Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಲವ್ ಜಿಹಾದ್ ಶುರುವಾಗಿದೆ: ಬಿವೈ ವಿಜಯೇಂದ್ರ

ನೇಹಾ ಹಿರೇಮಠ ಕೊಲೆ ಪ್ರಕರಣ ಬೆನ್ನಲ್ಲೇ ಮತ್ತೊಂದು ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. ಸದ್ದಾಂ ಹುಸೇನ್​ ಎಂಬ ವ್ಯಕ್ತಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿ ಮಾಡಿದ್ದಾನೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಕೇರಳ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿ ಲವ್​ ಜಿಹಾದ್​ ಶುರುವಾಗಿದೆ ಎಂದರು.

ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಲವ್ ಜಿಹಾದ್ ಶುರುವಾಗಿದೆ: ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on: May 04, 2024 | 12:48 PM

ಹುಬ್ಬಳ್ಳಿ, ಮೇ 04: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ನಿರಾತಂಕವಾಗಿ ನಡೆಯುತ್ತಿವೆ. ಕೇರಳ ಮಾದರಿ ನಮ್ಮ ರಾಜ್ಯದಲ್ಲಿ ಲವ್ ಜಿಹಾದ್ (Love Jihad) ಶುರುವಾಗಿದೆ. ಹಿಂದೂ ಹೆಣ್ಣುಮಕ್ಕಳ ಕುಟುಂಬದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಆರೋಪಿ ಸದ್ದಾಂ ಹುಸೇನ್ ಕಬ್ಬಿಣದ ರಾಡ್ ತೆಗೆದುಕೊಂಡು ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದನು. ಇದು ರಾಜ್ಯ ಸರ್ಕಾರ ತಲೆ ತಗ್ಗಿಸುವ ಕೆಲಸ. ಕಾಂಗ್ರೆಸ್​ಗೆ (Congress) ಲೋಕಸಭೆ ಚುನಾವಣೆಯಲ್ಲಿ (Lok Sabha Election) ಜನ ಉತ್ತರ ಕೊಡುತ್ತಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಿಡಿಕಾರಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್​ನವರಿಗೆ ಮೊದಲೇ ಪೆನ್​ಡ್ರೈವ್​ ಸಿಕ್ಕಿದ್ದು, ಇದೀಗ ಪೆನ್​ಡ್ರೈವ್ ಹಿಂದೆ ಬಿದ್ದಿದ್ದಾರೆ. ನಾವು ಯಾರೂ ಪ್ರಜ್ವಲ್​​ ರೇವಣ್ಣ ಪ್ರಕರಣ ಬೆಂಬಲಿಸಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಪೈನ್​ಡ್ರೈವ್​ ಬಗ್ಗೆ ವಿಜಯೇಂದ್ರಗೆ ಮೊದಲೇ ಪತ್ರ ಬರೆದಿದ್ದರು ಅಂತಿದ್ದಾರೆ. ನನಗಂತೂ ಈ ಕ್ಷಣದವರೆಗೂ ನನಗೆ ಯಾವುದೇ ಪತ್ರ ಬಂದಿಲ್ಲ. ಬಹಳ ಜವಾಬ್ದಾರಿಯಿಂದ ಈ ಮಾತು ಹೇಳುತ್ತಿದ್ದೇನೆ. ರಾಜ್ಯ​ ಸರ್ಕಾರಕ್ಕೆ ಗ್ಯಾರಂಟಿ ಬಗ್ಗೆ ವಿಶ್ವಾಸ ಹೋಗಿದೆ. ಹೀಗಾಗಿ ಪೆನ್​ಡ್ರೈವ್ ಹಿಂದೆ ಬಿದ್ದಿದೆ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಬಾಲಕಿಗೆ ಲೈಂಗಿಕ ದೌರ್ಜನ್ಯ, ಪೊಲೀಸರ ಮೇಲೆಯೇ ತಿರುಗಿಬಿದ್ದ ಆರೋಪಿಗೆ ಗುಂಡೇಟು

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದೇನೆ. ನೀರೀಕ್ಷೆಗೂ ಮೀರಿ ನಮ್ಮ ಪಕ್ಷಕ್ಕೆ ಬೆಂಬಲ ವ್ಯಕ್ತವಾಗಿದೆ. ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಜನರ ಬಯಕೆ ಇದೆ. ಬಿಜೆಪಿಯಿಂದಷ್ಟೇ ದೇಶಕ್ಕೆ ಒಳಿತು ಎಂಬ ಭಾವನೆ ಇದೆ. ಬಿಜೆಪಿ ಎಲ್ಲ ಕಾರ್ಯಕರ್ತರು ಬಹಳ ಶ್ರಮ ಹಾಕುತ್ತಿದ್ದಾರೆ. ಎರಡನೇ ಹಂತದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ