ನನ್ನ ತಾತನಿಗೆ ಸಚಿವ ಸ್ಥಾನ ನೀಡಿ ಎಂದು ರಾಹುಲ್ ಗಾಂಧಿಗೆ ಪತ್ರ ಬರೆದ ಟಿಬಿ ಜಯಚಂದ್ರ ಮೊಮ್ಮಗಳು

ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಸಚಿವರ ಪಟ್ಟಿಯಲ್ಲಿ ಸ್ಥಾನ ದೊರೆತಿಲ್ಲ, ಹೀಗಾಗಿ ಅವರ ಮೊಮ್ಮಗಳು ಬೇಸರ ವ್ಯಕ್ತಪಡಿಸಿ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾಳೆ.

ನನ್ನ ತಾತನಿಗೆ ಸಚಿವ ಸ್ಥಾನ ನೀಡಿ ಎಂದು ರಾಹುಲ್ ಗಾಂಧಿಗೆ ಪತ್ರ ಬರೆದ ಟಿಬಿ ಜಯಚಂದ್ರ ಮೊಮ್ಮಗಳು
ರಾಹುಲ್ ಗಾಂಧಿಗೆ ಪತ್ರ ಬರೆದ ಟಿಬಿ ಜಯಚಂದ್ರ ಮೊಮ್ಮಗಳು
Follow us
|

Updated on: May 29, 2023 | 11:28 AM

ತುಮಕೂರು: ಸಿದ್ದರಾಮಯ್ಯನವರ ಸಚಿವ ಸಂಪುಟ ವಿಸ್ತರಣೆಯಾಗಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಒಟ್ಟು 34 ಜನರು ಸರ್ಕಾರ ರಚನೆಯಾಗಿದೆ. ಆದ್ರೆ, ಸಚಿವ ಸ್ತಾನದ ಆಕಾಂಕ್ಷಿಗಳಾಗಿದ್ದ ಕೆಲ ಹಿರಿಯ ಶಾಸಕರುಗಳಿಗೆ ಕಾಂಗ್ರೆಸ್​ ಹೈಕಮಾಂಡ್ ಕೊಕ್​ ನೀಡಿದೆ. ಈ ಪಟ್ಟಿಯಲ್ಲಿ ಟಿಬಿ ಜಯಚಂದ್ರ(Congress MLA TB Jayachandra) ಕೂಡ ಒಬ್ಬರು. ಈ ಬಾರಿ ಸಚಿವ ಸ್ಥಾನ ಸಿಗುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದ  ಟಿಬಿ ಜಯಚಂದ್ರ ಅವರಿಗೆ ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಇದರಿಂದ ಅವರು ಅಸಮಾಧಾನಗೊಂಡಿದ್ದಾರೆ. ಇನ್ನು ಜಯಚಂದ್ರ ಅವರ ಮೊಮ್ಮಗಳು(TB Jayachandra’s granddaughter) ಸಹ ಬೇಸರ ವ್ಯಕ್ತಪಡಿಸಿದ್ದು,  ತಮ್ಮ ತಾತನಿಗೆ ಸಚಿವ ಸ್ಥಾನ ನೀಡಿ ಎಂದು ರಾಹುಲ್ ಗಾಂಧಿಗೆ ಪತ್ರ ಬರೆಯುವ ಮೂಲಕ ತಮ್ಮ ತಾತನ ಪರವಾಗಿ ಲಾಬಿ ಮಾಡಿದ್ದಾಳೆ.

ಇದನ್ನೂ ಓದಿ: Karnataka Portfolio Allocation: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ?

ನಮ್ಮ ತಾತನಿಗೆ ಸಚಿವ ಸ್ಥಾನ ನೀಡದಿರುವುದು ತುಂಬ ಬೇಸರ ಆಗಿದೆ. ಸಚಿವ ಸ್ಥಾನಕ್ಕೆ ಅವರು ಸೂಕ್ತವಾದ ವ್ಯಕ್ತಿ. ಅವರು ಶ್ರಮ ಜೀವಿ, ಜನರಿಗೆ ಸಹಾಯ ಮಾಡುತ್ತಾರೆ. ಅದಕ್ಕೆ ಅವರು ಸಚಿವರಾಗಬೇಕು ಎಂದು ಜಯಚಂದ್ರ ಅವರ ಮೊಮ್ಮಗಳು ಅರ್ಣಾ ಸಂದೀಪ್ ರಾಹುಲ್​ ಗಾಂಧಿಗೆ ಪತ್ರ ಬರೆದಿದ್ದಾಳೆ. ಅಲ್ಲದೇ ವಿಡಿಯೋ ಮೂಲಕ ಮನವಿ ಮಾಡಿದ್ದಾಳೆ.

ನಮ್ಮ ತಾತ ಜನರನ್ನು ತುಂಬಾ ಪ್ರೀತಿ ಮಾಡುತ್ತಾರೆ. ಅವರಿಗೆ ಸಚಿವ ಸ್ಥಾನ ಕೊಡುವಂತೆ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದೇನೆ. ದಯವಿಟ್ಟು ಈ ಪತ್ರವನ್ನು ಓದಿ ಎಂದು ಆಕೆ ಮನವಿ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜಯಚಂದ್ರ ಅವರ ಮೊಮ್ಮಗಳು ಅರ್ಣಾ ಸಂದೀಪ್ ಅವರನ್ನು ಸಚಿವರನ್ನಾಗಿ ಮಾಡುವಂತೆ ಗಾಂಧಿಗೆ ಮನವಿ ಮಾಡಿದ್ದಾರೆ, ಟಿಬಿ ಜಯಚಂದ್ರ ಅವರನ್ನು ವಿಧಾನಸಭೆಯ ಸ್ಪೀಕರ್ ಮಾಡಲು ಹೈಕಮಾಂಡ್ ನಿರ್ಧರಿಸಿತ್ತು. ಕೆಸಿ ವೇಣುಗೋಪಾಲ್, ಸುರ್ಜೆವಾಲಾ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ಟಿಬಿ ಜಯಚಂದ್ರ ಅವರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ್ದರು. ಆದರೆ, ಅವರು ಒಪ್ಪಲು ನಿರಾಕರಿಸಿದ್ದರು. ಅಲ್ಲದೇ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಇದೇ ಕಾರಣಕ್ಕೆ ಅವರಿಗೆ ಸಚಿವ ಸ್ಥಾನ ತಪ್ಪಲು ಕಾರಣ ಎಂದು ತಿಳಿದುಬಂದಿದೆ.

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್