ಎಲ್ಲ ಸಂಸ್ಕೃತಿ ಶುರುವಾಗಿದ್ದೆ ಕಾಂಗ್ರೆಸ್​​ನಿಂದ, ಕಾಂಗ್ರೆಸ್ ಟ್ವೀಟ್​ಗೆ ಸಿಎಂ ಬೊಮ್ಮಾಯಿ ಟಾಂಗ್

ಸ್ಯಾಂಟ್ರೋ ರವಿಯೇ ಹೇಳಿಕೊಂಡಿದ್ದಾನೆ ಇಂತಹ ತಲೆಹಿಡುಕರು ಬಿಜೆಪಿಯಲ್ಲಿ ಮಾತ್ರ ಇರಲು ಸಾಧ್ಯ ಎಂದು ಕಾಂಗ್ರೆಸ್ ನಾಯಕ ದಿನೇಶ ಗುಂಡುರಾವ್ ಮಾಡಿದ ಸರಣಿ ಟ್ವಿಟ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಎಲ್ಲ ಸಂಸ್ಕೃತಿ ಶುರುವಾಗಿದ್ದೆ ಕಾಂಗ್ರೆಸ್​​ನಿಂದ, ಕಾಂಗ್ರೆಸ್ ಟ್ವೀಟ್​ಗೆ ಸಿಎಂ ಬೊಮ್ಮಾಯಿ ಟಾಂಗ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡು ರಾವ್
Follow us
TV9 Web
| Updated By: Rakesh Nayak Manchi

Updated on:Jan 12, 2023 | 2:40 PM

ಹುಬ್ಬಳ್ಳಿ: ಸ್ಯಾಂಟ್ರೋ ರವಿ (Santro Ravi) ಬಿಜೆಪಿ ಕಾರ್ಯಕರ್ತ ಹೌದು ಅಲ್ವಾ ಅನ್ನೋದನ್ನು ಪರಿಶೀಲನೆ ಮಾಡಲು ಹೇಳಿದ್ದೇನೆ. ಕಾಂಗ್ರೆಸ್​ನಲ್ಲಿ ಎಂಥವರು ಇದ್ದಾರೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಇತಂಹ ಸಂಸ್ಕೃತಿ ಆರಂಭವಾಗಿದ್ದೆ ಕಾಂಗ್ರೆಸ್ ನಿಂದ ಎಂದು ಹೇಳುವ ಮೂಲಕ ಕಾಂಗ್ರೆಸ್ ಟ್ವೀಟ್ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದ್ದಾರೆ. ನಾನು ಬಿಜೆಪಿ ಕಾರ್ಯಕರ್ತ ಎಂದು ಸ್ಯಾಂಟ್ರೋ ರವಿಯೇ ಹೇಳಿಕೊಂಡಿದ್ದಾನೆ. ಇಂತಹ ತಲೆಹಿಡುಕರು ಬಿಜೆಪಿಯಲ್ಲಿ ಮಾತ್ರ ಇರಲು ಸಾಧ್ಯ ಎಂದು ಕಾಂಗ್ರೆಸ್ ನಾಯಕ ದಿನೇಶ ಗುಂಡುರಾವ್ (Dinesh Gundu Rao) ಮಾಡಿದ ಸರಣಿ ಟ್ವಿಟ್ ಮಾಡಿದ್ದರು.

ದಿನೇಶ್ ಗುಂಡೂರಾವ್ ಟ್ವೀಟ್ ಬಗ್ಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಅಂತಹ ತಲೆಹಿಡುಕರು ಕಾಂಗ್ರೆಸ್​​ನಲ್ಲಿ ಮಾತ್ರ ಇರಲು ಸಾಧ್ಯ ಎಂದರಲ್ಲದೆ, ಸ್ಯಾಂಟ್ರೋ ರವಿ ಬಂಧನದ ಬಗ್ಗೆ ಗೊತ್ತಿಲ್ಲ. ನಾನು ವಿಮಾನದಲ್ಲಿದ್ದೆ ಎಂದರು. ಕಾಂಗ್ರೆಸ್ ರಾಜಕೀಯ ದಿವಾಳಿತನಕ್ಕೆ ಹೋಗಿದೆ. ಹೀಗಾಗಿ ಅವರು (ಕಾಂಗ್ರೆಸ್) ಹತಾಶರಾಗಿದ್ದಾರೆ. ಅದಕ್ಕೆ ಉಚಿತ ಯೋಜನೆಗಳ ಬಗ್ಗೆ ಹೇಳುತ್ತಿದ್ದಾರೆ. ಕಾಂಗ್ರೆಸ್​ನವರು ಸುಳ್ಳು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ ಎಂದರು.

ಇದನ್ನೂ ಓದಿ: ಎಸ್​ಸಿ ಎಸ್​ಟಿ ಮತಬೇಟೆಗೆ ಇಳಿದ ಕಾಂಗ್ರೆಸ್, ಎರಡು ಎಕರೆ ಜಮೀನು ನೀಡಲು ಪ್ಲಾನ್

ಯುವಜನೋತ್ಸವ ಸಮಾರಂಭಕ್ಕೆ ಮೋದಿ ಆಗಮಿಸುತ್ತಿದ್ದಾರೆ. ಯುವಕರಿಂದ ದೇಶ ಕಟ್ಟಬಹುದು. ಯುವಕರಿಗೆ ಕೌಶಲ ತರಬೇತಿ ನೀಡಿದರೆ ದೇಶ ಕಟ್ಟಬಹುದು. ನೂತನ ಶಿಕ್ಷಣ ನೀತಿಯಿಂದ ಮೂರೇ ವರ್ಷದಲ್ಲಿ ಎರಡು ಪದವಿ ತೆಗೆದುಕೊಳ್ಳಬಹುದು. ಯುವಕರಿಗೆ ಮುದ್ರಾ ಯೋಜನೆ. ಖೇಲೋ ಇಂಡಿಯಾ ಸೇರಿದಂತೆ ಇತರೆ ಯೋಜನೆ ಜಾರಿಗೊಳಿಸಿದ್ದಾರೆ. ಮೋದಿಯವರು ಬರುತ್ತಿರುವುದರಿಂದ ಯುವಕರಲ್ಲಿ ಉತ್ಸಾಹ ಹೆಚ್ಚಾಗಲಿದೆ ಎಂದರು.

ಕಾಂಗ್ರೆಸ್ ಟ್ವೀಟ್​​ನಲ್ಲಿ ಏನಿದೆ?

ಸ್ಯಾಂಟ್ರೋ ರವಿ ವಿಚಾರ ಮುಂದಿಟ್ಟು ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿಕಾರಿದ್ದು, ಸರಣಿ ಟ್ವೀಟ್ ಮಾಡಿದ್ದಾರೆ. ನಾನು BJP ಕಾರ್ಯಕರ್ತ ಎಂದು ಸ್ಯಾಂಟ್ರೋ ರವಿಯೇ ಹೇಳಿಕೊಂಡಿದ್ದಾನೆ. ಇಂತಹ ತಲೆಹಿಡುಕರು BJPಯಲ್ಲಿ ಮಾತ್ರ ಇರಲು ಸಾಧ್ಯ. ಲಂಪಟರು, ನುಂಗುಬಾಕರು, ಲಂಚ-ಮಂಚ ಪ್ರಹಸನ ಶೂರರಿಂದ BJP ತುಂಬಿ ತುಳುಕುತ್ತಿದೆ. ಇಂತಹ ಭಂಡ BJPಯವರಿಗೆ ಸಂಸ್ಕೃತಿ, ಆಚಾರ, ವಿಚಾರಗಳ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದ್ದಾರೆ.

ಸ್ಯಾಂಟ್ರೋ ರವಿಯಂತಹ ಪಿಂಪ್‌ BJP ಕಾರ್ಯಕರ್ತ, ಮತ್ತೊಂದು ಕಡೆ‌ ನಟೋರಿಯಸ್ ರೌಡಿ‌ ಶೀಟರ್‌ಗಳನ್ನು, ಪೋಲಿ‌ ಪುಡಾರಿಗಳನ್ನು BJPಯವರೇ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. BJPಯವರು ನೈತಿಕತೆಯ ಬಗ್ಗೆ‌ ನೀತಿ ಪಾಠ ಮಾಡುವುದು ದೆವ್ವದ ಬಾಯಲ್ಲಿ ಸುಪ್ರಭಾತ ಕೇಳಿದಂತೆ. BJPಗೆ ಜನ ‘ಬ್ಲ್ಯೂ’ಜೆಪಿ ಎನ್ನುವುದು ಇದೇ ಕಾರಣಕ್ಕಾಗಿಯೇ? ಎಂದು ಪ್ರಶ್ನಿಸಿದ್ದಾರೆ.

ಸ್ಯಾಂಟ್ರೋ ರವಿ ವಿರುದ್ಧ FIR ದಾಖಲಾಗಿ ಹತ್ತು ದಿನಗಳಾಗಿವೆ. ಇಷ್ಟಾದರೂ ಸ್ಯಾಂಟ್ರೋ ರವಿಯ ಬಂಧನವಾಗಿಲ್ಲ. ಸ್ಯಾಂಟ್ರೋ ರವಿ BJP ಕಾರ್ಯಕರ್ತ ಎನ್ನುವ ಕಾರಣಕ್ಕೆ ಆತನ ಬಂಧನವಾಗುತ್ತಿಲ್ಲವೇ ಅಥವಾ ಕೆಲ BJPಯವರಿಗೆ ಅವನು ಸಲ್ಲಿಸಿದ ‘ಸೇವೆ’ಯ ಕೃತಾಜ್ಞಾರ್ಥವಾಗಿ ಬಂಧನದಿಂದ ಆತನ ರಕ್ಷಣೆ ಮಾಡಲಾಗುತ್ತಿದೆಯೇ? ಸ್ಯಾಂಟ್ರೋ ರವಿ ಬಂಧನ ಯಾವಾಗ? ಎಂದು ಪ್ರಶ್ನಿಸಿದ್ದಾರೆ.

ವರದಿ: ವೀರೇಶ್ ದಾನಿ, ಟಿವಿ9 ಹುಬ್ಬಳ್ಳಿ

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Thu, 12 January 23

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು