AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನೋತ್ಸವಕ್ಕೆ 4500 ಬಸ್ ಬುಕ್ – ಬೈಕ್, ಕಾರು, ಮಿನಿ ಬಸ್ಸು ಸಾವಿರಾರು -ಯಾರಿಗೆ ಯಾವ ಟಾಸ್ಕ್ ಫಿಕ್ಸ್? -ಆರೋಗ್ಯ ಸಚಿವ ಸುಧಾಕರ್ ಸಂಪೂರ್ಣ ಮಾಹಿತಿ

Janotsva Doddaballapur: ಜನೋತ್ಸವಕ್ಕೆ 4500 ಬಸ್ ಬುಕ್ - ಬೈಕ್, ಕಾರು, ಮಿನಿ ಬಸ್ಸು ಸಾವಿರಾರು -3 ಲಕ್ಷ ಜನರಿಗೆ ತಿಂಡಿ, ಊಟದ ವ್ಯವಸ್ಥೆ -ಆರೋಗ್ಯ ಸಚಿವ ಸುಧಾಕರ್ ಮಾಹಿತಿ

ಜನೋತ್ಸವಕ್ಕೆ  4500 ಬಸ್ ಬುಕ್ - ಬೈಕ್, ಕಾರು, ಮಿನಿ ಬಸ್ಸು ಸಾವಿರಾರು -ಯಾರಿಗೆ ಯಾವ ಟಾಸ್ಕ್ ಫಿಕ್ಸ್? -ಆರೋಗ್ಯ ಸಚಿವ ಸುಧಾಕರ್ ಸಂಪೂರ್ಣ ಮಾಹಿತಿ
ಜನೋತ್ಸವಕ್ಕೆ 4500 ಬಸ್ ಬುಕ್ - ಬೈಕ್, ಕಾರು, ಮಿನಿ ಬಸ್ಸು ಸಾವಿರಾರು -ಯಾರಿಗೆ ಯಾವ ಟಾಸ್ಕ್ ಫಿಕ್ಸ್? -ಆರೋಗ್ಯ ಸಚಿವ ಸುಧಾಕರ್ ಸಂಪೂರ್ಣ ಮಾಹಿತಿ
TV9 Web
| Updated By: ಸಾಧು ಶ್ರೀನಾಥ್​|

Updated on: Sep 06, 2022 | 4:29 PM

Share

ಇದೇ ಸೆಪ್ಟೆಂಬರ್ ತಿಂಗಳ 8 ರಂದು ಗುರುವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ (Doddaballapur) ಆಡಳಿತಾರೂಢ ಬಿಜೆಪಿ ಪಕ್ಷವು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರ ಮುಂದೆ ಇಡಲು ಬೃಹತ್ ಜನೋತ್ಸವ (Janotsva) ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾರ್ಯಕ್ರಮದಲ್ಲಿ ಜನರನ್ನು ಕರೆ ತರುವುದೂ ಸೇರಿದಂತೆ ಮುಖಂಡರುಗಳಿಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ಡಾ. ಕೆ. ಸುಧಾಕರ್ (Dr K Sudhakar) ಟಾಸ್ಕ್ ಫಿಕ್ಸ್ ಮಾಡಿ, ಎಲ್ಲಡೆ ಪೂರ್ವಭಾವಿ ಸಭೆ ನಡೆಸಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಧ್ಯೆಯ ವಾಕ್ಯವನ್ನು ಇಟ್ಟುಕೊಂಡ ಆಡಳಿತ ನಡೆಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರ, ಜನೋತ್ಸವ ಕಾರ್ಯಕ್ರಮದ ಮೂಲಕ ವಿಪಕ್ಷಗಳ ಟೀಕೆಗೆ ಉತ್ತರ ನೀಡಲು ಮುಂದಾಗಿದೆ. ಇದೇ ತಿಂಗಳ 8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ತಾಲೂಕಿನ ರಘುನಾಥಪುರ ಗ್ರಾಮದ (Raghunathapur) ಬಳಿ ಬೃಹತ್ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ.

ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು, ರಾಜ್ಯ ಸರ್ಕಾರದ ಮಂತ್ರಿಗಳು ಸೇರಿ ಕೇಂದ್ರ ಸರ್ಕಾರದ 5 ಜನ ಸಚಿವರು ಭಾಗಿಯಾಗಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಖಾತೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟಿವಿ9ಗೆ ತಿಳಿಸಿದ್ದಾರೆ.

ಇನ್ನೂ ಜನೋತ್ಸವ ಕಾರ್ಯಕ್ರಮವನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಸಚಿವ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಂಚೇನಹಳ್ಳಿ, ತಿಪ್ಪೇನಹಳ್ಳಿ, ಮಂಡಿಕಲ್, ಕಸಬಾ ಹೋಬಳಿಗಳ ಮುಖಂಡರುಗಳ ಜೊತೆ ಚಿಕ್ಕಬಳ್ಳಾಪುರ ನಗರದ ಚಿತ್ರಾವತಿ ಕಲ್ಯಾಣ ಮಂಟಪದಲ್ಲಿ ಪೂರ್ವಭಾವಿ ಸಭೆ ನಡೆಸಿದ್ರು. ಕಾರ್ಯಕ್ರಮದಲ್ಲಿ 3 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ಬರಲು 4,500 ಬಸ್ಸುಗಳನ್ನು ಬುಕ್ ಮಾಡಲಾಗಿದೆ. ಸಾವಿರಾರು ಬೈಕ್, ಕಾರು, ಮಿನಿ ಬಸ್ಸುಗಳಲ್ಲಿ ಜನಸಾಗರವಾಗಿ ಹರಿದು ಬರಲಿದ್ದಾರೆ.

3 ಲಕ್ಷ ಜನರಿಗೆ ತಿಂಡಿ, ಊಟದ ವ್ಯವಸ್ಥೆ ಮಾಡಲಾಗಿದೆ. ದೊಡ್ಡಮಟ್ಟದ 2 ಸಂಸ್ಥೆಗಳಿಗೆ ಕ್ಯಾಟರಿಂಗ್ ಗುತ್ತಿಗೆ ನೀಡಲಾಗಿದೆ. ತಲಾ ಒಂದೂವರೆ ಲಕ್ಷದಷ್ಟು ಜನರಿಗೆ ಆಗುವಷ್ಟು ತಿಂಡಿ, ಊಟದ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಹೀಗೆ ಉತ್ತಮುತ್ತಲ 5 ಜಿಲ್ಲೆಗಳ ಜನರು ಭಾಗಿಯಾಗುವ ನಿರೀಕ್ಷೆಯಿದೆ ಎಂದು ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ. ಬಿಜೆಪಿ ಸಮೂಹ ನಾಯಕತ್ವದಲ್ಲಿ ನಂಬಿಕೆ ಇಟ್ಟಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಜನರೇ ವಿಪಕ್ಷಗಳ ಟೀಕೆಗೆ ಉತ್ತರ ನೀಡಲಿದ್ದಾರೆ. ಜನೋತ್ಸವ ಕಾರ್ಯಕ್ರಮದಲ್ಲಿ ಯಾವುದೇ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

ಇನ್ನೂ ಸರ್ಕಾರದ ವಿವಿಧ ಯೋಜನೆಗಳಾದ * ಅಮೃತಗ್ರಾಮ ಪಂಚಾಯ್ತಿ ಯೋಜನೆ,  * ಅಮೃತ ಗ್ರಾಮೀಣ ವಸತಿ ಯೋಜನೆ, * ಅಮೃತ ರೈತ ಉತ್ಪಾದಕ ಯೋಜನೆ, * ಅಮೃತ ನಿರ್ಮಲ ನಗರ ಯೋಜನೆ, * ಅಮೃತ ಶಾಲಾ ಸೌಲಭ್ಯ ಯೋಜನೆ, * ಅಮೃತ ಅಂಗನವಾಡಿ ಕೇಂದ್ರ ಯೋಜನೆ, * ಅಮೃತ ಕೌಶಲ್ಯ ತರಬೇತಿ ಯೋಜನೆ, * ಅಮೃತ ನಗರೋತ್ಥಾನ ಯೋಜನೆ, * ಅಮೃತ ಸಮುದಾಯ ಅಭಿವೃದ್ಧಿ ಯೋಜನೆ, * ಅಮೃತ ಕ್ರೀಡಾ ಯೋಜನೆ ಸೇರಿದಂತೆ ಹತ್ತು ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಅವರು ತಿಳಿಸಿದ್ರು. – ಭೀಮಪ್ಪ ಪಾಟೀಲ, ಟಿವಿ 9, ಚಿಕ್ಕಬಳ್ಳಾಪುರ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ