಕೆ. ಅವರೇ ತಕ್ಕ ಉತ್ತರ ನೀಡಲಿದ್ದಾರೆ ಅಂತ ಕುಮಾರಸ್ವಾಮಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ

Viral Video: ವಧು ವರರನ್ನು ಒಟ್ಟಿಗೆ ಮೇಲಕ್ಕೆತ್ತಿ ಕೆಳಗೆ ಬೀಳಿಸಿದ ಸ್ನೇಹಿತ; ವಿಡಿಯೋ ಇದೀಗ ಫುಲ್ ವೈರಲ್

ದಕ್ಷಿಣ ಕನ್ನಡ: ಮೂಡುಬಿದಿರೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada