Karnataka Cabinet expansion: ಹಿರಿಯೂರು ಶಾಸಕ ಡಿ.ಸುಧಾಕರ್​ಗೆ ಎರಡನೇ ಬಾರಿ ಒಲಿದ ಮಂತ್ರಿಗಿರಿ

ಹಿರಿಯೂರು ಶಾಸಕ ಡಿ.ಸುಧಾಕರ್(D Sudhakar)​ಗೆ ಮಂತ್ರಿಗಿರಿ ಒಲಿದಿದ್ದು, ಇಂದು (ಮೇ.27) ಪ್ರಮಾಣ ವಚನ ಸ್ವೀಕರಿಸಿದರು. ನಾಲ್ಕು ಬಾರಿ ಶಾಸಕರಾಗಿರುವ ಜೈನ ಸಮುದಾಯದ ಏಕೈಕ ಶಾಸಕರ ಕುರಿತು ಮಾಹಿತಿ ಇಲ್ಲಿದೆ.

Karnataka Cabinet expansion: ಹಿರಿಯೂರು ಶಾಸಕ ಡಿ.ಸುಧಾಕರ್​ಗೆ ಎರಡನೇ ಬಾರಿ ಒಲಿದ ಮಂತ್ರಿಗಿರಿ
ಡಿ ಸುಧಾಕರ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on:May 27, 2023 | 1:17 PM

ಚಿತ್ರದುರ್ಗ: ಹಿರಿಯೂರು ಶಾಸಕ ಡಿ.ಸುಧಾಕರ್(D Sudhakar)​ಗೆ ಮಂತ್ರಿಗಿರಿ ಒಲಿದಿದ್ದು, ಇಂದು (ಮೇ.27) ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶದಲ್ಲಿ 30322 ಮತಗಳ ಅಂತದಿಂದ 2018ರಲ್ಲಿ ಮೊದಲಬಾರಿ ಬಿಜೆಪಿಯಿಂದ ಸ್ಪರ್ಧಿಸಿ 12,857 ಮತಗಳ ಅಂತರದಿಂದ ಗೆದ್ದಿದ್ದ ಕೆ ಪೂರ್ಣಿಮಾ ಶ್ರೀನಿವಾಸ್​ರವರ ವಿರುದ್ಧ ಗೆಲುವು ಸಾಧಿಸಿದ್ದರು. ಇನ್ನು ಜೈನ ಸಮುದಾಯಕ್ಕೆ ಸೇರಿದ ಕಾಂಗ್ರೆಸ್ ಶಾಸಕ ಡಿ.ಸುಧಾಕರ್ ಅವರು ನಾಲ್ಕು ಬಾರಿ ಶಾಸಕರಾಗಿದ್ದವರು. ಇವರು 2008ರಲ್ಲಿ ಪಕ್ಷೇತರರಾಗಿ ಗೆದ್ದು ಬಿಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದರು. ಇಂದು ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಉಪ ಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್​ ಆಪ್ತ ಆಗಿರುವ ಕಾರಣ ಉತ್ತಮ ಖಾತೆಯ ನಿರೀಕ್ಷೆಯಿದೆ ಎಂದಿದ್ದಾರೆ.

ಡಿ.ಸುಧಾಕರ್​ ಸಚಿವ ಸ್ಥಾನಕ್ಕೆ ಆಗ್ರಹಿಸಿ ಶಕ್ತಿ ಪ್ರದರ್ಶನ ಮಾಡಿದ್ದ ಬೆಂಬಲಿಗರು

ನಾಲ್ಕು ಬಾರಿ ಶಾಸಕರಾಗಿರುವ ಜೈನ ಸಮುದಾಯದ ಏಕೈಕ ಪ್ರತಿನಿಧಿ ಡಿ.ಸುಧಾಕರ್​ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಇದೇ ಮೇ.24 ರಂದು ಬೆಂಗಳೂರಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮನೆಗಳ ಎದುರು ಬ್ಲಾಕ್​ ಕಾಂಗ್ರೆಸ್​ನ ನೂರಾರು ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು.

ಇದನ್ನೂ ಓದಿ:ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಡಬಲ್ ಖುಷಿ; ಸಚಿವ ಸ್ಥಾನ ದಕ್ಕಿದ ದಿನವೇ ಅಜ್ಜಿಯಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಇನ್ನು ಈ ವೇಳೆ ಮಾತನಾಡಿದ್ದ ಬ್ಲಾಕ್​ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್​ ‘ನಾವು ಸುಧಾಕರ್​ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತಿಲ್ಲ. ಬದಲಿಗೆ ಪಕ್ಷದ ವರಿಷ್ಟರಿಗೆ ಸಚಿವ ಸ್ಥಾನ ನೀಡಬೇಕಿರುವ ಅನಿವಾರ್ಯತೆ ಬಗ್ಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದ್ದೇವೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಇದಕ್ಕೆ ಸ್ಪಂದಿಸಬೇಕು. 2018ರಿಂದ ಜಿಲ್ಲೆಯಲ್ಲಿ ಕೇವಲ ಒಬ್ಬರೆ ಶಾಸಕರಾಗಿದ್ದರು, ಈ ಬಾರಿ ಐದು ಜನ ಆಯ್ಕೆಯಾಗಿದ್ದಾರೆ. ಈ ಹಿಂದೆ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯ ನಿರ್ವಹಿಸಿದ ಸುಧಾಕರ್​ ಅವರು ಇದಕ್ಕೆ ಅರ್ಹರು, ಪಕ್ಷ ಈ ವಿಷಯವನ್ನ ಗಂಭೀರವಾಗಿ ಪರಿಗಣಿಸಬೇಕೆಂದಿದ್ದರು. ಅದರಂತೆ ಪಕ್ಷ ಇದೀಗ ಇವರಿಗೆ ಸಚಿವ ಸ್ಥಾನ ನೀಡಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:42 pm, Sat, 27 May 23

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ