ಪಂಚರಾಜ್ಯ ಚುನಾವಣೆಗಾಗಿ ಕರ್ನಾಟಕ ಕಾಂಗ್ರೆಸ್​ಗೆ 1000 ಕೋಟಿ ರೂ. ಟಾರ್ಗೆಟ್: ಯಾವ ರಾಜ್ಯಕ್ಕೆ ಎಷ್ಟು? ಬಿಜೆಪಿ ಟ್ವೀಟ್

ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಸಿಕ್ಕ ಕೋಟ್ಯಂತರ ರೂಪಾಯಿ ಯಾರದ್ದು ಎನ್ನುವುದೇ ಇನ್ನೂ ನಿಗೂಢವಾಗಿದೆ. ಇದರ ಬೆನ್ನಲ್ಲೇ ಇದೀಗ ರಾಜಕೀಯ ಕೆಸರೆರಚಾಟ ಶುರುವಾಗಿದೆ. ಅದರಲ್ಲೂ ಬಿಜೆಪಿ, ಆಡಳಿತರೂಢ ಕಾಂಗ್ರೆಸ್​ ವಿರುದ್ಧ ಮುಗಿಬಿದ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯಲ್ಲಿ ಪೋಸ್ಟರ್​ಗಳನ್ನು ಪೋಸ್ಟ್ ಮಾಡುತ್ತಿದೆ.

ಪಂಚರಾಜ್ಯ ಚುನಾವಣೆಗಾಗಿ ಕರ್ನಾಟಕ ಕಾಂಗ್ರೆಸ್​ಗೆ 1000 ಕೋಟಿ ರೂ. ಟಾರ್ಗೆಟ್: ಯಾವ ರಾಜ್ಯಕ್ಕೆ ಎಷ್ಟು? ಬಿಜೆಪಿ ಟ್ವೀಟ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 16, 2023 | 11:04 AM

ಬೆಂಗಳೂರು, (ಅಕ್ಟೋಬರ್ 16): ಐಟಿ ದಾಳಿ (OT Raid) ವೇಳೆ ಸಿಕ್ಕ ಕೋಟ್ಯಂತರ ರೂಪಾಯಿ ನಗದು ಹಣ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಮಾಜಿ ಕಾರ್ಪೊರೇಟರ್ ಕಂ ಕಂಟ್ರಾಕ್ಟರ್ ಹಾಗೂ ಬಿಲ್ಡರ್ ಮನೆಯಲ್ಲಿ ಸಿಕ್ಕ ಹಣ ಹೆಚ್ಚು ಕಡಿಮೆ ಸೇಮ್ ಹಣ. ಅಂದ್ರೆ 40 ಕೋಟಿಗೂ ಅಧಿಕ ಹಣ ಜಪ್ತಿ ಮಾಡಲಾಗಿದೆ. ಇನ್ನೂ ಈ ದಾಳಿ ಬಳಿಕವೂ ಯಥಪ್ರಕಾರ ರಾಜಕೀಯ ತಿಕ್ಕಾಟ ನಡೆಯುತ್ತಿದ್ದು, ವಿಪಕ್ಷಗಳು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಬಿಜೆಪಿ, ಪಂಚ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕೊಟ್ಟಿರುವ ಮೊದಲನೇ ಹಂತದಲ್ಲಿ 1000 ಕೋಟಿ ರೂಪಾಯಿ ಟಾರ್ಗೆಟ್ ನೀಡಿದೆ ಎಂದು ಗಂಭೀರ ಆರೋಪ ಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ತೆಲಂಗಾಣ ಕಾಂಗ್ರೆಸ್‌ಗೆ 300 ಕೋಟಿ ರೂ., ಮಿಜೋರಾಂ ಕಾಂಗ್ರೆಸ್‌ಗೆ 100 ಕೋಟಿ ರೂಪಾಯಿ, ಛತ್ತಿಸ್‌ಗಢ‌ ಕಾಂಗ್ರೆಸ್‌ಗೆ 200 ಕೋಟಿ ರೂ., ರಾಜಸ್ಥಾನ‌ ಕಾಂಗ್ರೆಸ್‌ಗೆ 200 ಕೋಟಿ ರೂ., ಮಧ್ಯಪ್ರದೇಶ‌ ಕಾಂಗ್ರೆಸ್‌ಗೆ 200 ಕೋಟಿ ರೂಪಾಯಿ ಟಾರ್ಗೆಟ್ ನೀಡಿದೆ. ಕಮಿಷನ್, ಕಲೆಕ್ಷನ್ ಮೂಲಕ ಸಾವಿರ ಕೋಟಿ ರೂ. ಟಾರ್ಗೆಟ್ ಮಾಡಿ ಸಂಗ್ರಹಿಸುತ್ತಿರುವ ಕಾಂಗ್ರೆಸ್ ಹಣ ಹಂಚುವ ಮುನ್ನವೇ ಸಿಕ್ಕಿ ಬಿದ್ದಿದೆ ಎಂದು ಕಿಡಿಕಾರಿದೆ.

ಇದನ್ನೂ ಓದಿ: ಇದೊಂದು ಬೇಸ್​ಲೆಸ್ ಆರೋಪ: ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಸಿದ್ದರಾಮಯ್ಯರನ್ನು ಕಲೆಕ್ಷನ್ ಮಾಸ್ಟರ್ ಎಂದು ಟೀಕಿಸಿ ಬಿಜೆಪಿ ಟ್ವೀಟ್ ಮಾಡಿದ್ದು, ಸಿದ್ದರಾಮಯ್ಯ ಹಿಡಿದುಕೊಂಡ ಬಜೆಟ್ ಸೂಟ್‌ ಕೇಸ್ ಮೇಲೆ ಕಲೆಕ್ಷನ್ ಮಾಸ್ಟರ್ ಎಂದು ಎಂದು ಬರೆದಿರುವ ಚಿತ್ರವನ್ನು ಹರಿಬಿಟ್ಟಿದೆ.

ಮೊನ್ನೆ ಮೊನ್ನೆಯಷ್ಟೇ ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ, ಮತ್ತವರ ಗಂಡ ಅಂಬಿಕಾಪತಿ ನಿವಾಸದ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು, ಮಂಚದ ಕೆಳಗೆ ಬಾಕ್ಸ್​ಗಳಲ್ಲಿ ತುಂಬಿಟ್ಟಿದ್ದ 40ಕೋಟಿ ರೂಪಾಯಿಯನ್ನ ಜಪ್ತಿಮಾಡಿಕೊಂಡು ಹೋಗಿದ್ದರು. ಇದರ ಬೆನ್ನಲ್ಲೇ ಐಟಿ ಅಧಿಕಾರಿಗಳು ಬಿಲ್ಡರ್ ಸಂತೋಷ್ ಎನ್ನುವ ನಿವಾಸದ ಮೇಲೆ ದಾಳಿ ಮಾಡಿದ್ದರು. ಬೆಂಗಳೂರಿನ ರಾಜಾಜಿನಗರದ ಅಪಾರ್ಟ್ಮೆಂಟ್​ನಲ್ಲಿ ಸಂತೋಷ್​ಗೆ ಸೇರಿದ ಫ್ಲ್ಯಾಟ್​ಮೇಲೆ ದಾಳಿ ಮಾಡಿ 40 ಕೋಟಿಗೂ ಅಧಿಕ ಹಣ ಹಣವನ್ನ ಜಪ್ತಿ ಮಾಡಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:02 am, Mon, 16 October 23

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ