Nupur Sharma ಬಿಜೆಪಿಯಿಂದ ಅಮಾನತು ಆದ ನಂತರ ಪ್ರವಾದಿ ಬಗ್ಗೆ ನೀಡಿರುವ ಹೇಳಿಕೆ ವಾಪಸ್ ಪಡೆದ ನೂಪುರ್ ಶರ್ಮಾ
ತಮ್ಮ ಹೇಳಿಕೆಯನ್ನು ವಾಪಸ್ ಪಡೆದಿರುವುದಾಗಿ ಲಿಖಿತ ಹೇಳಿಕೆ ನೀಡಿರುವ ಶರ್ಮಾ, ನನ್ನ ಮಾತುಗಳು ಯಾವುದೇ ಧರ್ಮದ ಜನರ ಭಾವನೆಗಳಿಗೆ ಧಕ್ಕೆ ತಂದಿದ್ದರೆ, ನಾನು ಆ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಹೇಳಿದ್ದಾರೆ.
ಪ್ರವಾದಿ ಮುಹಮ್ಮದ್ (Prophet Muhammad)ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಬಿಜೆಪಿ (BJP) ವಕ್ತಾರೆ ನೂಪುರ್ ಶರ್ಮಾ ತಮ್ಮ ಹೇಳಿಕೆಯನ್ನು ವಾಪಸ್ ಪಡೆದಿದ್ದಾರೆ. ಇದಕ್ಕಿಂತ ಮುಂಚೆ ಬಿಜೆಪಿ ನೂಪುರ್ ಶರ್ಮಾ (Nupur Sharma) ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿತ್ತು. ತಮ್ಮ ಹೇಳಿಕೆಯನ್ನು ವಾಪಸ್ ಪಡೆದಿರುವುದಾಗಿ ಲಿಖಿತ ಹೇಳಿಕೆ ನೀಡಿರುವ ಶರ್ಮಾ, ನನ್ನ ಮಾತುಗಳು ಯಾವುದೇ ಧರ್ಮದ ಜನರ ಭಾವನೆಗಳಿಗೆ ಧಕ್ಕೆ ತಂದಿದ್ದರೆ, ನಾನು ಆ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಹೇಳಿದ್ದಾರೆ. ನಾನು ಹಲವು ದಿನಗಳಿಂದ ಟಿವಿ ಚರ್ಚೆಯಲ್ಲಿ ಭಾಗವಹಿಸುತ್ತಿದ್ದೇನೆ. ಅಲ್ಲಿ ಪ್ರತಿದಿನ ನನ್ನ ಅಯೋಧ್ಯಾ, ಶಿವನನ್ನು ಅವಮಾನ ಮಾಡಲಾಗುತ್ತಿತ್ತು. ನನ್ನಲ್ಲಿ ಅದು ಶಿವಲಿಂಗ ಅಲ್ಲ ಕಾರಂಜಿ ಎಂದರು. ದಿಲ್ಲಿಯ ಪ್ರತೀ ಫುಟ್ಪಾತ್ ಮೇಲೆ ಹಲವಾರು ಶಿವಲಿಂಗಗಳು ಸಿಗುತ್ತವೆ, ಹೋಗಿ ಅಲ್ಲಿ ಪೂಜೆ ಮಾಡಿ ಎಂದಿದ್ದರು. ನನ್ನ ಮುಂದೆ ಪದೇ ಪದೇ ಈ ರೀತಿ ನಮ್ಮ ಮಹಾದೇವ ಶಿವನ ಅವಮಾನ ಮಾಡಲಾಗುತ್ತಿತ್ತು.ಹೀಗೆ ಹೇಳುವುದನ್ನು ಕೇಳಿ ಸಿಟ್ಟಿನಲ್ಲಿ ಕೆಲವು ಮಾತು ಅಂದುಬಿಟ್ಟೆ. ಒಂದುವೇಳೆ ನನ್ನ ಮಾತುಗಳಿಂದ ಯಾರದ್ದಾದರೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದರೆ ನಾನು ಆ ಮಾತನ್ನು ಹಿಂಪಡೆಯುತ್ತೇನೆ. ಯಾರಿಗಾದರೂ ನೋವುಂಟು ಮಾಡಬೇಕು ಎಂಬ ಉದ್ದೇಶ ನನಗಿರಲಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ (CDC) ಭಾನುವಾರ ಶರ್ಮಾ ಅವರನ್ನು ಪಕ್ಷದ ಸ್ಥಾನಕ್ಕೆ ವ್ಯತಿರಿಕ್ತ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಅಮಾನತುಗೊಳಿಸಿದೆ. “ಮುಂದಿನ ವಿಚಾರಣೆ ಬಾಕಿಯಿದೆ, ನಿಮ್ಮನ್ನು ಪಕ್ಷದಿಂದ ಮತ್ತು ನಿಮ್ಮ ಜವಾಬ್ದಾರಿಗಳು/ನಿಯೋಜನೆಗಳಿಂದ ತಕ್ಷಣವೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ನಿಮಗೆ ತಿಳಿಸಲು ನನಗೆ ಸೂಚಿಸಲಾಗಿದೆ” ಎಂದು ಸಿಡಿಸಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್, ಶರ್ಮಾ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ
ಅದೇ ವೇಳೆ ನವೀನ್ ಕುಮಾರ್ ಜಿಂದಾಲ್ ಅವರನ್ನು ಉಚ್ಚಾಟಿಸಿರುವ ಬಗ್ಗೆ ಮಾಹಿತಿ ನೀಡಿದ ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ , “ನಿಮ್ಮ ಪ್ರಾಥಮಿಕ ಸದಸ್ಯತ್ವವನ್ನು ತಕ್ಷಣವೇ ಕೊನೆಗೊಳಿಸಲಾಗಿದೆ ಮತ್ತು ನಿಮ್ಮನ್ನು ಪಕ್ಷದಿಂದ ಹೊರಹಾಕಲಾಗಿದೆ” ಎಂದು ಹೇಳಿದರು.
ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ
Published On - 10:11 pm, Sun, 5 June 22