AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯಕರ ಟೀಕೆಗಳನ್ನ ಸ್ವಾಗತಿಸುತ್ತೇನೆ: ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್ ಎಂದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿಯ ಟೀಕೆಗಳನ್ನು ಖಂಡಿಸಿ, ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡಿದ್ದಾರೆ. ಮಾಧ್ಯಮಗಳಿಗೆ ವೃತ್ತಿಪರತೆ ಮತ್ತು ನಿಖರತೆಯನ್ನು ಒತ್ತಿ ಹೇಳಿದ ಅವರು, ಸುಳ್ಳು ಸುದ್ದಿಗಳಿಂದ ಜನರ ಮೇಲೆ ಉಂಟಾಗುವ ಪರಿಣಾಮವನ್ನು ಖಂಡಿಸಿದ್ದಾರೆ. ಅಲ್ಲದೆ, ಸಿಎಂ ಬದಲಾವಣೆ ಕುರಿತು ಗೊಂದಲಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಆರೋಗ್ಯಕರ ಟೀಕೆಗಳನ್ನ ಸ್ವಾಗತಿಸುತ್ತೇನೆ: ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್ ಎಂದ ಸಿದ್ದರಾಮಯ್ಯ
ಆರೋಗ್ಯಕರ ಟೀಕೆಗಳನ್ನ ಸ್ವಾಗತಿಸುತ್ತೇನೆ: ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್ ಎಂದ ಸಿದ್ದರಾಮಯ್ಯ
TV9 Web
| Edited By: |

Updated on: Jan 12, 2025 | 9:41 PM

Share

ಬೆಂಗಳೂರು, ಜನವರಿ 12: ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ, ತಿದ್ದಿಕೊಳ್ಳುತ್ತೇನೆ. ಆದರೆ ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್​ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಮ್ಮ ಗ್ಯಾರಂಟಿಗಳನ್ನು ಬೇರೆ ಹೆಸರಲ್ಲಿ ಅವರು ಘೋಷಿಸಿದ್ದಾರೆ. ಆದರೂ ಮಹಾರಾಷ್ಟ್ರ ಚುನಾವಣೆ ವೇಳೆ ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ ಎಂದು ಸುಳ್ಳು ಜಾಹೀರಾತು ನೀಡಿದರು ಎಂದಿದ್ದಾರೆ.

ಇದನ್ನೂ ಓದಿ: ಆಪರೇಷನ್ ಹಸ್ತ ಭೀತಿ..ಜೆಡಿಎಸ್​​ ಫುಲ್​ ಅಲರ್ಟ್​: ರಾಜ್ಯಾಧ್ಯಕ್ಷರ ಆಯ್ಕೆಗೆ ಮುಹೂರ್ತ ಫಿಕ್ಸ್

ಇಂದು “ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರೆದ್ರಿ ಎಂದು ಕೇಳಿಲ್ಲ. ಆದರೆ ನೀವು ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಸಾಧ್ಯವಾದಷ್ಟು ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ ಎಂದು ಹೇಳಿದ್ದಾರೆ.

ನಾವು ಜನಪರ ಕೆಲಸ ಮಾಡದಿದ್ದಾಗ, ಕೊಟ್ಟ ಮಾತು ಈಡೇರಿಸದಿದ್ದಾಗ ಅದನ್ನು ಬರೆದು ಜನರ ಕಣ್ಣು ತೆರೆಸುವ ಹಕ್ಕು ಜವಾಬ್ದಾರಿ ಮಾಧ್ಯಮದವರ ಮೇಲಿದೆ. ಅದನ್ನು ನೀವೆಲ್ಲರೂ ನಿಭಾಯಿಸಬೇಕು. ನಾವು ಊಟಕ್ಕೆ ಸೇರಿ ಏನೋ ಮಾತಾಡಿರ್ತೀವಿ. ಆದರೆ ಮಾಧ್ಯಮಗಳೇ ಡೈಲಾಗ್ ಬರೆದು ಬಿಡ್ತಾರೆ. ನಮಗೆ ಗೊತ್ತೇ ಇರದ ವಿಷಯವನ್ನು ಅವರೇ ಡೈಲಾಗ್ ಬರೆದು ತೋರಿಸಿದ್ದಾರೆ.

ಮನಸಾಕ್ಷಿಗೆ ತಕ್ಕಂತೆ ಮಾಧ್ಯಮಗಳು ವರದಿ ಮಾಡಿದರೆ ಸಮಾಜಕ್ಕೆ ಅದಕ್ಕಿಂತ ದೊಡ್ಡ ಸೇವೆ ಇಲ್ಲ. ಸುದ್ದಿಗಳನ್ನು ವೈಭವೀಕರಿಸುವುದು, ಮೂಢ ನಂಬಿಕೆಗಳನ್ನು ಬೆಂಬಲಿಸೋಕೆ ಹೋಗಬೇಡಿ. ನನ್ನ ಕಾರಿನ ಮೇಲೆ ಕಾಗೆ ಕುಳಿತಿದ್ದಕ್ಕೆ ಜ್ಯೋತಿಷಿಗಳನ್ನು ಚಾನಲ್ ಗಳಿಗೆ ಕರೆಸಿ ಏನೆಲ್ಲಾ ಹೇಳಿಸಿದಿರಿ. ನಾನು 5 ವರ್ಷ ಮುಖ್ಯಮಂತ್ರಿಯಾಗಿ ಪೂರ್ಣಗೊಳಿಸಲ್ಲ ಎಂದು ತೋರಿಸಿದಿರಿ. ಆದರೆ ನಾನು ಐದು ವರ್ಷ ಪೂರೈಸಿ ಎರಡನೇ ಬಾರಿ ಸಿಎಂ ಆದೆ. ಈಗ ಹೇಳಿ ಕಾಗೆ ಸುದ್ದಿಯಿಂದ ಮಾಧ್ಯಮಗಳ ವಿಶ್ವಾಸಾರ್ಹತೆ ಕಡಿಮೆ ಆಯ್ತೋ ಇಲ್ಲವೋ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೆಲವೇ ದಿನಗಳಲ್ಲಿ ಬ್ರೋಕರ್​ಗಳು ನಿಮ್ಮ ಮನೆಗೆ ಬರ್ತಾರೆ, ಆಸ್ತಿ ಮಾರಿಕೊಳ್ಳಬೇಡಿ: ಡಿಕೆ ಶಿವಕುಮಾರ್​

ಬುದ್ಧ, ಬಸವ, ಅಂಬೇಡ್ಕರ್ ಹೇಳಿದ ಸಮ ಸಮಾಜದ ಆಶಯ ಈಡೇರಿಸುವ ದಿಕ್ಕಿನಲ್ಲಿ ವೃತ್ತಿಪರತೆ ನಿರ್ವಹಿಸಿದರೆ ಅದು ಸಮಾಜಕ್ಕೆ ಉಪಯೋಗವಾಗುತ್ತದೆ. ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಅಭಿನಂದನೆಗಳು. ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಬೇಕು ಆಶಿಸಿದ್ದಾರೆ. ಇನ್ನು ಈ ವೇಳೆ ಸಿಎಂ ಬದಲಾವಣೆ ವಿಚಾರಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಸಿಎಂ ಕುರ್ಚಿ ಖಾಲಿನೇ ಇಲ್ಲ, ಬದಲಾವಣೆ ಆಗುತ್ತೆ ಅಂತಾರೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ