ನಾವು ಗಟ್ಟಿಯಾಗಿದ್ದೇವೆ, ಸರ್ಕಾರ ಪತನವಾಗುವುದಿಲ್ಲ: ಕುಮಾರಸ್ವಾಮಿ ಹೇಳಿಕೆಗೆ ಹೆಚ್​ಕೆ ಪಾಟೀಲ್ ತಿರುಗೇಟು

| Updated By: Rakesh Nayak Manchi

Updated on: Dec 10, 2023 | 6:08 PM

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಚಿವ ಹೆಚ್​ಕೆ ಪಾಟೀಲ್, ನಾವು ಗಟ್ಟಿಯಾಗಿದ್ದೇವೆ. ನಮ್ಮ ಸರ್ಕಾರ ಪತನವಾಗುವುದಿಲ್ಲ ಎಂದು ಹೇಳಿದ್ದಾರೆ. ಅಧಿವೇಶನದ ಸಮಯದಲ್ಲಿ ಹೇಳಿಕೆ ನೀಡುವ ಮೂಲಕ ಸರ್ಕಾರವನ್ನು ಅಲುಗಾಡಿಸಲು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಾವು ಗಟ್ಟಿಯಾಗಿದ್ದೇವೆ, ಸರ್ಕಾರ ಪತನವಾಗುವುದಿಲ್ಲ: ಕುಮಾರಸ್ವಾಮಿ ಹೇಳಿಕೆಗೆ ಹೆಚ್​ಕೆ ಪಾಟೀಲ್ ತಿರುಗೇಟು
ಹೆಚ್​ಕೆ ಪಾಟೀಲ್
Follow us on

ಮೈಸೂರು, ಡಿ.10: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗುವುದಿಲ್ಲ ಎಂದು ಹೇಳುವ ಮೂಲಕ ಸರ್ಕಾರ ಪತನದ ಬಗ್ಗೆ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ (H.D. Kumaraswamy) ನೀಡಿದ ಹೇಳಿಕೆಗೆ ಸಚಿವ ಹೆಚ್.​ಕೆ. ಪಾಟೀಲ್ (H.K. Patil) ತಿರುಗೇಟು ನೀಡಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ನಾವು ಗಟ್ಟಿಯಾಗಿದ್ದೇವೆ, ಹೀಗಾಗಿ ನಮ್ಮ ಸರ್ಕಾರ ಪತನವಾಗುವುದಿಲ್ಲ ಎಂದರು.

ಹೆಚ್​.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಈಗ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಹೇಳಿಕೆ ನೀಡುವ ಮೂಲಕ ಸರ್ಕಾರವನ್ನು ಅಲುಗಾಡಿಸಲು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಎಂಎಲ್​ಸಿ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹೆಚ್​ಕೆ ಪಾಟೀಲ್, ಎಂಎಲ್​ಸಿ ಹರಿಪ್ರಸಾದ್ ನೀಡಿರುವ ಹೇಳಿಕೆಯನ್ನು ನಾನು ನೋಡಿಲ್ಲ. ಕೆಲವೊಮ್ಮೆ ಮಾಧ್ಯಮಗಳೇ ಇಂತಹ ವಿಚಾರವನ್ನ ಪ್ರಸ್ತಾಪ ಮಾಡುತ್ತವೆ. ಇದು ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದು ಹೇಳುವ ಮೂಲಕ ಮಾಧ್ಯಮಗಳತ್ತ ಬೊಟ್ಟು ಮಾಡಿದರು.

ಇದನ್ನೂ ಓದಿ: ಬೆಳಗಾವಿ ಅಧಿವೇಶನ: ಕುಮಾರಸ್ವಾಮಿಯ ಎಡವಟ್ಟಿನಿಂದ ಅವರಣ್ಣ ರೇವಣ್ಣ ತೀವ್ರ ನೊಂದುಕೊಂಡರು!

ರಾಜ್ಯದ ಕೆಲವೆಡೆ ವಕೀಲರ ಮೇಲಿನ ಹಲ್ಲೆ ವಿಚಾರವಾಗಿ ಮಾತನಾಡಿದ ಅವರು, ವಕೀಲರ ರಕ್ಷಣೆಗೆ ಈಗಾಗಲೇ ಮಸೂದೆ ಸಿದ್ಧಪಡಿಸಲಾಗಿದೆ. ವಾದ ಪ್ರತಿವಾದಗಳು ನಡೆಯುತ್ತಿವೆ, ವಕೀಲರ ರಕ್ಷಣೆಗೆ ಸಿದ್ಧರಿದ್ದೇವೆ. ಮುಖ್ಯಮಂತ್ರಿ ಜೊತೆ ಚರ್ಚಿಸಿ ವಕೀಲರ ಸಂರಕ್ಷಣೆ ಕಾಯ್ದೆ ಜಾರಿ ಮಾಡುತ್ತೇವೆ ಎಂದರು.

ಸಾಂಸ್ಕೃತಿಕ ನಗರಿ ಮೈಸೂರು ಪ್ರವಾಸಿ ತಾಣಕ್ಕೆ ಹೆಸರುವಾಸಿಯಾಗಿದೆ. ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ಮೈಸೂರು ಕೆಲಸ ಮಾಡಿದೆ. ಮೈಸೂರು ಬ್ರ್ಯಾಂಡ್ ಲೋಗೋ ಸಹ ಅನಾವರಣ ಮಾಡುತ್ತಿದ್ದೇವೆ. ಮೈಸೂರಿನ ಪಾರಂಪರಿಕ ಕಟ್ಟಡಗಳನ್ನು ರಕ್ಷಿಸುವ ಜವಾಬ್ದಾರಿ ನಮ್ಮದು. ಈಗಾಗಲೇ ಪುರಾತತ್ವ ಇಲಾಖೆಯಿಂದ ಕಟ್ಟಡಗಳ ಸಮೀಕ್ಷೆ ಮಾಡಲಾಗುತ್ತಿದೆ. ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆ ಕೆಲಸ ಮಾಡುತ್ತಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ