ಡಿಕೆ ಶಿವಕುಮಾರ್ ಆಪ್ತ ಹೆಚ್ಎಸ್ ಮಂಜುನಾಥ್ ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ
ಲೋಕಸಭಾ ಚುನಾವಣೆಗೆ ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನಲ್ಲಿ ಮೇಜರ್ ಸರ್ಜರಿ ನಡೆದಿದೆ. ರಾಜ್ಯ ಯುವ ಕಾಂಗ್ರೆಸ್ನ ನೂತನ ಕಾರ್ಯಾಧ್ಯಕ್ಷರಾಗಿ ಹೆಚ್.ಎಸ್.ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು, ಫೆಬ್ರವರಿ 21: ಲೋಕಸಭಾ ಚುನಾವಣೆಗೆ (Lok Sabha Election) ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನಲ್ಲಿ (Karnataka Pradesh Youth Congress) ಮೇಜರ್ ಸರ್ಜರಿ ನಡೆದಿದೆ. ರಾಜ್ಯ ಯುವ ಕಾಂಗ್ರೆಸ್ನ ನೂತನ ಕಾರ್ಯಾಧ್ಯಕ್ಷರಾಗಿ ಹೆಚ್.ಎಸ್.ಮಂಜುನಾಥ್ (HC Manjunath) ಅವರನ್ನು ನೇಮಕ ಮಾಡಲಾಗಿದೆ. ಹೆಚ್ ಎಸ್ ಮಂಜುನಾಥ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಒಕ್ಕಲಿಗ ಸಮುದಾದಯವರಾದ ಹೆಚ್.ಎಸ್.ಮಂಜುನಾಥ್ ಅವರು ಈ ಹಿಂದೆ ಮಹಾಲಕ್ಷ್ಮೀ ಲೇಔಟ್ನಿಂದ ವಿಧಾನಸಭೆ ಸ್ಪರ್ಧಿಸಿದ್ದರು. ಈಗ ಹೆಚ್.ಎಸ್.ಮಂಜುನಾಥ್ ಅವರಿಗೆ ಹೈಕಮಾಂಡ್ ಕಾರ್ಯಾಧ್ಯಕ್ಷ ಪಟ್ಟ ಕಟ್ಟಿದೆ. ಮೊಹಮ್ಮದ್ ನಲಪಾಡ್ ಯುವ ಕಾಂಗ್ರೆಸ್ನ ಹಾಲಿ ಅಧ್ಯಕ್ಷರಾಗಿ ಇದ್ದಾರೆ.
ಒಕ್ಕಲಿಗರಾಗಿರುವ ಹೆಚ್ಎಸ್ ಮಂಜುನಾಥವರನ್ನು ಯುವ ಕಾಂಗ್ರೆಸ್ನ ಕಾರ್ಯಾಧ್ಯಕ್ಷ ಮಾಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯದ ಯುವಕರ ಮತಗಳನ್ನು ಸೆಳೆಯಲು ಪ್ಲ್ಯಾನ್ ಮಾಡಲಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಡಿಕೆ ಶಿವಕುಮಾರ್ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಬುನಾದಿ ಹಾಕಲಾಗಿದೆ ಎನ್ನಲಾಗುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ