Rahul Gandhi: ಭಾರತದ ಹಣದುಬ್ಬರ, ನೋವಿಗೆ ಹಿಂದುತ್ವವಾದಿಗಳೇ ಕಾರಣ; ಅಮೇಥಿಯಲ್ಲಿ ರಾಹುಲ್ ಗಾಂಧಿ ಆಕ್ರೋಶ

2019ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ 50,000ಕ್ಕೂ ಹೆಚ್ಚು ಮತಗಳಿಂದ ಸೋಲುವವರೆಗೂ ಅಮೇಥಿ ಕಾಂಗ್ರೆಸ್ ಭದ್ರಕೋಟೆಯಾಗಿತ್ತು.

Rahul Gandhi: ಭಾರತದ ಹಣದುಬ್ಬರ, ನೋವಿಗೆ ಹಿಂದುತ್ವವಾದಿಗಳೇ ಕಾರಣ; ಅಮೇಥಿಯಲ್ಲಿ ರಾಹುಲ್ ಗಾಂಧಿ ಆಕ್ರೋಶ
ರಾಹುಲ್​ ಗಾಂಧಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 18, 2021 | 4:13 PM

ನವದೆಹಲಿ/ ಅಮೇಥಿ: ಚುನಾವಣಾ ಅಖಾಡ ಸಿದ್ಧವಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಅಮೇಥಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಈ ವೇಳೆ ಹಿಂದುತ್ವದ ವಿರುದ್ಧ ಟೀಕಾಪ್ರಹಾರ ನಡೆಸಿರುವ ಅವರು, ಭಾರತದಲ್ಲಿ ಹೆಚ್ಚುತ್ತಿರುವ ಹಣದುಬ್ಬರ, ನೋವು, ಹತಾಶೆಗೆಲ್ಲ ಹಿಂದುತ್ವವಾದಿಗಳೇ ನೇರ ಕಾರಣ ಎಂದು ಕಿಡಿ ಕಾರಿದ್ದಾರೆ. ಉತ್ತರ ಪ್ರದೇಶ ಕಾಂಗ್ರೆಸ್​ ಭದ್ರಕೋಟೆಯಾಗಿರುವ ಅಮೇಥಿಯಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಇಂದು ನಮ್ಮ ದೇಶದಲ್ಲಿ ನೋವು, ದುಃಖ ಹೆಚ್ಚಾಗಿದ್ದರೆ ಅದಕ್ಕೆ ಹಿಂದುತ್ವವಾದಿಗಳೇ ಕಾರಣ. ಇಂದು ಹಿಂದೂಗಳು ಮತ್ತು ಹಿಂದುತ್ವವಾದಿಗಳ ನಡುವೆ ಕದನವಾಗುತ್ತಿದೆ. ಹಿಂದೂಗಳು ಸತ್ಯಾಗ್ರಹವನ್ನು ನಂಬಿದರೆ, ಹಿಂದುತ್ವವಾದಿಗಳು ಕೇವಲ “ಸತ್ತಾಗ್ರಹ” (ರಾಜಕೀಯ ದುರಾಸೆ)ಯನ್ನು ನಂಬುತ್ತಾರೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಇಂದು ಅಮೇಥಿಗೆ ಆಗಮಿಸಿದ್ದಾರೆ. 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ಎರಡೂವರೆ ವರ್ಷಗಳ ನಂತರ ರಾಹುಲ್ ಗಾಂಧಿ ಅಮೇಥಿಗೆ ಭೇಟಿ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿಯು ಸತತ ಎರಡನೇ ಅವಧಿಗೆ ಅಧಿಕಾರಕ್ಕೇರಲು ಶ್ರಮಿಸುತ್ತಿರುವಾಗ ರಾಜ್ಯದಲ್ಲಿ ಕಾಂಗ್ರೆಸ್ ಕೂಡ ತಳವೂರಲು ಪ್ರಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸೋದರಿ ಪ್ರಿಯಾಂಕಾ ಗಾಂಧಿ ಜೊತೆಗೆ ಅಮೇಥಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಜನರಲ್ಲಿ ಈಗಿನ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶವಿದೆ. ಅವರ ಹೃದಯಗಳಲ್ಲಿ ಕಾಂಗ್ರೆಸ್​ಗೆ ಮೊದಲಿನಂತೆಯೇ ಜಾಗವಿದೆ. ಅನ್ಯಾಯದ ವಿರುದ್ಧ ನಾವು ಇನ್ನೂ ಒಂದಾಗಿದ್ದೇವೆ ಎಂದಿದ್ದಾರೆ.

2019ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ 50,000ಕ್ಕೂ ಹೆಚ್ಚು ಮತಗಳಿಂದ ಸೋಲುವವರೆಗೂ ಅಮೇಥಿ ಕಾಂಗ್ರೆಸ್ ಭದ್ರಕೋಟೆಯಾಗಿತ್ತು.

ಇದನ್ನೂ ಓದಿ: Rahul Gandhi Twitter: ರಾಹುಲ್ ಗಾಂಧಿ ಟ್ವಿಟ್ಟರ್ ಖಾತೆ ಮತ್ತೆ ಸಕ್ರಿಯ; ಸತ್ಯಮೇವ ಜಯತೇ ಎಂದ ಕಾಂಗ್ರೆಸ್

Rahul Gandhi: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್ ಖಾತೆ ತಾತ್ಕಾಲಿಕವಾಗಿ ಸ್ಥಗಿತ

Published On - 4:12 pm, Sat, 18 December 21

ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ