AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Himachal Pradesh: ಪಕ್ಷದ 30 ಮುಖಂಡರನ್ನು 6 ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ ಕಾಂಗ್ರೆಸ್

ಪಕ್ಷ ವಿರೋಧಿ ಕಾರ್ಯವನ್ನು ಮಾಡಿದ್ದಕ್ಕಾಗಿ ಪಕ್ಷದಿಂದ ಉಚ್ಚಾಟಿಸಿ ಆದೇಶವನ್ನು ನೀಡಿದೆ. ಪಕ್ಷ ವಿರೋಧಿ ಚಟುವಟಿಕೆಯ ಕಾರಣಕ್ಕಾಗಿ 30 ಜಿಲ್ಲಾ ಪದಾಧಿಕಾರಿಗಳನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷವು ಉಚ್ಚಾಟಿಸಿದೆ.

Himachal Pradesh: ಪಕ್ಷದ 30 ಮುಖಂಡರನ್ನು 6 ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ ಕಾಂಗ್ರೆಸ್
Congress Flag
TV9 Web
| Edited By: |

Updated on:Dec 07, 2022 | 6:34 PM

Share

ಶಿಮ್ಲಾ: ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ (Himachal Pradesh Assembly Elections) ಮತ ಎಣಿಕೆಯ ಮುನ್ನವೇ ಕಾಂಗ್ರೆಸ್(Congress) ಪಕ್ಷ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ, ಪಕ್ಷ ವಿರೋಧಿ ಕಾರ್ಯವನ್ನು ಮಾಡಿದ್ದಕ್ಕಾಗಿ ಪಕ್ಷದಿಂದ ಉಚ್ಚಾಟಿಸಿ ಆದೇಶವನ್ನು ನೀಡಿದೆ. ಪಕ್ಷ ವಿರೋಧಿ ಚಟುವಟಿಕೆಯ ಕಾರಣಕ್ಕಾಗಿ 30 ಜಿಲ್ಲಾ ಪದಾಧಿಕಾರಿಗಳನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷವು ಉಚ್ಚಾಟಿಸಿದೆ.

ಹಿಮಾಚಲ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಪ್ರತಿಭಾ ಸಿಂಗ್ ಅವರು ಬ್ಲಾಕ್ ಕಾಂಗ್ರೆಸ್ ಸಮಿತಿ, ಚೋಪಾಲ್ ಅವರಿಂದ ಸ್ವೀಕರಿಸಿದ ನಿರ್ಣಯದ ಆಧಾರದ ಮೇಲೆ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಇದನ್ನು ಓದಿ: ಸರ್ವೆಯಲ್ಲಿ ಬಹುತೇಕ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯೇ ಅಧಿಕಾರಕ್ಕೆ

ಚೋಪಾಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಶಾಸಕ ಬಲ್ಬೀರ್ ವರ್ಮಾ ವಿರುದ್ಧ ಕಾಂಗ್ರೆಸ್ ರಜನೀಶ್ ಕಿಮ್ತಾ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ತನ್ನ 2017 ರ ಅಭ್ಯರ್ಥಿ ಸುಭಾಷ್ ಮಂಗಳಾಟೆಗೆ ಟಿಕೆಟ್ ನೀಡಲಿಲ್ಲ, ಅವರು ಈಗ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ನಾಳೆ ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ:

ಗುಜರಾತ್ ವಿಧಾನಸಭೆ ಚುನಾವಣೆ 2022ರ (Gujarat Assembly Elections) ಮತಗಳ ಎಣಿಕೆ ನಾಳೆ ಡಿಸೆಂಬರ್ 8 ರಂದು ನಡೆಯಲಿದೆ. ಒಟ್ಟು 183 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಪ್ರಸ್ತುತ ಚುನಾವಣೆಯಲ್ಲಿ ಬಿಜೆಪಿ(BJP), ಅದರ ಸಾಂಪ್ರದಾಯಿಕ ಸ್ಪರ್ಧಿ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಕಣದಲ್ಲಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿವೆ. ಇಲ್ಲಿ ಮೂರು ಪಕ್ಷಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ.

ನಾಳೆ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ:

ಈ ವರ್ಷ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿನ ಫಲಿತಾಂಶವು ‘ರಾಜ್’ (ಅಧಿಕಾರದಲ್ಲಿರುವ ಸರ್ಕಾರ) vs ‘ರಿವಾಜ್’ (ಸಾಂಪ್ರದಾಯಿಕ ಮತದಾನದ ಫಲಿತಾಂಶ)ಆಗಲಿದೆ . ಈ ವರ್ಷ, ಹಿಮಾಚಲ ಪ್ರದೇಶ ವಿಧಾನಸಭೆಗೆ ಕಳೆದ ತಿಂಗಳು ನವೆಂಬರ್ 12 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದಿತ್ತು. ಈ ವರ್ಷ ಅಂತಿಮ ಮತದಾನದ ಪ್ರಮಾಣ ಶೇ.74 ರಷ್ಟಿತ್ತು. ಇದು 2017 ರ ಅಂಕಿಅಂಶಗಳಿಗಿಂತ ಸ್ವಲ್ಪ ಕಡಿಮೆಯಾಗಿದೆ. ಈ ವರ್ಷ, ಡೂನ್ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇಕಡಾ 85.25 ಮತದಾನವಾಗಿದೆ. ಶಿಮ್ಲಾದಲ್ಲಿ ಅತೀ ಕಡಿಮೆ ಅಂದರೆ 62.53 ರಷ್ಟು ಮತದಾನವಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:34 pm, Wed, 7 December 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ