AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sringeri: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಏನು; ಎಚ್​ಡಿ ಕುಮಾರಸ್ವಾಮಿ ಪ್ರಶ್ನೆ

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಎಚ್​ಡಿ ಕುಮಾರಸ್ವಾಮಿ, ಮಾರ್ಚ್​​ 11ರಂದು ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಮೋದಿ ಬರುತ್ತಾರೆ. ತಾವು ಅಭಿವೃದ್ಧಿ ಮಾಡಿದ್ದೇವೆ ಎಂದು ಬಿಂಬಿಸಲು ಅವರು ಬರುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

Sringeri: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಏನು; ಎಚ್​ಡಿ ಕುಮಾರಸ್ವಾಮಿ ಪ್ರಶ್ನೆ
ಎಚ್​ಡಿ ಕುಮಾರಸ್ವಾಮಿ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on:Feb 25, 2023 | 11:42 AM

Share

ಶೃಂಗೇರಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕೊಡುಗೆ ಏನು ಎಂದು ಜೆಡಿಎಸ್ (JDS) ನಾಯಕ ಎಚ್​ಡಿ ಕುಮಾರಸ್ವಾಮಿ (HD Kumaraswamy) ಪ್ರಶ್ನಿಸಿದ್ದಾರೆ. ಶೃಂಗೇರಿಯಲ್ಲಿ (Sringeri) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ರಾಜ್ಯದ ಜನರು ಭೂಮಿ ನೀಡಿದ್ದಾರೆ. ಕೆಲವರಿಗೆ ಇನ್ನೂ ಹಣ ಬಂದಿಲ್ಲ. ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಶೂನ್ಯ ಎಂದು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮಾರ್ಚ್​​ 11ರಂದು ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಮೋದಿ ಬರುತ್ತಾರೆ. ತಾವು ಅಭಿವೃದ್ಧಿ ಮಾಡಿದ್ದೇವೆ ಎಂದು ಬಿಂಬಿಸಲು ಅವರು ಬರುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಶುಕ್ರವಾರ ರಾತ್ರಿಯೇ ಶೃಂಗೇರಿಗೆ ತೆರಳಿದ್ದ ಎಚ್​ಡಿಕೆ ಶನಿವಾರ ಬೆಳಿಗ್ಗೆ ಶೃಂಗೇರಿ ಮಠದ ಭಾರತೀತೀರ್ಥ ಶ್ರೀಗಳನ್ನು ಏಕಾಂತದಲ್ಲಿ ಭೇಟಿಯಾದರು. ನಂತರ ಪತ್ರಿಕಾಗೋಷ್ಠಿ ನಡೆಸಿದರು.

‘ಯಡಿಯೂರಪ್ಪಗೆ ಈಗ ಜ್ಞಾನೋದಯ’

ಈ ಬಾರಿಯ ಚುನಾವಣೆಯಲ್ಲಿ 130 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಪ್ರಾಣ ಇರುವವರೆಗೆ ಬಿಜೆಪಿಗೆ ಹೋಗಲ್ಲ ಎಂದು ಕೆಜೆಪಿ ಪಕ್ಷ ಕಟ್ಟಿದ್ದಾಗ ಹೇಳಿದ್ದರು. ಈಗ ಜೀವ ಇರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ ಎಂದಿದ್ದಾರೆ. ಹಿಂದಿನ ವಿಚಾರಗಳನ್ನು ಈಗ ಪ್ರಸ್ತಾಪ ಮಾಡಲು ಹೋಗಲ್ಲ ಎನ್ನುತ್ತಲೇ ಕುಮಾರಸ್ವಾಮಿ ಅವರು ಬಿಎಸ್​ವೈ ರಾಜಕೀಯ ಇತಿಹಾಸ ಕೆದಕಿದರು. ಗೆದ್ದ ಎತ್ತಿನಬಾಲ ಹಿಡಿಯಲು ಹೋಗುತ್ತಾರೆ ಅಂತ ಸಿದ್ದರಾಮಯ್ಯ ನನ್ನನ್ನು ಕುರಿತು ಹೇಳುತ್ತಾರೆ. ಅವರು ಸೋತ ಎತ್ತಿನಬಾಲ ಹಿಡಿಯಲು ಹೋಗುತ್ತಾರೆ ಎಂದು ಎಚ್​ಡಿಕೆ ವಾಗ್ದಾಳಿ ನಡೆಸಿದರು.

‘ಸಾಮಾನ್ಯ ಕಾರ್ಯಕರ್ತನಿಗೆ ಹಾಸನ ಟಿಕೆಟ್’

ಹಾಸನ ಕ್ಷೇತ್ರದ ಟಿಕೆಟ್ ಬಗ್ಗೆ​ ಟಿ-20 ಮ್ಯಾಚ್​ ರೀತಿ ಕುತೂಹಲವಿದೆ. ಕೊನೆಯ ಓವರ್​ವರೆಗೂ ಈ ಕುತೂಹಲವಿರಲಿದೆ. ಹಾಸನ ಕ್ಷೇತ್ರದಲ್ಲಿ ಟಿಕೆಟ್​​ ನೀಡಿಕೆ ಬಗ್ಗೆ ಚರ್ಚಿಸುವ ಸಲುವಾಗಿ ನಾಳೆ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ. ಆ ಸಭೆಗೆ ರೇವಣ್ಣ ಅವರನ್ನು ಕರೆದಿಲ್ಲ. ಹಾಸನ ಕ್ಷೇತ್ರದ ಟಿಕೆಟ್​ ಬಗ್ಗೆ ರಾಜ್ಯದ ಜನರಿಗೂ ಕುತೂಹಲವಿದೆ. ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರೆಲ್ಲರೂ ನನ್ನ ಕುಟುಂಬ. ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಬಿಜೆಪಿ ಸೋಲಿಸ್ತೇನೆ ಎಂದಿದ್ದೆ. ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಕಾರ್ಯಕರ್ತರ ಅಭಿಮಾನಕ್ಕೆ ಚ್ಯುತಿ ಬರದಂತೆ ಟಿಕೆಟ್​ ನೀಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಹಾಸನ ಟಿಕೆಟ್​ ಘೋಷಣೆ ಮಾಡಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.

ಜೆಡಿಎಸ್ ರಾಜ್ಯದ ಜನರ ಟೀಂ

ಕಾಂಗ್ರೆಸ್​​ನವರು ಬಿಜೆಪಿಯ ಬಿ ಟೀಂ ಜೆಡಿಎಸ್​ ಎಂದು ಹೇಳುತ್ತಾರೆ. ಬಿಜೆಪಿಯವರು ಕಾಂಗ್ರೆಸ್​ನ ಬಿ ಟೀಂ ಎಂದು ಹೇಳುತ್ತಾರೆ. ಆದರೆ ನಾವು ಯಾರ ಬಿ ಟೀಂ ಕೂಡ ಅಲ್ಲ, ಈ ರಾಜ್ಯದ ಜನರ ಟೀಂ ಎಂದು ಕುಮಾರಸ್ವಾಮಿ ಹೇಳಿದರು.

ಕುಮಾರಸ್ವಾಮಿ ಅವರು ಕೆಲವು ದಿನಗಳ ಹಿಂದೆ ಬ್ರಾಹ್ಮಣರ ವಿರುದ್ಧ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ನಂತರ ಸ್ಪಷ್ಟನೆ ನೀಡಿದ್ದ ಅವರು ಮಹಾರಾಷ್ಟ್ರ ಮೂಲದ ಬ್ರಾಹ್ಮಣರು, ಶೃಂಗೇರಿ ಮಠದ ಮೇಲೆ ದಾಳಿ ಮಾಡಿದ ಬ್ರಾಹ್ಮಣರ ಬಗ್ಗೆ ನಾನು ಹಾಗೆ ಹೇಳಿದೆನೇ ವಿನಃ ನಮ್ಮ ರಾಜ್ಯದವರ ಬಗ್ಗೆ ಅಲ್ಲ ಎಂದಿದ್ದರು. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶೃಂಗೇರಿಗೆ ಭೇಟಿ ನೀಡಿದ್ದರು. ಅದಾದ ಬೆನ್ನಲ್ಲೇ ಎಚ್​ಡಿಕೆ ಶೃಂಗೇರಿಗೆ ಭೇಟಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:26 am, Sat, 25 February 23

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್