ಜುಲೈ ತಿಂಗಳ ಪೊಲೀಸ್ ಇಲಾಖೆ ಸಿಬ್ಬಂದಿ ವೇತನ ವಿಳಂಬ: ಸ್ಪಷ್ಟನೆ ನೀಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್​

| Updated By: ಗಂಗಾಧರ​ ಬ. ಸಾಬೋಜಿ

Updated on: Aug 03, 2023 | 3:59 PM

ಜುಲೈ ತಿಂಗಳ ಪೊಲೀಸ್ ಇಲಾಖೆ ಸಿಬ್ಬಂದಿ ವೇತನ ವಿಳಂಬ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಆಡಳಿತ ವ್ಯವಸ್ಥೆ ಹಾಗೂ ಬೇರೆ ಬೇರೆ ಕಾರಣಗಳಿಂದ ವೇತನ ನಿಲ್ಲಿಸಲಾಗುತ್ತಿದೆ. ನೌಕರರ ಸಂಬಳ‌ ತಡೆದು ಗ್ಯಾರಂಟಿ ಯೋಜನೆ ನೀಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಜುಲೈ ತಿಂಗಳ ಪೊಲೀಸ್ ಇಲಾಖೆ ಸಿಬ್ಬಂದಿ ವೇತನ ವಿಳಂಬ: ಸ್ಪಷ್ಟನೆ ನೀಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್​
ಗೃಹ ಸಚಿವ ಡಾ.ಜಿ.ಪರಮೇಶ್ವರ್
Follow us on

ದೆಹಲಿ, ಆಗಸ್ಟ್​ 03: ಆಡಳಿತ ವ್ಯವಸ್ಥೆ ಹಾಗೂ ಬೇರೆ ಬೇರೆ ಕಾರಣಗಳಿಂದ ವೇತನ ನಿಲ್ಲಿಸಲಾಗುತ್ತಿದೆ. ನೌಕರರ ಸಂಬಳ‌ ತಡೆದು ಗ್ಯಾರಂಟಿ ಯೋಜನೆ ನೀಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwara) ಹೇಳಿದರು. ಜುಲೈ ತಿಂಗಳ ಪೊಲೀಸ್ ಇಲಾಖೆ ಸಿಬ್ಬಂದಿ ವೇತನ ವಿಳಂಬ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೋ ಕಾರಣಕ್ಕೆ ಯಾದಗಿರಿ ಎಸ್​ಪಿ ಸಂಬಳ ನಿಲ್ಲಿಸಿರಬಹುದು ಎಂದಿದ್ದಾರೆ.

ಗ್ಯಾರಂಟಿ ಯೋಜನೆಗೆ ಬೇಕಾದ ಹಣವನ್ನು ಬಜೆಟ್​ನಲ್ಲಿ ಇಟ್ಟಿದ್ದಾರೆ. ಯೋಜನೆಗಾಗಿ ಪೊಲೀಸ್ ಸಿಬ್ಬಂದಿ ಸಂಬಳ ನಿಲ್ಲಿಸಿಲ್ಲ. ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ತಡೆ ನೀಡಲಾಗಿದೆ. ಸ್ಥಳೀಯ ಶಾಸಕರು, ನಾಯಕರಿಂದಲೂ ಕೆಲವು ಆಕ್ಷೇಪ ಬಂದಿತ್ತು. ಹೀಗಾಗಿ ತಡೆಹಿಡಿಯಲಾಗಿದೆ. ಎಚ್ಚರಿಕೆಯಿಂದ ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಆಡಳಿತವೆಂಬುದು ತಮಾಷೆಯಾಗಿದೆ; ಬಿಜೆಪಿ ವ್ಯಂಗ್ಯ, ಕಾರಣ ಇಲ್ಲಿದೆ

ಸಚಿವ ನಿತಿನ್​​ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸಚಿವ ನಿತಿನ್​​ ಗಡ್ಕರಿ ಅವರನ್ನು ಇಂದು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದು, ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​ ವೇ ಸಮಸ್ಯೆ ಬಗ್ಗೆ ಚರ್ಚೆ ಮಾಡಿದ್ದಾರೆ. ಅಪಘಾತ ಪ್ರಕರಣ ಹೆಚ್ಚಳ ಕುರಿತು ಮಾಹಿತಿ ನೀಡಿದ್ದಾರೆ. ಶಿರಾಡಿಘಾಟ್​ ಸುರಂಗ ಮಾರ್ಗ ನಿರ್ಮಾಣದ ಬಗ್ಗೆಯೂ ಪ್ರಸ್ತಾಪ ಮಾಡಿದ್ದು, ಹೆದ್ದಾರಿಯಲ್ಲಿನ ಲೋಪ ದೋಷ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: Siddaramaiah Meets PM Modi: ಮೋದಿ ಭೇಟಿಯಾಗಿ ವಿಶೇಷ ಉಡುಗೊರೆ ನೀಡಿದ ಸಿದ್ದರಾಮಯ್ಯ, ಇಲ್ಲಿವೆ ಫೋಟೋಸ್

ತುಂಗಭದ್ರಾ ನದಿ ನೀರು ಬಿಡಲು ಮನವಿ ಮಾಡಲಾಗಿದೆ: ಡಿ.ಕೆ.ಶಿವಕುಮಾರ್​

ದೆಹಲಿಯ ಕರ್ನಾಟಕ ಭವನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್​ ಮಾತನಾಡಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ತುಂಗಭದ್ರಾ ನದಿಗೆ ನೀರು ಬಿಡುವಂತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಮನವಿ ಮಾಡುತ್ತಿದ್ದಾರೆ. ತುಂಗಭದ್ರಾ ಸಲಹಾ ಸಮಿತಿ ಅಧ್ಯಕ್ಷರಾಗಿ ಶಿವರಾಜ ತಂಗಡಗಿ ಆಯ್ಕೆ ಬಗ್ಗೆ ಆದೇಶ ಹೊರಡಿಸಲಿದ್ದೇವೆ ಎಂದರು.

ಜಲಾಶಯದಿಂದ 5,500 ಕ್ಯೂಸೆಕ್ ನೀರು ಬಿಡಲು ಸೂಚಿಸಿದೆ. ಸರ್ಕಾರ ನೀರು ಬಿಡಲು ಆರಂಭಿಕ ಅನುಮತಿಯನ್ನು ನೀಡಿದೆ. ಮುಂದಿನ ಹಂತದಲ್ಲಿ ಚರ್ಚಿಸಿ ನೀರು ಬಿಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:48 pm, Thu, 3 August 23