ಮುಂದಿನ 5 ವರ್ಷ ನಾನೇ ಸಿಎಂ ಹೇಳಿಕೆ: ಯೂ ಟರ್ನ್ ಹೊಡೆದ ಸಿದ್ದರಾಮಯ್ಯ
ಸಿಎಂ ಅಧಿಕಾರ ಹಂಚಿಕೆ ವಿಚಾರವಾಗಿ ಖುದ್ದು ಸಿಎಂ ಸಿದ್ದರಾಮಯ್ಯ ನಿನ್ನೆ ರೋಚಕ ತಿರುವು ಕೊಟ್ಟಿದ್ದರು. ನಾನೇ ಸಿಎಂ ಆಗಿದ್ದೀನಿ, ನಾನೇ ಮುಂದುವರೆಯುತ್ತೇನೆ ಎಂದು ಹೇಳಿದ್ದರು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಯೂ ಟರ್ನ್ ಹೊಡೆದಿದ್ದು, ಹೈಕಮಾಂಡ್ ಹೇಳಿದರೆ ಬದ್ಧವಾಗಿರುತ್ತೇವೆ ಎಂದು ಹೇಳಿದ್ದಾರೆ.
ಗದಗ, ನವೆಂಬರ್ 03: ಸಿಎಂ ಅಧಿಕಾರ ಹಂಚಿಕೆ ವಿಚಾರವಾಗಿ ಖುದ್ದು ಸಿಎಂ ಸಿದ್ದರಾಮಯ್ಯ ನಿನ್ನೆ ರೋಚಕ ತಿರುವು ಕೊಟ್ಟಿದ್ದರು. ನಾನೇ ಸಿಎಂ ಆಗಿದ್ದೀನಿ, ನಾನೇ ಮುಂದುವರೆಯುತ್ತೇನೆ ಎಂದು ಹೇಳಿದ್ದರು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಯೂ ಟರ್ನ್ ಹೊಡೆದಿದ್ದು, ಹೈಕಮಾಂಡ್ ಹೇಳಿದರೆ ಬದ್ಧವಾಗಿರುತ್ತೇವೆ ಎಂದು ಹೇಳಿದ್ದಾರೆ. ನಗದರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಹೈಕಮಾಂಡ್ ಪಕ್ಷ. ಹಾಗಾಗಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಭಯ ನಾಯಕರು ಭಾಗಿ
ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದು, ಜಾತಿಗಣತಿ ವರದಿ ಇನ್ನೂ ರಾಜ್ಯ ಸರ್ಕಾರಕ್ಕೆ ಸಲ್ಲಿಸಿಲ್ಲ. ಜಾತಿಗಣತಿ ವರದಿ ಸಲ್ಲಿಸಿದರೆ ಪರಿಶೀಲಿಸಿ ನಿರ್ಧರಿಸುತ್ತೇವೆ. ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಹೊಸಪೇಟೆ: ಗೊಂದಲವಿಲ್ಲ, ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ನಿನ್ನೆ ಸಿಎಂ ಸಿದ್ದರಾಮಯ್ಯ ಆಡಿದ ಈ ಮಾತು ಕಾಂಗ್ರೆಸ್ನಲ್ಲಿ ಸಂಚಲನ ಎಬ್ಬಿಸಿತ್ತು. ಅಧಿಕಾರ ಹಂಚಿಕೆ ಕುರಿತು ಮಾತನಾಡಬೇಡಿ ಅಂತಾ ಹೈಕಮಾಂಡ್ ಹೇಳಿದ್ದರೂ ಪ್ರತಿಯೊಬ್ಬ ನಾಯಕರು ಮಾತಾಡುವುದಕ್ಕೆ ಶುರು ಮಾಡಿದ್ದರು. ದಲಿತ ಸಿಎಂ ಕೂಗೂ ಎದ್ದಿದೆ.
ಇದನ್ನೂ ಓದಿ: ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ: ಡಿಸಿಎಂ ಹೇಳಿದ್ದಿಷ್ಟು…
ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಅಂತಾ ಸಿದ್ದರಾಮಯ್ಯ ಹೇಳಿರುವ ವಿಚಾರವಾಗಿ ಇಂದು ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳ ಮೇಲೆಯೇ ಗರಂ ಆಗಿದ್ದಾರೆ. ಯಾವ ಶೇರಿಂಗ್, ಹಂಚಿಕೊಳ್ಳುವುದಕ್ಕೆ ಯಾವ ಆಸ್ತಿನೂ ಇಲ್ಲ, ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಿದವರಿಗೆ ನೋಟಿಸ್ ಕೊಡುತ್ತೇವೆ ಎಂದಿದ್ದಾರೆ.
ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ: ಸಂಸದ ಡಿ.ಕೆ.ಸುರೇಶ್
ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಮಾತನಾಡಿದ್ದು, ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ, ಖಾಲಿ ಇದ್ದಾಗ ಚರ್ಚಿಸಿದರೆ ಅರ್ಥ ಇರುತ್ತೆ. ಮುಂದಿನ ಸಿಎಂ ಬಗ್ಗೆ ಕೆಲವರ ಅಭಿಪ್ರಾಯ ಇರುತ್ತೆ. ಆಡಳಿತ ನಡೆಸಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಗುರಿ ಇದೆ. ಸರ್ಕಾರ ಸುಭದ್ರವಾಗಿರಬೇಕು ಎನ್ನುವುದು ಇಬ್ಬರ ಗುರಿ ಎಂದು ಹೇಳಿದ್ದಾರೆ.
ಜಿ.ಪರಮೇಶ್ವರ್ಗೂ ಸಿಎಂ ಅವಕಾಶವಿದೆ: ಸಚಿವ ಕೆ.ಎನ್.ರಾಜಣ್ಣ
ಕಾಂಗ್ರೆಸ್ ಸಿಎಂ ವಿಚಾರವಾಗಿ ಸಚಿವ ಕೆ.ಎನ್.ರಾಜಣ್ಣ ಕೂಡ ಹೊಸ ಬಾಂಬ್ ಸಿಡಿಸಿದ್ದಾರೆ. ಸಿದ್ದರಾಮಯ್ಯರಂತೆಯೇ ಗೃಹ ಸಚಿವ ಜಿ.ಪರಮೇಶ್ವರ್ಗೂ ಕೂಡ ಸಿಎಂ ಆಗುವ ಅವಕಾಶವಿದೆ. ಸದ್ಯ ಡಾ.ಜಿ.ಪರಮೇರ್ ಹೋಂ ಮಿನಿಸ್ಟರ್ ಆಗಿದ್ದಾರೆ. ಮುಂದೆ ಏನು ಬೇಕಾದ್ರೂ ಆಗಬಹುದು ಎಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:31 pm, Fri, 3 November 23