ಧಾರ್ಮಿಕ ಭಾವನೆಗಳಿಗೆ ಧಕ್ಕೆ; ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಕೇಸು

ಬಿಜೆಪಿ ಶಾಸಕ ರಾಜಾ ಸಿಂಗ್ ಅವರ ವಿಡಿಯೊವೊಂದು ವೈರಲ್ ಆಗಿದೆ. ಈ ವಿಡಿಯೊದಲ್ಲಿ ನಿರ್ದಿಷ್ಟ ಸಮುದಾಯದ ಜವರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆಯನ್ನು ನೀಡಿದ್ದಾರೆ ಎಂದು ಅಲಿ ತಮ್ಮ ದೂರಿನಲ್ಲಿ ಹೇಳಿದ್ದಾರೆ

ಧಾರ್ಮಿಕ ಭಾವನೆಗಳಿಗೆ ಧಕ್ಕೆ; ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಕೇಸು
ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್
TV9kannada Web Team

| Edited By: Rashmi Kallakatta

Jun 08, 2022 | 5:49 PM

ಹೈದರಾಬಾದ್: ಆಕ್ಷೇಪಾರ್ಹ ಹೇಳಿಕೆ ಮೂಲಕ ನಿರ್ದಿಷ್ಟ ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ತೆಲಂಗಾಣದ (Telangana) ಬಿಜೆಪಿ (BJP) ಶಾಸಕ ರಾಜಾ ಸಿಂಗ್ (Raja Singh) ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತೆಲಂಗಾಣದ ಘೋಷಾಮಹಲ್ ಕ್ಷೇತ್ರದ ಶಾಸಕರಾಗಿದ್ದಾರೆ ರಾಜಾ ಸಿಂಗ್. ಐಪಿಸಿ ಸೆಕ್ಷನ್295 ಎ ಪ್ರಕಾರ ಕಂಚನ್​​ಬಾಗ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ವ್ಯಾಪಾರಿ, ಹೈದರಾಬಾದ್ ನಿವಾಸಿ ಮೊಹಮ್ಮದ್ ಅಲಿ ನೀಡಿದ ದೂರಿನ ಮೇರೆಗೆ ರಾಜಾ ಸಿಂಗ್ ಮೇಲೆ ಕೇಸು ದಾಖಲಿಸಲಾಗಿದೆ. ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ನಾವು ಕೇಸು ದಾಖಲಿಸಿದ್ದೇವೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಂಚನ್ ಬಾಗ್ ನಿವಾಸಿ ಮೊಹಮ್ಮದ್ ಅಲಿ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿದ್ದೇವೆ ಎಂದು ಕಂಚನ್ ಬಾಗ್ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಪಿ ಉಮಾ ಮಹೇಶ್ವರ್ ರಾವ್ ಹೇಳಿದ್ದಾರೆ.

ಬಿಜೆಪಿ ಶಾಸಕ ರಾಜಾ ಸಿಂಗ್ ಅವರ ವಿಡಿಯೊವೊಂದು ವೈರಲ್ ಆಗಿದೆ. ಈ ವಿಡಿಯೊದಲ್ಲಿ ನಿರ್ದಿಷ್ಟ ಸಮುದಾಯದ ಜವರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆಯನ್ನು ನೀಡಿದ್ದಾರೆ ಎಂದು ಅಲಿ ತಮ್ಮ ದೂರಿನಲ್ಲಿ ಹೇಳಿದ್ದಾರೆ. ನಾವು ಈ ವಿಷಯದ ಬಗ್ಗೆ ತನಿಖೆ ಮಾಡುತ್ತಿದ್ದೇನೆ. ವಿಡಿಯೊದ ಸಾಚಾತನ ಇನ್ನೂ ದೃಢೀಕರಿಸಿಲ್ಲ.ದಿನಾಂಕ ಮತ್ತು ಸಮಯ ಕೂಡಾ ದೃಢೀಕರಿಸಿಲ್ಲ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ತನಿಖೆ ನಡೆಯುತ್ತಿದೆ.

ಇದನ್ನೂ ಓದಿ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada