ನಾನು ವೈಯಕ್ತಿಕ ಹಿತಾಸಕ್ತಿಗಾಗಿ ಯಾವತ್ತೂ ರಾಜಕೀಯ ಮಾಡಿಲ್ಲ: ಸದಸ್ಯ ಬಿಕೆ ಹರಿಪ್ರಸಾದ್​​​

ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸುವುದು ಗೊತ್ತಿದೆ ಎಂದಿದ್ದ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್​ ನಾನು ವೈಯಕ್ತಿಕ ಹಿತಾಸಕ್ತಿಗೆ ಎಂದೂ ರಾಜಕೀಯ ಮಾಡಿದವನಲ್ಲ, ಸಾಮಾಜಿಕ ಬದಲಾವಣೆಗಾಗಿ ರಾಜಕೀಯಕ್ಕೆ ಬಂದವನು ಎಂದು ಟ್ವೀಟ್​ ಮಾಡಿದ್ದಾರೆ.

ನಾನು ವೈಯಕ್ತಿಕ ಹಿತಾಸಕ್ತಿಗಾಗಿ ಯಾವತ್ತೂ ರಾಜಕೀಯ ಮಾಡಿಲ್ಲ: ಸದಸ್ಯ ಬಿಕೆ ಹರಿಪ್ರಸಾದ್​​​
ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on:Jul 24, 2023 | 4:06 PM

ಬೆಂಗಳೂರು, ಜುಲೈ 24: ನಾನು ವೈಯಕ್ತಿಕ ಹಿತಾಸಕ್ತಿಗಾಗಿ ಯಾವತ್ತೂ ರಾಜಕೀಯ ಮಾಡಿಲ್ಲ ಎಂದ ವಿಧಾನಪರಿಷತ್​ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್  (BK Hariprasad)​ ಹೇಳಿದ್ದಾರೆ. ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸುವುದು ಗೊತ್ತಿದೆ ಎಂದಿದ್ದ ಬಿ.ಕೆ.ಹರಿಪ್ರಸಾದ್​ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಚರ್ಚೆ ಹುಟ್ಟುಹಾಕಿತ್ತು. ಆದರೆ ಆದೀಗ ಟ್ವೀಟ್​ ಮಾಡಿರುವ ಅವರು, ಸಾಮಾಜಿಕ ಬದಲಾವಣೆಗಾಗಿ ನಾನು ರಾಜಕೀಯಕ್ಕೆ ಬಂದವನು ಎಂದಿದ್ದಾರೆ.

ಮಂತ್ರಿ, ಸಿಎಂ ಸೇರಿ ಯಾವ ಅಧಿಕಾರದ ಮೇಲೂ ಲಾಬಿ ನಡೆಸಿಲ್ಲ. ಅದರ ಮೇಲೆ ಆಸೆಯೂ ಇಲ್ಲ. ಸಾಮಾಜಿಕ ನ್ಯಾಯದ ಪರ ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ, ಬಿಕೆ ಹರಿಪ್ರಸಾದ್​ ವಿರುದ್ಧ ಕಾಂಗ್ರೆಸ್​ನಲ್ಲೇ ಭುಗಿಲೆದ್ದ ಆಕ್ರೋಶ

ಮಂತ್ರಿ ಸ್ಥಾನ ಸಿಗದೇ ಇದ್ದುದಕ್ಕೆ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು. ನಮಗೆ ಸಿಎಂ ಮಾಡೋದು ಗೊತ್ತು, ಇಳಿಸೋದು ಗೊತ್ತು ಎಂದಿದ್ದರು. ಅದಕ್ಕೆ ಅವರು ಮಧ್ಯಪ್ರದೇಶ ಸಿಎಂ ಆಯ್ಕೆ ಮಾಡಿದ್ದನ್ನ ಉದಾಹರಣೆಯಾಗಿ ಸಹ ನೀಡಿದ್ದರು.

ಇತ್ತೀಚೆಗೆ ಬಿಲ್ಲವ ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಬಿ.ಕೆ.ಹರಿಪ್ರಸಾದ್, ನಮ್ಮ ಸಮುದಾಯದವರು ರಾಜಕೀಯವಾಗಿ ಮುಂದೆ ಬರುತ್ತಿಲ್ಲ. ನಾವು ಯಾರದ್ದೋ ಷಡ್ಯಂತ್ರಕ್ಕೆ ಬಲಿಯಾಗುತ್ತಿದ್ದೇವೆ ಅನಿಸುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತು; ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಿ.ಕೆ.ಹರಿಪ್ರಸಾದ್​ ಆಕ್ರೋಶ

ಹರಿಪ್ರಸಾದ್​ ವಿರುದ್ಧ ಸಿದ್ದರಾಮಯ್ಯ ಅಭಿಮಾನಿ ಆಕ್ರೋಶ 

ಸದ್ಯ ಸಿಎಂ ಸಿದ್ದರಾಮಯ್ಯನವರ ಅಭಿಮಾನಿಗಳು ಬಿಕೆ ಹರಿಪ್ರಸಾದ್ ವಿರುದ್ಧ ಆಕ್ರೋಶಗೊಂಡಿದ್ದು, ಅವರನ್ನು ವಿಧಾನ ಪರಿಷತ್ ಸದಸ್ಯತ್ವದಿಂದ ವಜಾ ಮಾಡುವಂತೆ KPCC ಕಾರ್ಯದರ್ಶಿ ವರುಣ ಮಹೇಶ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಸಿಎಂ ವಿರುದ್ಧ ಮಾತನಾಡುವ ಹರಿಪ್ರಸಾದ್​ಗೆ ನೋಟಿಸ್ ನೀಡಬೇಕು. ಸಿಎಂ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹರಿಪ್ರಸಾದ್ ಕಾಂಗ್ರೆಸ್ ಪಕ್ಷ‌ ಕೊಟ್ಟಿರುವ ಜವಾಬ್ದಾರಿ ನಿರ್ವಹಿಸಬೇಕು. ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ಸರಿಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:06 pm, Mon, 24 July 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ