ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ದಿಟ್ಟ ಕ್ರಮ: ಬೆಂಗಳೂರಿನಲ್ಲಿ ಹೈ ರೆಸ್ಯೂಲೇಷನ್ ಕ್ಯಾಮೆರಾ ಅಳವಡಿಕೆ

ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ಮುಂದಾಗಿದ್ದು, ನಗರದ ಜನಸಂದಣಿ, ಇಂಟರ್ ಸೆಕ್ಷನ್, ಮಹಿಳೆಯರು ಓಡಾಡುವ ಸ್ಥಳಗಳು ಸೇರಿದಂತೆ ಹಲವು ಕಡೆ 7 ಸಾವಿರ ಹೈರೆಸಲ್ಯೂಷನ್​ ಕ್ಯಾಮರಾ ಅಳವಡಿಸಲಾಗಿದೆ. ಜತೆಗೆ ಬೆಂಗಳೂರಿನ 30 ಕಡೆ ಸೇಫ್ಟಿ ಐಲ್ಯಾಂಡ್​​ ಓಪನ್​ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದರು.

ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ದಿಟ್ಟ ಕ್ರಮ: ಬೆಂಗಳೂರಿನಲ್ಲಿ ಹೈ ರೆಸ್ಯೂಲೇಷನ್ ಕ್ಯಾಮೆರಾ ಅಳವಡಿಕೆ
ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 16, 2023 | 4:04 PM

ಬೆಂಗಳೂರು: ನಗರದಲ್ಲಿ ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ದಿಟ್ಟ ಕ್ರಮಕ್ಕೆ ಮುಂದಾಗಿದ್ದು, ಜನಸಂದಣಿ, ಇಂಟರ್ ಸೆಕ್ಷನ್, ಮಹಿಳೆಯರು ಓಡಾಡುವ ಸ್ಥಳಗಳು ಸೇರಿದಂತೆ ಹಲವು ಕಡೆ 7 ಸಾವಿರ ಹೈ ರೆಸಲ್ಯೂಷನ್​ ಕ್ಯಾಮರಾ ಅಳವಡಿಸಲಾಗಿದೆ. 80 ಠಾಣೆಗಳಲ್ಲಿ ಕ್ಯಾಮರಾ ದೃಶ್ಯಾವಳಿ ನೋಡುವುದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ (G Parameshwara) ಹೇಳಿದರು. ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ಬೆಂಗಳೂರಿನ 30 ಕಡೆ ಸೇಫ್ಟಿ ಐಲ್ಯಾಂಡ್​​ ಓಪನ್​ ಮಾಡಲಾಗಿದೆ. ಸೇಫ್ಟಿ ಐಲ್ಯಾಂಡ್​​​ನಲ್ಲಿ ಬಟನ್​​ ಒತ್ತಿದ್ರೆ ಪೊಲೀಸರಿಗೆ ಮಾಹಿತಿ ಬರುತ್ತೆ. ಕೆಲವೇ ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಬಂದು ರಕ್ಷಣೆ ಮಾಡುತ್ತಾರೆ ಎಂದು ತಿಳಿಸಿದರು.

ಠಾಣೆಯಲ್ಲಿ ದೂರು ಸ್ವೀಕರಿಸಲ್ಲ ಎಂಬ ದೂರು ಬರಬಾರದು

ಪೊಲೀಸ್ ಇಲಾಖೆ ಜನಸ್ನೇಹಿ ಆಗಬೇಕು. ಪೊಲೀಸ್​​ ಸಿಬ್ಬಂದಿಗೆ ಹಿರಿಯ ಅಧಿಕಾರಿಗಳು ತಿಳಿಹೇಳಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. ಠಾಣೆಯಲ್ಲಿ ದೂರು ಸ್ವೀಕರಿಸಲ್ಲ ಎಂಬ ದೂರುಗಳು ಬರಬಾರದು. ನಾನು ಕೂಡ ಠಾಣೆಗಳಿಗೆ ಭೇಟಿ ನೀಡುತ್ತೇನೆ. ಸರ್ಕಾರ ಪೊಲೀಸರಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ ಎಂದು ಹೇಳಿದರು.

ಇದನ್ನೂ ಓದಿ: ಮುಸ್ಲಿಮರ ಮತ ಬ್ಯಾಂಕ್ ಭದ್ರಗೊಳಿಸಲು ಪಠ್ಯಕ್ಕೆ ಕೈಹಾಕಿದ್ದಾರೆ: ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಆರೋಪ

ಮೂರು ತಿಂಗಳಲ್ಲಿ ಟ್ರಾಫಿಕ್ ಸಮಸ್ಯೆಗೆ ಮುಕ್ತಿ

ಟ್ರಾಫಿಕ್ ವಿಚಾರವಾಗಿ ಮಾತನಾಡಿ, ಬೆಂಗಳೂರು ಟ್ರಾಫಿಕ್​ ಕೆಟ್ಟದ್ದು ಎಂಬ ವಿಚಾರ ಇದೆ. ಈ ಅಪಕೀರ್ತಿ ತೆಗೆದುಹಾಕಬೇಕೆಂದು ನಿರ್ಧಾರ ಮಾಡಿದ್ದೇವೆ. ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಟ್ರಾಫಿಕ್​ನ ಸಿಬ್ಬಂದಿಗಳಿಂದ ಹಿರಿಯ ಅಧಿಕಾರಿಗಳು ಫೀಲ್ಡ್​​ನಲ್ಲಿರಬೇಕು. ಬೆಳಿಗ್ಗೆ 2 ಗಂಟೆ, ಸಂಜೆ 2 ಗಂಟೆ ಫೀಲ್ಡ್​​ನಲ್ಲಿರಬೇಕು. ದೂರು ಬಂದ ಏರಿಯಾದ ಡಿಸಿಪಿರವರೇ ರೆಸ್ಪಾಂಡ್ ತೆಗೆದುಕೊಳ್ಳಬೇಕು.

ಠಾಣೆಯಿಂದಲೂ ಸಹ ಅಡಿಷನಲ್ ಸಿಬ್ಬಂದಿಗಳನ್ನು ಸಪ್ಲಿಮೆಂಟ್ ಮಾಡಲಾಗುವುದು. ಸಿವಿಲ್​ ನಂ 10 ಸಿಬ್ಬಂದಿಗಳನ್ನು ನೀಡಲಾಗುತ್ತೆ. ಇನ್ನು ಮೂರು ತಿಂಗಳಲ್ಲಿ ಟ್ರಾಫಿಕ್ ದೂರು ಇರಬಾರದು. ಬೆಂಗಳೂರು ಟ್ರಾಫಿಕ್ ಸಮಸ್ಯೆಯಿಂದ ಮುಕ್ತಿ ಪಡೆಯಬೇಕು ಮತ್ತು ಆ ಕಳಂಕ ಹೊಗಬೇಕು ಎಂದರು.

ಇದನ್ನೂ ಓದಿ: 10 ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ: ಯಾರು ಎಲ್ಲಿಗೆ? ಇಲ್ಲಿದೆ ಪಟ್ಟಿ

ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಇತ್ತು

ಮತಾಂತರ ನಿಷೇಧ ಕಾಯ್ದೆ ರದ್ದತಿಗೆ ಸರ್ಕಾರ ನಿರ್ಧಾರ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆ ಕಾನೂನು ವಿರುದ್ಧದ ಕೆಲವೊಂದು ಮುನ್ನಡೆಗಳು ಇತ್ತು. ಸಾಂವಿಧಾನಿಕವಾಗಿ ಎನೆಲ್ಲಾ ಮಾಡಬೇಕೋ ಅದನ್ನು ಮಾಡುತ್ತೇವೆ. ಈ ಹಿಂದೆಯೂ ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಇತ್ತು ಎಂದರು.

ಇಬ್ಬರು ಆರೋಪಿಗಳು ಅರೆಸ್ಟ್, ಮತ್ತೋರ್ವನಿಗಾಗಿ ಹುಡುಕಾಟ

ಮರಳು ಸಾಗಣೆ ಟ್ರ್ಯಾಕ್ಟರ್​ ಹರಿಸಿ ಹೆಡ್​ ಕಾನ್ಸ್​ಟೇಬಲ್​ ಹತ್ಯೆ ವಿಚಾರವಾಗಿ ಮಾತನಾಡಿ, ಈಗಾಗಲೇ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಮತ್ತೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಭೀಮಾತೀರದಲ್ಲಿ ಮೊದಲಿನಿಂದಲೂ ಈ ದಂಧೆ ನಡೆಯುತ್ತಿದೆ. ಡಿಸಿ ಸಹಕಾರದೊಂದಿಗೆ ದಂಧೆಗೆ ಕಡಿವಾಣ ಹಾಕಲಾಗುವುದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:40 pm, Fri, 16 June 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ