AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪುವಿನ ಅವತಾರವೇ ಸಿದ್ದರಾಮಯ್ಯ: ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ

ಹಿಂದಿನ ಬಿಜೆಪಿ ಸರ್ಕಾರ ಹಿಜಾಬ್ ನಿಷೇಧ ಮಾಡಿಲ್ಲ. ಶಾಲೆಯಲ್ಲಿ ಸಮಾನತೆ ಇರಲಿ ಎಂಬ ಕಾರಣಕ್ಕೆ ಶಿಕ್ಷಣ ಸಂಸ್ಥೆಗಳಲ್ಲಿ ಧರಿಸದಂತೆ ಆದೇಶ ಹೊರಡಿಸಿತ್ತು. ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಒಂದೆ ಸಮವಸ್ತ್ರದ ಕಾಯ್ದೆ ಮಾಡಿದ್ದರು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಟಿಪ್ಪುವಿನ ಅವತಾರವೇ ಸಿದ್ದರಾಮಯ್ಯ: ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ
ಬಸನಗೌಡ ಪಾಟೀಲ್ ಯತ್ನಾಳ್ & ಸಿಎಂ ಸಿದ್ದರಾಮಯ್ಯ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: Ganapathi Sharma

Updated on: Dec 23, 2023 | 12:25 PM

ವಿಜಯಪುರ, ಡಿಸೆಂಬರ್ 23: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ (Hijab Row) ಆದೇಶವನ್ನು ವಾಪಸ್ ಪಡೆಯುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಾಗ್ದಾಳಿ ನಡೆಸಿದ್ದು, ಟಿಪ್ಪುವಿನ ಅವತಾರವೇ ಸಿದ್ದರಾಮಯ್ಯ ಎಂದು ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ಎರಡನೇ ಟಿಪ್ಪು ಸುಲ್ತಾನ್. ಆತನ ಅವತಾರವೇ ಸಿದ್ದರಾಮಯ್ಯ. ಹಿಜಾಬ್ ನಿಷೇಧ ಹಿಂಪಡೆಯೋದು ಸೂಕ್ತ ಅಲ್ಲ ಎಂದು ಯತ್ನಾಳ್ ಹೇಳಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರ ಹಿಜಾಬ್ ನಿಷೇಧ ಮಾಡಿಲ್ಲ. ಶಾಲೆಯಲ್ಲಿ ಸಮಾನತೆ ಇರಲಿ ಎಂಬ ಕಾರಣಕ್ಕೆ ಶಿಕ್ಷಣ ಸಂಸ್ಥೆಗಳಲ್ಲಿ ಧರಿಸದಂತೆ ಆದೇಶ ಹೊರಡಿಸಿತ್ತು. ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಒಂದೆ ಸಮವಸ್ತ್ರದ ಕಾಯ್ದೆ ಮಾಡಿದ್ದರು. ಈ ರೀತಿ ಅವರವರಿಗೆ ತಿಳಿದಿದ್ದನ್ನ ಅವರು ಧರಿಸಿ ಬರೋದಾದರೆ, ನಾಳೆ ಹಿಂದೂ ಸಮುದಾಯದ ವಿದ್ಯಾರ್ಥಿಗಳು ಕೇಸರಿ ಶಾಲು, ಹಣೆಗೆ ತಿಲಕ ಇಟ್ಟುಕೊಂಡು ಬರುತ್ತಾರೆ. ಇದು ಸಂಘರ್ಷಕ್ಕೆ ಹಾದಿ ಆಗುತ್ತದೆ ಎಂದು ಯತ್ನಾಳ್ ಹೇಳಿದ್ದಾರೆ.

ಇದನ್ನೂ ಓದಿ: ಧರ್ಮದ ಆಧಾರದಲ್ಲಿ ಯುವ ಜನರನ್ನು ವಿಭಜಿಸುತ್ತಿರುವ ಸಿದ್ದರಾಮಯ್ಯ ಸರ್ಕಾರ: ಬಿವೈ ವಿಜಯೇಂದ್ರ ಆಕ್ರೋಶ

ಈ ರೀತಿ ಆದರೆ ಶ್ರೀಮಂತರ ಮಕ್ಕಳು ಒಳ್ಳೆಯ ಬಟ್ಟೆ, ಚಿನ್ನಾಭರಣ ಹಾಕಿಕೊಂಡು ಬರುತ್ತಾರೆ. ಆಗ ಬಡ ಮಕ್ಕಳ ಭಾವನೆಗೆ ಪೆಟ್ಟು ಬೀಳುತ್ತದೆ. ಲೋಕಸಭಾ ಚುನಾವಣೆ ಹಿನ್ನೆಲೆ ಮುಸ್ಲಿಮರ ತುಷ್ಟೀಕರಣಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಲೋಕಸಭೆಯಲ್ಲಿ ಅವರೆಲ್ಲ ಇವರಿಗೆ ಮತ ಚಲಾಯಿಸ್ತಾರೆ ಎಂದು ಕೊಂಡಿದ್ದಾರೆ ಎಂದು ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ