AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಮಂತ್ರಿಗಿರಿಗೆ ರಾಜಿನಾಮೆ ನೀಡಲು ಸಿದ್ಧ: ಕೆಎನ್​ ರಾಜಣ್ಣ

ಲೋಕಸಭೆ ಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯಾಗುತ್ತದೆ ಎಂಬ ಮಾತುಗಳು ಕಾಂಗ್ರೆಸ್​ನಲ್ಲಿ ಕೇಳಿಬರುತ್ತಿವೆ. ಅಲ್ಲದೆ ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸುಳಿವು ನೀಡಿದ್ದರು. ಈ ವಿಚಾರವಾಗಿ ಸಚಿವ ಕೆಎನ್​ ರಾಜಣ್ಣ ಮಾತನಾಡಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಮಂತ್ರಿಗಿರಿಗೆ ರಾಜಿನಾಮೆ ನೀಡಲು ಸಿದ್ಧ: ಕೆಎನ್​ ರಾಜಣ್ಣ
ಸಚಿವ ಕೆಎನ್​ ರಾಜಣ್ಣ
Anil Kalkere
| Edited By: ವಿವೇಕ ಬಿರಾದಾರ|

Updated on: May 25, 2024 | 2:15 PM

Share

ಬೆಂಗಳೂರು, ಮೇ 25: ನನಗೆ ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಸಚಿವ ಕೆಎನ್​ ರಾಜಣ್ಣ (KN Rajanna) ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧ್ಯಕ್ಷರ ಬದಲಾವಣೆ ಸನ್ನಿವೇಶ ಎದುರಾದರೆ ನಾನು ಅಧ್ಯಕ್ಷನಾಗಲು ಸಿದ್ಧನಿದ್ದೇನೆ. ಅಧ್ಯಕ್ಷ ಸ್ಥಾನ ಸಿಕ್ಕರೆ ಮಂತ್ರಿ ಸ್ಥಾನ ಬಿಡಲು ನಾನು ತಯಾರಿದ್ದೇನೆ. ನಾನು ಮುಂದೆ ಯಾವುದೆ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ಅಧ್ಯಕ್ಷ ಸ್ಥಾನ ಸಿಕ್ಕರೆ ಪಕ್ಷಕ್ಕಾಗಿ ತನು,ಮನ ಅರ್ಪಿಸುತ್ತೇನೆ ಎಂದರು.

ಬೆಂಗಳೂರಿನಲ್ಲಿ‌ ಡ್ರಗ್ಸ್ ಮಾಫಿಯಾ ಹೆಚ್ಚುತ್ತಲೇ ಇದೆ. ಮಾದಕ ವಸ್ತು ನಿಗ್ರಹ ದಳ ಹೆಚ್ಚು ಕಾರ್ಯೋನ್ಮುಕವಾಗಬೇಕು. 2647 ಪೆನ್​ಡ್ರೈವ್ ಇದೆ ಅಂತಾರೆ. ಹೀಗಾಗಿ ಸಂತ್ರಸ್ಥರಿಂದ ಹೆಲ್ಫ್​ಲೈನ್​ಗೆ ದೂರು ಬಂದಿರಬಹುದು ಎಂದರು.

ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾಗಿದೆ. ಐದು ವರ್ಷ ಪೂರ್ಣ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿಕೆ ಶಿವಕುಮಾರ್​ ಉಪಮುಖ್ಯಮಂತ್ರಿಯಾಗಿ ಇರುತ್ತಾರೆ ಅಂತ ವೇಣುಗೋಪಾಲ್ ಹೇಳಿದ್ದರು. ಆದರೆ ಚುನಾವಣೆ ಫಲಿತಾಂಶ ಬರಲಿ ಆಮೇಲೆ ಧ್ರುವೀಕರಣ ಆಗಬಹುದು. ಇಲ್ಲಿ ಮಾತ್ರವಲ್ಲ ಎಲ್ಲ ಕಡೆಯೂ ಆಗಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆ: ಬಂಡಾಯವಾಗಿ ಸ್ಪರ್ಧಿಸಿರುವ ಐವರು ಕಾಂಗ್ರೆಸ್​ನಿಂದ ಉಚ್ಚಾಟನೆ

ಬಿಜೆಪಿ ಮುಖಂಡ ದೇವರಾಜೇಗೌಡ, ಡಿಕೆ ಶಿವಕುಮಾರ್​ ಆಡಿಯೋ ವಿಚಾರವಾಗಿ ಮಾತನಾಡಿದ ಅವರು, ಕರೆ ಮಾಡಿದರೆ ಮಾತನಾಡೋಕೆ ಆಗಲ್ಲವೆಂದು ಹೇಳಲು ಆಗುತ್ತಾ? ನಮ್ಮನ್ನು ಸಿಲುಕಿಸಲು ಪ್ರಯತ್ನ ಮಾಡುತ್ತಾರೆ. ಹೆಣ್ಣುಮಕ್ಕಳು ಕರೆ ​ಮಾಡಿದರೆ ನಾನೇ ಬ್ಲಾಕ್ ಮಾಡುತ್ತೇನೆ. ಯಾಕೆ ಬೇಕಪ್ಪ ಅಂತ ನಂಬರ್​ ಬ್ಲಾಕ್ ಮಾಡುತ್ತೇನೆ. ನಾನು ಮೊಬೈಲ್ ಎಕ್ಸ್​ಪರ್ಟ್​ ಅಲ್ಲ, ನನಗೆ ಫೋನ್​ ಮಾಡುವುದು ಅಷ್ಟೇ ಗೊತ್ತು ಎಂದು ತಿಳಿಸಿದರು.

ಪ್ರಜ್ವಲ್ ಮಾಡಿರುವುದು ಅಪರಾಧ, ರಿಲೀಸ್ ಆಗಿದ್ದು ಅಪರಾಧವೇ. ರಮೇಶ್ ಜಾರಕಿಹೊಳಿಗೂ ಇದೇ ಟ್ರ್ಯಾಪ್ ತಾನೇ ಆಗಿದ್ದು. ಶಾಸಕ ರಮೇಶ್ ಜಾರಕಿಹೊಳಿ ಪ್ರಕರಣದಲ್ಲೂ ಕ್ರಮ ಆಗಲಿಲ್ಲ. ಹೆಚ್​ಡಿ ರೇವಣ್ಣ ಮತ್ತು ನಮ್ಮ ಕುಟುಂಬ ಬೇರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಯಾವ ಕುಟುಂಬಕ್ಕೆ ಅಗೌರವ ಆಗುತ್ತಿದೆ ಹೇಳಬೇಕಲ್ವಾ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Anil Kalkere
Anil Kalkere
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!