Karnataka Politics: ಸಿಎಂ ಇಬ್ರಾಹಿಂ ನಿವಾಸಕ್ಕೆ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಭೇಟಿ
ಇಬ್ರಾಹಿಂ ಜೆಡಿಎಸ್ಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಕುಮಾರಸ್ವಾಮಿ ಕೂಡ ಹೇಳಿಕೆ ನೀಡಿದ್ದರು. ಇದೀಗ, ಕುಮಾರಸ್ವಾಮಿ ನೇರವಾಗಿ ಇಬ್ರಾಹಿಂ ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ, ರಾಜಕೀಯ ಸಂಚಲನಕ್ಕೆ ಎಡೆ ಮಾಡಿಕೊಟ್ಟಿದೆ.
ಬೆಂಗಳೂರು: ಹಿರಿಯ ರಾಜಕಾರಿಣಿ, ಕಾಂಗ್ರೆಸ್ ನಾಯಕ, ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ನಿವಾಸಕ್ಕೆ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಬೆಂಗಳೂರಿನ ಸಿ.ಎಂ. ಇಬ್ರಾಹಿಂ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸಿ.ಎಂ ಇಬ್ರಾಹಿಂ ಈ ಮೊದಲು ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರುವ ಸುಳಿವು ಬಿಟ್ಟುಕೊಟ್ಟಿದ್ದರು. ಇಬ್ರಾಹಿಂ ಜೆಡಿಎಸ್ಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಕುಮಾರಸ್ವಾಮಿ ಕೂಡ ಹೇಳಿಕೆ ನೀಡಿದ್ದರು. ಇದೀಗ, ಕುಮಾರಸ್ವಾಮಿ ನೇರವಾಗಿ ಇಬ್ರಾಹಿಂ ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ, ರಾಜಕೀಯ ಸಂಚಲನಕ್ಕೆ ಎಡೆ ಮಾಡಿಕೊಟ್ಟಿದೆ.
ಇಬ್ರಾಹಿಂ ನಮ್ಮವರು
ಇಂದು (ಜನವರಿ 28) ರಾಮನಗರದಲ್ಲಿ ಮಾತನಾಡಿದ್ದ ಹೆಚ್.ಡಿ. ಕುಮಾರಸ್ವಾಮಿ, ಸಿ.ಎಂ. ಇಬ್ರಾಹಿಂ ಅವರು ನಮಗೆ ಹಳಬರು, ದೇವೇಗೌಡರ ಗರಡಿಯಲ್ಲಿ ಬೆಳೆದವರು. ನಾನು ಸಿದ್ದರಾಮಯ್ಯ ಜತೆ ಹೋಗಿ ದೇವೇಗೌಡರನ್ನು ದೂರ ಮಾಡಿಕೊಂಡೆ. ಅವರ ಕೊನೆ ಆಸೆಯಂತೆ ಮುಂದಿನ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು. ಹಾಗಾಗಿ ನಾನು ಜೆಡಿಎಸ್ ಸೇರ್ತೇನೆಂದು ಸ್ವತಃ ಅವರೇ ಹೇಳಿದ್ದಾರೆ. ಅವರಿಗೆ ನಾನು ಸ್ವಾಗತ ಮಾಡುತ್ತೇನೆ ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದರು.
ಪುಟ್ಟರಾಜು & ಸಿದ್ದರಾಮಯ್ಯ ಭೇಟಿ ಬಗ್ಗೆ ಗೊತ್ತಿಲ್ಲ
ಇದೇ ವೇಳೆ, ಸಿ.ಎಸ್.ಪುಟ್ಟರಾಜು ಹಾಗೂ ಇತರೆ ಜೆಡಿಎಸ್ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ವಿಚಾರ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಯಾರನ್ನು ಭೇಟಿ ಮಾಡುತ್ತಾರೋ ಅದನ್ನು ಕಟ್ಟಿಕೊಂಡು ನನಗೇನು? ಯಾರು ಯಾರನ್ನ ಬೇಕಾದರೂ ಭೇಟಿ ಮಾಡಬಹುದು, ಚರ್ಚೆ ಮಾಡಬಹುದು. ನನಗೆ ನನ್ನ ಪಕ್ಷ, ಕಾರ್ಯಕರ್ತರು, ಜನ ಮುಖ್ಯ. ಕಾರ್ಯಕರ್ತರಿದ್ದರೆ ಅಷ್ಟೇ ಪಕ್ಷ ಮತ್ತು ಮುಖಂಡರು ಬೆಳೆಯೋದು ಎಂದು ಕುಮಾರಸ್ವಾಮಿ ಹೇಳಿದ್ದರು.
ಕಾರ್ಯಕರ್ತರಿಂದ ಮುಖಂಡರು ಉದ್ಭವ ಆಗುತ್ತಾರೆ. ಬಹಳಷ್ಟು ಜನ ಮುಖಂಡರು ಜೆಡಿಎಸ್ ನಲ್ಲಿ ಬೆಳೆದಿದ್ದಾರೆ. ನಂತರ ಪಕ್ಷವನ್ನ ಬಿಟ್ಟು ಹೋಗಿದ್ದಾರೆ. ಜೆಡಿಎಸ್ ಕಾರ್ಯಕರ್ತರಿಗೆ ಮುಖಂಡರನ್ನು ಬೆಳೆಸುವ ಶಕ್ತಿಯಿದೆ. 2023ಕ್ಕೆ ಜೆಡಿಎಸ್ ಶಕ್ತಿ ಏನೆಂದು ತಿಳಿಯಲಿದೆ ಎಂದು ಮಾಜಿ ಸಿಎಂ ತಿಳಿಸಿದ್ದರು.
ಇದನ್ನೂ ಓದಿ: ಸಿಎಂ ಇಬ್ರಾಹಿಂ ನನ್ನ ಸ್ನೇಹಿತ, ಅವರು ಕಾಂಗ್ರೆಸ್ನಲ್ಲಿರುತ್ತಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ
ಇದನ್ನೂ ಓದಿ: ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ರಾಜಕೀಯ ಮಾಡ್ತಿದ್ದಾರೆ: ಡಿಕೆ ಬ್ರದರ್ಸ್ಗೆ ಕುಟುಕಿದ ಹೆಚ್ಡಿ ಕುಮಾರಸ್ವಾಮಿ
Published On - 5:25 pm, Fri, 28 January 22