ರಾಂಚಿ: ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್ ಅವರ ಪುತ್ರ ಹೇಮಂತ್ ಸೋರೆನ್ ಇಂದು (ಗುರುವಾರ) ಮೂರನೇ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಚಂಪೈ ಸೊರೆನ್ ಅವರು ಬುಧವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ, ಬುಧವಾರ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಹೇಮಂತ್ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದರು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಹೇಮಂತ್ ಸೋರೆನ್ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಈ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಮಾರು 5 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿರುವ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಇಂದು ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಂಚಿಯ ರಾಜಭವನದಲ್ಲಿ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷರಾದ ಹೇಮಂತ್ ಸೋರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
VIDEO | JMM executive president Hemant Soren (@HemantSorenJMM) takes oath as Jharkhand CM at Raj Bhavan in Ranchi. pic.twitter.com/pEYu9pbqHR
— Press Trust of India (@PTI_News) July 4, 2024
ಇದನ್ನೂ ಓದಿ: ಮೋದಿಗೆ ಸುಳ್ಳು ಹೇಳುವ ಅಭ್ಯಾಸ; ರಾಜ್ಯಸಭೆಯಿಂದ ಹೊರನಡೆದಿದ್ದಕ್ಕೆ ಕಾರಣ ನೀಡಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯದಲ್ಲಿ ಸರ್ಕಾರ ರಚಿಸಲು ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಆಹ್ವಾನಿಸಿದ ನಂತರ ಜುಲೈ 7ರಂದು ಹೇಮಂತ್ ಸೋರೆನ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಜೆಎಂಎಂ ಇಂದು ಬೆಳಗ್ಗೆ ಹೇಳಿಕೆ ನೀಡಿತ್ತು. ಆದರೆ, ಹೇಮಂತ್ ಸೋರೆನ್ ನಿವಾಸದಲ್ಲಿ ನಡೆದ ಒಕ್ಕೂಟದ ನಾಯಕರ ಸಭೆಯಲ್ಲಿ ಇಂದೇ ಪ್ರಮಾಣವಚನ ಸ್ವೀಕರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ರಾಜೇಶ್ ಠಾಕೂರ್ ತಿಳಿಸಿದ್ದಾರೆ.
VIDEO | JMM leader Champai Soren arrives at Raj Bhavan in Ranchi for the oath-taking ceremony of Hemant Soren as Jharkhand CM. pic.twitter.com/1jn83Od3Lo
— Press Trust of India (@PTI_News) July 4, 2024
ಚಂಪೈ ಸೊರೆನ್ ಬುಧವಾರ ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಹೇಮಂತ್ ಸೊರೆನ್ ಅವರು ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಜೆಎಂಎಂ ನೇತೃತ್ವದ ಮೈತ್ರಿಕೂಟದ ನಿಯೋಗ ಬುಧವಾರ ರಾಜಭವನದಲ್ಲಿ ರಾಜ್ಯಪಾಲ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿತು. ಹೇಮಂತ್ ಸೊರೆನ್ ನೇತೃತ್ವದ ನಿಯೋಗದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ರಾಜೇಶ್ ಠಾಕೂರ್, ಆರ್‌ಜೆಡಿ ಸಚಿವ ಸತ್ಯಾನಂದ ಭೋಕ್ತಾ ಮತ್ತು ಸಿಪಿಐ(ಎಂಎಲ್)-ಎಲ್ ಶಾಸಕ ವಿನೋದ್ ಸಿಂಗ್ ಇದ್ದರು. ಹೇಮಂತ್ ಸೋರೆನ್ ಅವರ ಪತ್ನಿ ಮತ್ತು ಗಂಡೆ ಶಾಸಕಿ ಕಲ್ಪನಾ ಸೋರೆನ್ ಕೂಡ ಈ ನಿಯೋಗದ ಭಾಗವಾಗಿದ್ದರು.
5 महीने पहले सत्ता के मद में चूर अहंकारियों ने मुझे चुप कराने की कोशिश की थी। आज झारखंडियों की जनमत वापस बुलंद होगी।
जय झारखंड, जय हिंद pic.twitter.com/E9HCs6t0oT
— Hemant Soren (@HemantSorenJMM) July 4, 2024
ಇದನ್ನೂ ಓದಿ: Hemant Soren: ಜಾರ್ಖಂಡ್ ಮುಖ್ಯಮಂತ್ರಿಯಾಗಿ ಇಂದು ಸಂಜೆ ಹೇಮಂತ್ ಸೋರೆನ್ ಪ್ರಮಾಣ ವಚನ ಸ್ವೀಕಾರ
ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಅವರು ಜನವರಿ 31 ರಂದು ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿಯಿಂದ ಬಂಧಿಸುವ ಸ್ವಲ್ಪ ಮೊದಲು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜೂನ್ 28ರಂದು ಸೋರೆನ್ ಜೈಲಿನಿಂದ ಬಿಡುಗಡೆಗೊಂಡರು. ಸುಮಾರು 5 ತಿಂಗಳ ನಂತರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಅವರಿಗೆ ಜಾಮೀನು ನೀಡಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:21 pm, Thu, 4 July 24