ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಪ್ರಮುಖ ನಾಯಕರಿವರು

ಈಗಾಗಲೇ ಎರಡು ಬಾರಿ ಕ್ಷೇತ್ರದಿಂದ ಗೆದ್ದಿರುವ ಅವರು ಈ ಬಾರಿ ಹ್ಯಾಟ್ರಿಕ್‌ ನಿರೀಕ್ಷೆಯಲ್ಲಿದ್ದಾರೆ.  2014 ರಲ್ಲಿ ಮೋದಿ ಅವರು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ್ದರು.2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್‌ನ ಗಾಂಧಿನಗರದಿಂದ ಸ್ಪರ್ಧಿಸಲಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಪ್ರಮುಖ ನಾಯಕರಿವರು
ಬಿಜೆಪಿ ನಾಯಕರು
Follow us
ರಶ್ಮಿ ಕಲ್ಲಕಟ್ಟ
|

Updated on: Mar 02, 2024 | 8:56 PM

ದೆಹಲಿ ಮಾರ್ಚ್ 02: ಮುಂಬರುವ ಲೋಕಸಭೆ ಚುನಾವಣೆಗೆ (Lok sabha Election) ಆಡಳಿತಾರೂಢ ಬಿಜೆಪಿ (BJP) 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಈ ಬಾರಿ 370ಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. ಈ ಪಟ್ಟಿಯಲ್ಲಿ 34 ಕೇಂದ್ರ ಸಚಿವರಿದ್ದಾರೆ ಎಂದು ವಿಶೇಷ. ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತೊಮ್ಮೆ ಉತ್ತರ ಪ್ರದೇಶದ ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ. ಈಗಾಗಲೇ ಎರಡು ಬಾರಿ ಕ್ಷೇತ್ರದಿಂದ ಗೆದ್ದಿರುವ ಅವರು ಈ ಬಾರಿ ಹ್ಯಾಟ್ರಿಕ್‌ ನಿರೀಕ್ಷೆಯಲ್ಲಿದ್ದಾರೆ.  2014 ರಲ್ಲಿ ಮೋದಿ ಅವರು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ್ದರು. 2019 ರಲ್ಲಿ ಅವರು ಸಮಾಜವಾದಿ ಪಕ್ಷದ ಶಾಲಿನಿ ಯಾದವ್ ವಿರುದ್ಧ ಗೆದ್ದಿದ್ದರು.

ಮೊದಲ ಪಟ್ಟಿಯಲ್ಲಿರುವ ಘಟಾನುಘಟಿಗಳಿವರು

ಅಮಿತ್ ಶಾ

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್‌ನ ಗಾಂಧಿನಗರದಿಂದ ಸ್ಪರ್ಧಿಸಲಿದ್ದಾರೆ.

ರಾಜನಾಥ್ ಸಿಂಗ್

ಮುಂಬರುವ ಚುನಾವಣೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಕ್ನೋದಿಂದ ಸ್ಪರ್ಧಿಸಲಿದ್ದಾರೆ.

ಸ್ಮೃತಿ ಇರಾನಿ

2019 ರಲ್ಲಿ ಕಾಂಗ್ರೆಸ್ ಭದ್ರಕೋಟೆಯಾದ ಅಮೇಠಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಗೆಲುವು ಸಾಧಿಸಿದ ನಂತರ, ಸ್ಮೃತಿ ಇರಾನಿ ಅವರಿಗೆ ಮತ್ತೊಮ್ಮೆ ಉತ್ತರ ಪ್ರದೇಶದ ಪ್ರಮುಖ ಕ್ಷೇತ್ರವನ್ನು ವಹಿಸಲಾಗಿದೆ.

ಜ್ಯೋತಿರಾದಿತ್ಯ ಸಿಂಧಿಯಾ

ರಾಜ್ಯಸಭಾ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಗುನಾದಿಂದ ಸ್ಪರ್ಧಿಸಲಿದ್ದಾರೆ. 2019 ರಲ್ಲಿ ಇವರು ಬಿಜೆಪಿ ವಿರುದ್ದ ಇಲ್ಲಿ ಸೋತಿದ್ದರು. 2001 ರಲ್ಲಿ, ಜ್ಯೋತಿರಾದಿತ್ಯ ಸಿಂಧಿಯಾ ಅವರ ತಂದೆ ಮತ್ತು ಮಾಜಿ ಕೇಂದ್ರ ಸಚಿವ ಮಾಧವರಾವ್ ಸಿಂಧಿಯಾ ಅವರು ವಿಮಾನ ಅಪಘಾತದಲ್ಲಿ ನಿಧನರಾದ ನಂತರ ರಾಜಕೀಯ ಪ್ರವೇಶಿಸಿದರು. 2002ರಲ್ಲಿ ಕಾಂಗ್ರೆಸ್ ನಾಯಕರಾಗಿ ಗುನಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು, 2019ರವರೆಗೆ ಅವರು ಆ ಕ್ಷೇತ್ರವನ್ನು ಪ್ರತಿನಿಧೀಕರಿಸಿದ್ದರು

ಶಿವರಾಜ್ ಸಿಂಗ್ ಚೌಹಾಣ್

ಕಳೆದ ವರ್ಷ ಬಿಜೆಪಿಯ ಅದ್ಭುತ ಗೆಲುವಿನ ಹೊರತಾಗಿಯೂ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗದ ಶಿವರಾಜ್ ಸಿಂಗ್ ಚೌಹಾಣ್ ಅವರು ವಿದಿಶಾದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ

ಕಿರಣ್ ರಿಜಿಜು

ಪ್ರಸ್ತುತ ಭೂ ವಿಜ್ಞಾನ ಖಾತೆಯನ್ನು ಹೊಂದಿರುವ ಕಿರಣ್ ರಿಜಿಜು ಅವರು ಅರುಣಾಚಲ ಪಶ್ಚಿಮದಿಂದ ಸ್ಪರ್ಧಿಸಲಿದ್ದಾರೆ. 2019 ರಲ್ಲಿ ಬಿಜೆಪಿ 2 ನೇ ಅವಧಿಗೆ ಅಧಿಕಾರಕ್ಕೆ ಬಂದಾಗಿನಿಂದ, ರಿಜಿಜು ಕಾನೂನು ಮತ್ತು ಯುವ ವ್ಯವಹಾರಗಳಂತಹ ಹಲವಾರು ಪ್ರಮುಖ ಸಚಿವಾಲಯಗಳನ್ನು ಮುನ್ನಡೆಸಿದ್ದಾರೆ.

ರಾಜೀವ್ ಚಂದ್ರಶೇಖರ್

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ತಿರುವನಂತಪುರಂನಲ್ಲಿ ಕಣಕ್ಕಿಳಿಯಲಿದ್ದಾರೆ. ಇಲ್ಲಿ ಕಾಂಗ್ರೆಸ್‌ನ ಶಶಿ ತರೂರ್ ಸಂಸದರಾಗಿದ್ದು, ಎಡಪಕ್ಷ- ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ ನಿರೀಕ್ಷಿಸಲಾಗಿದೆ.

ಹೇಮಾ ಮಾಲಿನಿ

ಮಥುರಾ ಕ್ಷೇತ್ರದಿಂದ ನಟಿ-ರಾಜಕಾರಣಿ ಹೇಮಾ ಮಾಲಿನಿ ಮತ್ತೆ ಕಣಕ್ಕಿಳಿದಿದ್ದಾರೆ. 2014 ಮತ್ತು 2019 ರ ಚುನಾವಣೆಗಳಲ್ಲಿ, ಹಿರಿಯ ಬಾಲಿವುಡ್ ನಟ ಎರಡೂ ಬಾರಿ 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಭರ್ಜರಿ ವಿಜಯವನ್ನು ದಾಖಲಿಸಿದ್ದರು.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ವಾರಣಾಸಿಯಿಂದ ಮೋದಿ ಸ್ಪರ್ಧೆ 

ಭೂಪೇಂದರ್ ಯಾದವ್

ಸವಾಲುಗಳನ್ನು ಎದುರಿಸುವಲ್ಲಿ ಬಿಜೆಪಿಗೆ ಧೀಮಂತರಾಗಿರುವ ಭೂಪೇಂದರ್ ಯಾದವ್ ಅವರು ಎರಡು ದಶಕಗಳ ಕಾಲ ಪಕ್ಷದ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ತಮ್ಮ ಮೊದಲ ಲೋಕಸಭೆ ಚುನಾವಣೆಗೆ ಕಾಲಿಡುತ್ತಿದ್ದಾರೆ. ಯಾದವ್, ರಾಜಸ್ಥಾನದ ಅಲ್ವಾರ್‌ನಿಂದ ಸ್ಪರ್ಧಿಸಲಿದ್ದಾರೆ.

2019 ರ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳನ್ನು ಗೆದ್ದಿದೆ. ಆದರೆ ಪ್ರಸ್ತುತ ಅದು ಲೋಕಸಭೆಯಲ್ಲಿ 290 ಸದಸ್ಯರನ್ನು ಹೊಂದಿದೆ. ವಿವಿಧ ಕಾರಣಗಳಿಗಾಗಿ ಕೆಲವು ಸಂಸದರು ಇತ್ತೀಚೆಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ರಾಜೀನಾಮೆ ನೀಡಿದ್ದಾರೆ.

ಚುನಾವಣಾ ಆಯೋಗವು ಈ ತಿಂಗಳ ಕೊನೆಯಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ ಮತ್ತು ಚುನಾವಣೆಗಳು ಏಪ್ರಿಲ್-ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ