AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಬಿಜೆಪಿಗೆ ಕರೆದುಕೊಂಡು ಹೋದವರೇ ಸಿ.ಎಂ.ಉದಾಸಿ: ಬಸವರಾಜ ಬೊಮ್ಮಾಯಿ ನುಡಿನಮನ

ಕರ್ನಾಟಕ ರಾಜಕಾರಣದಲ್ಲಿ ಸುದೀರ್ಘ ಅವಧಿಗೆ ಗ್ರಾಮೀಣ ಜನರ ದನಿಯಾಗಿದ್ದ ದಿವಂಗತ ಸಿ.ಎಂ.ಉದಾಸಿ ಅವರ ವ್ಯಕ್ತಿತ್ವದ ಅಪರೂಪದ ಮುಖಗಳನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ಲೇಖನದಲ್ಲಿ ಪರಿಚಯಿಸಿದ್ದಾರೆ.

ನನ್ನನ್ನು ಬಿಜೆಪಿಗೆ ಕರೆದುಕೊಂಡು ಹೋದವರೇ ಸಿ.ಎಂ.ಉದಾಸಿ: ಬಸವರಾಜ ಬೊಮ್ಮಾಯಿ ನುಡಿನಮನ
ಸಿ.ಎಂ.ಉದಾಸಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 09, 2021 | 9:56 PM

ಕರ್ನಾಟಕ ರಾಜಕಾರಣದಲ್ಲಿ ಸುದೀರ್ಘ ಅವಧಿಗೆ ಗ್ರಾಮೀಣ ಜನರ ದನಿಯಾಗಿದ್ದ ದಿವಂಗತ ಸಿ.ಎಂ.ಉದಾಸಿ ಅವರ ವ್ಯಕ್ತಿತ್ವದ ಅಪರೂಪದ ಮುಖಗಳನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ಲೇಖನದಲ್ಲಿ ಪರಿಚಯಿಸಿದ್ದಾರೆ. ನನ್ನ ತಂದೆಯ ನಿಧನದ ನಂತರ ಉದಾಸಿ ನನಗೆ ಗಾಢ್ ಫಾದರ್ ಆದರು ಎಂದು ನೆನಪಿಸಿಕೊಳ್ಳುವ ಬೊಮ್ಮಾಯಿ, ಉದಾಸಿ ಅವರಿಗೆ ಕೃಷಿವಿಮೆಯ ಬಗ್ಗೆ ಜ್ಞಾನದ ಬಗ್ಗೆ ಇಣುಕುನೋಟ ನೀಡಿದ್ದಾರೆ.

ಆಗ ನಾನು ಜನತಾ ಪರಿವಾರದಲ್ಲಿ ಇದ್ದೆ. ಸಿ.ಎಂ.ಉದಾಸಿ ಒಂದು ದಿನ ನನ್ನನ್ನು ಹಾನಗಲ್ಲಿಗೆ ಕರೆಯಿಸಿಕೊಂಡರು. ಅಂದು ಅವರ ಹುಟ್ಟುಹಬ್ಬ. ಇಡೀ ದಿನ ಅವರು ನನ್ನನ್ನು ತಮ್ಮ ಜೊತೆ ಇರಿಸಿಕೊಂಡಿದ್ದರು. ಮರುದಿನ ಬೆಂಗಳೂರಿಗೆ ಕರೆದುಕೊಂಡು ಹೋದರು. ಬಿಜೆಪಿ ರಾಷ್ಟ್ರೀಯ ಮುಖಂಡ ರಾಜನಾಥ್ ಸಿಂಗ್ ಹಾಗೂ ರಾಜ್ಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿಸಿದರು.‌ ಭಾರತೀಯ ಜನತಾ ಪಕ್ಷ ಸೇರುವಂತೆ ಸಲಹೆ ನೀಡಿದರು.

ಆದರೆ ಆಗ ಬಿಜೆಪಿ ಸೇರಲು ಮಾನಸಿಕವಾಗಿ ನಾನು ಅಷ್ಟು ಸಿದ್ಧವಿರಲಿಲ್ಲ. ಆದರೂ ಆಗ ಅವರು ಬಿಜೆಪಿಗೆ ಬರುವಂತೆ ನನ್ನ ಮನಸ್ಸು ಒಲಿಸಿದರು. ಹೀಗಾಗಿ ನಾನು ಬಿಜೆಪಿಗೆ ಬರಲು ಸಿ.ಎಂ.ಉದಾಸಿ ಅವರೇ ಕಾರಣೀಭೂತ ವ್ಯಕ್ತಿ ಆದರು. ನನ್ನ ತಂದೆ ಎಸ್.ಆರ್.ಬೊಮ್ಮಾಯಿ ತೀರಿಕೊಂಡ ನಂತರ ಸಿ.ಎಂ.ಉದಾಸಿ ಅವರೇ ನನಗೆ ಗಾಡ್ ಫಾದರ್ ಆದರು.

ಸಿಎಂ ಉದಾಸಿ ಅವರು ಇಷ್ಟು ಬೇಗ ನಮ್ಮನ್ನು ಆಗಲುತ್ತಾರೆ ಅಂದುಕೊಂಡಿರಲಿಲ್ಲ. ಮೊದಲ ಬಾರಿಗೆ ಅವರು ಇಲ್ಲದ ಸಂದರ್ಭದಲ್ಲಿ ಹಾನಗಲ್ಲಿಗೆ ಹೋದಾಗ ನನಗೆ ನನ್ನ ಭಾವನೆಗಳನ್ನು ತಡೆಯಲು ಆಗಲಿಲ್ಲ. ಅವರ ನಿಧನದಿಂದ ವೈಯಕ್ತಿಕವಾಗಿ ನನಗೆ ತುಂಬಲಾರದ ಹಾನಿಯಾಗಿದೆ. ಅವರ ಮತ್ತು ನನ್ನ ಸಂಬಂಧ ಬಹಳ ಅನ್ಯೂನ್ಯವಾಗಿತ್ತು. ಅವರ ನಿಧನದಿಂದಾಗಿ ಒಬ್ಬ ಮಾರ್ಗದರ್ಶಕ ಹಾಗೂ ತಂದೆಯನ್ನು ಕಳೆದುಕೊಂಡ ಭಾವ ನನ್ನಲ್ಲಿ ಬರುತ್ತಿದೆ.

ಉದಾಸಿ ಅವರದು ಹೋರಾಟದ ಗುಣ. ತಮ್ಮ ವಿಚಾರಧಾರೆಗಳೊಂದಿಗೆ ಅವರು ಎಂದೂ ರಾಜಿ ಆಗಲಿಲ್ಲ. ಯಾವುದಾದರೂ ವಿಷಯಕ್ಕೆ ಅವರು ಬಿಗಿ ನಿಲುವು ತೆಗೆದುಕೊಂಡರೆ, ಅದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಧೀಮಂತ ನಾಯಕ. ಹಾವೇರಿಯನ್ನು ಜಿಲ್ಲೆಯನ್ನಾಗಿ ಮಾಡಬೇಕೆಂಬ ಹೋರಾಟದಲ್ಲಿ ಅವರದು ಬಹುದೊಡ್ಡ ಪಾತ್ರ. ಜಿಲ್ಲಾ ಹೋರಾಟಕ್ಕೆ ಆಧಾರವಾಗಿದ್ದರು ಅವರು‌. ಹೀಗಾಗಿ ಬಹುದಿನಗಳ ನಮ್ಮೆಲ್ಲರ ಕನಸು ಈಡೇರಿಸಿದ ಕೀರ್ತಿ ಉದಾಸಿ ಅವರಿಗೆ ಸಲ್ಲುತ್ತದೆ.

ಬೆಳೆ ವಿಮೆ ಕುರಿತು ಸಿ.ಎಂ.ಉದಾಸಿ ಅವರು ಅಪಾರ ಜ್ಞಾನವನ್ನು ಹೊಂದಿದ್ದರು. ಹಾವೇರಿ ಜಿಲ್ಲೆಯ ರೈತರಿಗೆ ಬೆಳೆ ವಿಮೆಯ ಲಾಭವನ್ನು ಮಾಡಿಕೊಡುವ ಕೆಲಸವನ್ನು ಅವರು ಪ್ರಾಮಾಣಿಕವಾಗಿ ಮಾಡಿದ್ದಾರೆ. ಕೃಷಿ ಬಗ್ಗೆ ಅವರು ಅಪಾರವಾದ ಆಸಕ್ತಿಯನ್ನು ಹೊಂದಿದ್ದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಲೋಕೋಪಯೋಗಿ ಇಲಾಖೆ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಲೋಕೋಪಯೋಗಿ ಸಚಿವರಾಗಿದ್ದ ಉದಾಸಿ ಅವರು ರಾಜ್ಯದಲ್ಲಿ ರಸ್ತೆ ನಿರ್ಮಾಣದಲ್ಲಿ ಕ್ರಾಂತಿಯನ್ನೇ ಮಾಡಿದ್ದಾರೆ.

ಅಂತಹ ಮೇಧಾವಿ, ಮುತ್ಸದ್ದಿ, ದೂರದೃಷ್ಟಿತ್ವವುಳ್ಳ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದೇವೆ. ಅವರು ಸಾಕಷ್ಟು ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ. ಆ ಆದರ್ಶಗಳನ್ನು ನಾವೆಲ್ಲಾ ಪಾಲಿಸಿಕೊಂಡು ಹೋಗಬೇಕಾಗಿದೆ.

(ಈ ಲೇಖನ ಬರೆದಿರುವ ಬಸವರಾಜ ಬೊಮ್ಮಾಯಿ ಕರ್ನಾಟಕ ಸರ್ಕಾರದ ಗೃಹ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವರು)

Home Minister Basavaraj Bommai Remembers Leader CM Udasi who Died Recently

ಇದನ್ನೂ ಓದಿ: CM Udasi Death: ಮಾಜಿ ಸಚಿವ, ಹಾನಗಲ್ ಶಾಸಕ ಸಿ ಎಂ ಉದಾಸಿ ನಿಧನ

ಇದನ್ನೂ ಓದಿ: CM Udasi Funeral: ಸಿ.ಎಂ.ಉದಾಸಿಯವರ ಮಗನಾಗಿ ಜನಿಸಿದ್ದು ನನ್ನ ಪುಣ್ಯ: ಸಂಸದ ಶಿವಕುಮಾರ್ ಉದಾಸಿ

Published On - 9:55 pm, Wed, 9 June 21

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ