ಬಿಜೆಪಿಗೆ ಬೆಂಬಲ ನೀಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ: ಹೆಚ್​ಡಿ ಕುಮಾರಸ್ವಾಮಿ ಸ್ಪಷ್ಟನೆ

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲಕ್ಕೆ ಬಿ.ಎಸ್. ಯಡಿಯೂರಪ್ಪ ಮನವಿ ವಿಚಾರವಾಗಿ ಯಡಿಯೂರಪ್ಪ ಹೇಳಿಕೆಗೆ ಟ್ವಿಟರ್ ಮೂಲಕ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಸ್ಪಷ್ಟನೆ ಕೊಟ್ಟಿದ್ದಾರೆ.

ಬಿಜೆಪಿಗೆ ಬೆಂಬಲ ನೀಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ: ಹೆಚ್​ಡಿ ಕುಮಾರಸ್ವಾಮಿ ಸ್ಪಷ್ಟನೆ
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
Follow us
TV9 Web
| Updated By: ganapathi bhat

Updated on: Nov 27, 2021 | 2:24 PM

ಬೆಂಗಳೂರು: ಬಿಜೆಪಿಗೆ ಬೆಂಬಲ ನೀಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನಾನು ಯಡಿಯೂರಪ್ಪಗೆ ಕೆಲ ಒಳ್ಳೆಯ ಮಾತು ಹೇಳಿದ್ದೇನೆ. ಒಳ್ಳೆಯ ಮಾತು ಹೇಳಿದ್ದಕ್ಕೆ ಬಿಜೆಪಿಗೆ ಬೆಂಬಲಿಸಿದ್ದೇನೆಂದಲ್ಲ. ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲುವ ಭಯ. ಹೀಗಾಗಿ ಜೆಡಿಎಸ್ ವಿರುದ್ಧ ಸುಳ್ಳು ಹಬ್ಬಿಸುವ ಕೆಲಸ ಮಾಡ್ತಿದೆ. ಅವರಿಗೆ ಪ್ರತಿ ಚುನಾವಣೆ ಬಂದಾಗ ಜೆಡಿಎಸ್ ಜ್ವರ ಶುರುವಾಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಆ ಮೂಲಕ, ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡಲಿದೆ ಎಂಬ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲಕ್ಕೆ ಬಿ.ಎಸ್. ಯಡಿಯೂರಪ್ಪ ಮನವಿ ವಿಚಾರವಾಗಿ ಯಡಿಯೂರಪ್ಪ ಹೇಳಿಕೆಗೆ ಟ್ವಿಟರ್ ಮೂಲಕ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಸ್ಪಷ್ಟನೆ ಕೊಟ್ಟಿದ್ದಾರೆ.

ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧೆ ಮಾಡಿಲ್ಲವೋ ಅಲ್ಲೆಲ್ಲಾ ಬಿಜೆಪಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪ ಅವರು ಮನವಿ ಮಾಡಿರುವುದು ಸರಿಯಷ್ಟೇ. ಈ ಬಗ್ಗೆ ನಾನು ನಿನ್ನೆ ಚಿಕ್ಕಬಳ್ಳಾಪುರದಲ್ಲಿ ಹೇಳಿಕೆ ನೀಡಿ ನಮ್ಮ ಪಕ್ಷದ ಅಭಿಪ್ರಾಯ ಹೇಳಿದ್ದೇನೆ. ಆದರೆ, ಆ ನನ್ನ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಲಾಗಿದೆ. ಬಿಜೆಪಿಗೆ ಬೆಂಬಲ ನೀಡಲಾಗುವುದು ಎಂದು ಎಲ್ಲೂ ನಾನು ಹೇಳಿಲ್ಲ. ಆದರೆ ಬೆಂಬಲ ಕೇಳಿದ ಯಡಿಯೂರಪ್ಪ ಅವರ ಬಗ್ಗೆ ರಾಜಕೀಯವನ್ನು ಹೊರತುಪಡಿಸಿ ಒಂದೆರಡು ಒಳ್ಳೆಯ ಮಾತುಗಳನ್ನು ಹೇಳಿದ್ದೇನೆ. ಅವರ ರಾಜಕೀಯ ಅನುಭವ, ಹಿರಿತನಕ್ಕೆ ಗೌರವ ಕೊಟ್ಟು ಮಾತನಾಡಿದ್ದೇನೆ. ಇದರಲ್ಲಿ ತಪ್ಪೇನಿದೆ? ಎಂದು ಟ್ವೀಟ್ ಮೂಲಕ ಪ್ರಶ್ನೆ ಮಾಡಿ, ವಿಚಾರ ತಿಳಿಸಿದ್ದಾರೆ.

ಯಡಿಯೂರಪ್ಪ ಅವರ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳಿದಾಕ್ಷಣ ಜೆಡಿಎಸ್ ಪಕ್ಷವೂ ಬಿಜೆಪಿಗೆ ಬೆಂಬಲ ನೀಡುತ್ತದೆ ಎಂದರ್ಥವಲ್ಲ. ಚಿಕ್ಕಬಳ್ಳಾಪುರದಲ್ಲಿ ನಾನು ಕೊಟ್ಟ ಹೇಳಿಕೆಯನ್ನು ಮತ್ತೊಮ್ಮೆ ಗಮನಿಸಬೇಕು ಎಂಬುದು ನನ್ನ ಮನವಿ. ಕಾಂಗ್ರೆಸ್ ಪಕ್ಷದ ನಾಯಕರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲುವ ಭಯ ಶುರುವಾಗಿದೆ. ಆ ಕಾರಣಕ್ಕೆ ಅವರು ಜನರನ್ನು, ಮತದಾರರನ್ನು ದಿಕ್ಕು ತಪ್ಪಿಸುವ ಹಾಗೂ ಜೆಡಿಎಸ್ ವಿರುದ್ಧ ಸುಳ್ಳುಗಳನ್ನು ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಪ್ರತೀ ಚುನಾವಣೆ ಬಂದಾಗ ಜೆಡಿಎಸ್ ಜ್ವರ ಶುರುವಾಗುತ್ತದೆ ಎಂದು ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದ್ದಾರೆ.

ಕಾಂಗ್ರೆಸ್ಸಿನ ಮಂಡ್ಯ, ಕೊಡಗು ಅಭ್ಯರ್ಥಿಗಳ ಬಗ್ಗೆ ಜನರಿಗೆ ಗೊತ್ತಾಗಿದೆ. ಮಂಡ್ಯದ ಕಾಂಗ್ರೆಸ್ ಅಭ್ಯರ್ಥಿಗೆ ಟಿಕೆಟ್ ಯಾರು ಕೊಡಿಸಿದರು ಎನ್ನುವುದನ್ನು ಸ್ವತಃ ಸಹಕಾರ ಸಚಿವರೇ ಹೇಳಿದ್ದಾರೆ. ಹಾಗಾದರೆ, ಕಾಂಗ್ರೆಸ್ ಪಕ್ಷವು ಬಿಜೆಪಿಯ ಯಾವ ಟೀಮು? ಸಿ ಟೀಮಾ? ಡಿ ಟೀಮಾ? ನಮ್ಮನ್ನು ಬಿಜೆಪಿ ಬಿ ಟೀಮ್ ಎನ್ನುವವರೇ ಉತ್ತರಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆ: ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ- ಬಿಎಸ್ ಯಡಿಯೂರಪ್ಪ ಹೇಳಿಕೆ

ಇದನ್ನೂ ಓದಿ: ಪರಿಷತ್ ಚುನಾವಣೆ: ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿರುವ ಅನುಮಾನವಿದೆ: ಜಿ ಪರಮೇಶ್ವರ್