ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ, ದೇಶ ವಿಭಜನೆ ಬಗ್ಗೆ ಮಾತಾಡಿಲ್ಲ: ಡಿಕೆ ಸುರೇಶ್
ದೇಶ ವಿಭಜನೆಯ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್, ಇದೀಗ ಟಿವಿ9 ಸಂದರ್ಶನದಲ್ಲಿ ಮಾತನಾಡುತ್ತಾ, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ, ದೇಶ ವಿಭಜನೆಯ ಮಾತನಾಡಿಲ್ಲ ಎಂದು ಪುನರುಚ್ಚರಿಸಿದ್ದಾರೆ. ನಮ್ಮ ಪಾಲಿನ ಹಣವನ್ನು ಕೇಂದ್ರ ಸರ್ಕಾರ ನೀಡದೆ ತಾರತಮ್ಯ ಮಾಡುತ್ತಿದೆ ಎಂದರು.
ಬೆಂಗಳೂರು, ಫೆ.17: ದೇಶ ವಿಭಜನೆಯ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ (D.K.Suresh), ಇದೀಗ ಟಿವಿ9 ಸಂದರ್ಶನದಲ್ಲಿ ಮಾತನಾಡುತ್ತಾ, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ, ದೇಶ ವಿಭಜನೆಯ ಮಾತನಾಡಿಲ್ಲ ಎಂದು ಪುನರುಚ್ಚರಿಸಿದ್ದಾರೆ. ನಮ್ಮ ಪಾಲಿನ ಹಣವನ್ನು ಕೇಂದ್ರ ಸರ್ಕಾರ ನೀಡದೆ ತಾರತಮ್ಯ ಮಾಡುತ್ತಿದೆ ಎಂದರು.
ಕೇಂದ್ರ ಸರ್ಕಾರಕ್ಕೆ ನಮ್ಮ ರಾಜ್ಯದಿಂದ ಹೆಚ್ಚು ತೆರಿಗೆ ಹೋಗುತ್ತಿದೆ. ಆದರೆ ನಮಗೆ ಬರಬೇಕಿದ್ದ ನ್ಯಾಯಸಮ್ಮತ ಪಾಲನ್ನು ಕೇಂದ್ರ ನೀಡುತ್ತಿಲ್ಲ. ನಮ್ಮ ಪಾಲಿನ ಹಣ ನೀಡದೆ ಕೇಂದ್ರ ಸರ್ಕಾರ ವಂಚನೆ ಮಾಡುತ್ತಿದೆ. ಇದರಿಂದ ಕರ್ನಾಟಕ ರಾಜ್ಯದ ಜನರ ತೆರಿಗೆ ಪೋಲಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಗುಜರಾತ್ ಅಭಿವೃದ್ಧಿ ಆಗುತ್ತದೆ. ಉತ್ತರ ಭಾರತದ ರಾಜ್ಯಗಳು ಮಾತ್ರ ಅಭಿವೃದ್ಧಿ ಆಗುತ್ತವೆ ಎಂದರು.
ಇದನ್ನೂ ಓದಿ: ನಾನೇ ನಿಮ್ಮ ಮುಂದೆ ಬರ್ತೇನೆ, ಗುಂಡಿಟ್ಟು ಕೊಲ್ಲಿ; ಈಶ್ವರಪ್ಪಗೆ ಡಿಕೆ ಸುರೇಶ್ ಸವಾಲ್
ಡಿ.ಕೆ.ಸುರೇಶ್ ದೇಶದ್ರೋಹಿ ಎಂದು ಬಿಜೆಪಿ ನಾಯಕರ ಆರೋಪ ವಿಚಾರವಾಗಿ ಮಾತನಾಡಿದ ಅವರು, ಹಿಂದೆ ಮೋದಿ ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ತೆರಿಗೆ ವಿಚಾರವಾಗಿ ಏನು ಹೇಳಿದ್ದರು? ತಮ್ಮ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲಿನ ಬಗ್ಗೆ ಮೋದಿ ಏನು ಹೇಳಿದ್ದರು? ಈ ಬಗ್ಗೆ ಬಿಜೆಪಿ ನಾಯಕರು ಮಾಹಿತಿ ಪಡೆದು ತಿಳಿದುಕೊಳ್ಳಬೇಕು ಎಂದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಡಿಕೆ ಸುರೇಶ್, ಕುಮಾರಸ್ವಾಮಿ ಸ್ಪರ್ಧೆ ಮಾಡುವುದಾದರೆ ಸ್ವಾಗತ ಮಾಡುವೆ. ಕಾಂಗ್ರೆಸ್ ಪಕ್ಷದ ನಾಯಕನಾಗಿ ಇದನ್ನ ನಾನು ಸವಾಲಾಗಿ ಸ್ವೀಕರಿಸುತ್ತೇನೆ. ನನಗೆ ಲೋಕಸಭೆಗೆ ನಿಲ್ಲುವಂತೆ ನಮ್ಮ ಪಕ್ಷ ಸೂಚಿಸಿದರೆ ಸ್ಪರ್ಧೆ ಅನಿವಾರ್ಯ ಎಂದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ