ಬಿಜೆಪಿಯಲ್ಲಿ ಹಿರಿಯರಿಗೆ ಟಿಕೆಟ್ ಇಲ್ಲ ಅನ್ನೋದು ಊಹಾಪೋಹ, ಈ ಬಾರಿ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡ್ತೇನೆ: ಜಗದೀಶ್ ಶೆಟ್ಟರ್​

|

Updated on: Feb 26, 2023 | 4:56 PM

ಗುಜರಾತ್ ಮಾದರಿ ಎಲ್ಲಿದೆ, ಯಾರು ಹೇಳಿದ್ದಾರೆ. ಬಿಜೆಪಿಯ ಹಿರಿಯರಿಗೆ ಟಿಕೆಟ್ ಇಲ್ಲ ಅನ್ನೋದು ಊಹಾಪೋಹ. ಈ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡ್ತೇನೆ ಎಂದು ಮಾಜಿ ಸಿಎಂ ಶೆಟ್ಟರ್​ ಹೇಳಿದರು.

ಬಿಜೆಪಿಯಲ್ಲಿ ಹಿರಿಯರಿಗೆ ಟಿಕೆಟ್ ಇಲ್ಲ ಅನ್ನೋದು ಊಹಾಪೋಹ, ಈ ಬಾರಿ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡ್ತೇನೆ: ಜಗದೀಶ್ ಶೆಟ್ಟರ್​
ಮಾಜಿ ಸಿಎಂ ಜಗದೀಶ್ ಶೆಟ್ಟರ್
Image Credit source: livemint.com
Follow us on

ಕೊಪ್ಪಳ: ಗುಜರಾತ್ ಮಾದರಿ ಎಲ್ಲಿದೆ, ಯಾರು ಹೇಳಿದ್ದಾರೆ. ಬಿಜೆಪಿಯ ಹಿರಿಯರಿಗೆ ಟಿಕೆಟ್ ಇಲ್ಲ ಅನ್ನೋದು ಊಹಾಪೋಹ. ಈ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagdish Shettar)​ ಹೇಳಿದರು. ಜಿಲ್ಲೆಯ ಯಲಬುರ್ಗಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ಬಾರಿಯೂ ಲಿಂಗಾಯತ ಸಮುದಾಯ ಬಿಜೆಪಿ ಬೆಂಬಲಿಸುತ್ತೆ ಎಂದು ಹೇಳಿದರು. ರಾಜ್ಯದಲ್ಲಿ ಬಿಜೆಪಿ ಮುಖಂಡರು ಸಹ ಸಮರ್ಥರಿದ್ದಾರೆ. ಕಾಂಗ್ರೆಸ್ ಪಕ್ಷ ರಾಜ್ಯ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಅವರಿಗೆ ಮುಖವಿಲ್ಲ, ಅವರಲ್ಲಿ ನಾಯಕತ್ವವಿಲ್ಲ. ಭಾರತೀಯ ಜನತಾಪಕ್ಷ ಅಭಿವೃದ್ದಿ ಪರವಾಗಿದೆ ಎಂದು ಹೇಳಿದರು.

ರಾಜ್ಯಕ್ಕೆ ಮೋದಿ ಭೇಟಿ: ಕಾಂಗ್ರೆಸ್ ನಾಯಕರ ಟೀಕೆ 

ಪ್ರಧಾನಿ ಮೋದಿ ಭೇಟಿಗೆ ಕಾಂಗ್ರೆಸ್ ನಾಯಕರ ಟೀಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ಮೋದಿ ಭೇಟಿಯಿಂದ ರಾಜ್ಯದಲ್ಲಿ ಅಭಿವೃದ್ಧಿಯಾಗಲಿದೆ. ಅಭಿವೃದ್ಧಿ ಯೋಜನೆಗಾಗಿ ಪ್ರಧಾನಿ ಮೋದಿ ಬಂದರೆ ತಪ್ಪೇನು? ರಾಜ್ಯ ಸರ್ಕಾರದ ಬಗ್ಗೆ ಟೀಕಿಸಲು ಕಾಂಗ್ರೆಸ್ಸಿಗರಿಗೆ ವಿಷಯವಿಲ್ಲ. ಕಾಂಗ್ರೆಸ್​ನವರು ಸೋಲಿನ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಪ್ರಚಾರಕ್ಕೆ ಬಂದಿರಲಿಲ್ಲವೇ ಎಂದು ಪ್ರಶ್ನಿಸಿದರು. ಪ್ರಧಾನಿ ಮೋದಿ ಭೇಟಿಯಿಂದ ರಾಜ್ಯ ಬಿಜೆಪಿಗೆ ಅನುಕೂಲ ಆಗುತ್ತೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗಾವಿ ಹಾಗೂ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಎರಡು ಕಡೆ ಅಭಿವೃದ್ದಿ ಕಾರ್ಯ ಹಾಗೂ ರೋಡ್ ಶೋ ಮಾಡಲಿದ್ದಾರೆ. ನರೇಂದ್ರ ಮೋದಿ ವಿಶ್ವ ನಾಯಕರು. ಆರ್ಥಿಕತೆಯಲ್ಲಿ ದೇಶವನ್ನು ಮುನ್ನಡಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ: ನಾನು ಕಾಂಗ್ರೆಸ್ ಬಿಟ್ಟಾಯ್ತು, ಈಗ ಅಲ್ಲಿ ಇರೋದೆಲ್ಲಾ ಬರಿ ಕತ್ತೆಗಳೆ: ಸಿದ್ದರಾಮಯ್ಯಗೆ ಸಿ.ಎಂ.ಇಬ್ರಾಹಿಂ ಟಾಂಗ್

ಅರ್ಕಾವತಿ ಬಡಾವಣೆ ಡಿನೋಟಿಫೈ ನಲ್ಲಿ ಸಿದ್ದರಾಮಯ್ಯನವರಿಗೆ ಕ್ಲೀನ್ ಚಿಟ್ ನೀಡಿಲ್ಲ. ಕ್ಲೀನ್ ಚಿಟ್ ನೀಡಿದ್ದರೆ ಅಂದೆ ಸದನದಲ್ಲಿ ಮಂಡಿಸುತ್ತಿದ್ದರು. 986 ಎಕರೆ ಭೂಮಿಯನ್ನು ಡಿನೋಟಿಫೈ ಮಾಡಿದ್ದದ್ದನ್ನು ನಾನು ಅಂದು ಪ್ರತಿಪಕ್ಷವಾಗಿ ಸದನ ಗಮನ ಸೆಳೆದಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಹಾಗೂ ಡಿಕೆಶಿ ಬಿಟ್ಟರೇ ಬೇರೆ ಮುಖಗಳೇ ಇಲ್ಲ: ಲಕ್ಷ್ಮಣ ಸವದಿ

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ನಾಳೆ ಬೆಳಗಾವಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬರ್ತಿದ್ದಾರೆ. ನಾಳೆ ಬೆಳಗಾವಿ ಸಮಾವೇಶದಲ್ಲಿ 2.5 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಮೋದಿ, ಅಮಿತ್ ಶಾ ರಾಜ್ಯ ಭೇಟಿಗೆ ಕಾಂಗ್ರೆಸ್ ಕಿಡಿ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಮ್ಮ ಪಕ್ಷದಲ್ಲಿ ನಾಯಕರಿದ್ದಾರೆ, ಹೀಗಾಗಿ ನಾವು ಕರೆಸುತ್ತೇವೆ. ಕಾಂಗ್ರೆಸ್​ ಪಕ್ಷದಲ್ಲಿ ಯಾವುದೇ ನಾಯಕರಿಲ್ಲ.
ಸಿದ್ದರಾಮಯ್ಯ ಹಾಗೂ ಡಿಕೆಶಿ ಬಿಟ್ಟರೇ ಬೇರೆ ಮುಖಗಳೇ ಇಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಇಡೀ ವಿಶ್ವವೇ ಮೆಚ್ಚಿದೆ.

ಇದನ್ನೂ ಓದಿ: ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತ, ಸಿದ್ದರಾಮಯ್ಯ ಸೋಲುವುದು ಶತಃಸಿದ್ಧ: ಸಿ.ಎಂ.ಇಬ್ರಾಹಿಂ ಭವಿಷ್ಯ

ಇಷ್ಟುದಿನ ಕಾಂಗ್ರೆಸ್​ನವರು ಜನರ ಕಿವಿ ಮೇಲೆ ಹೂವು ಇಡುತ್ತಿದ್ದರು. ಈಗ ಕಾಂಗ್ರೆಸ್​ ನಾಯಕರೇ ಹೂವು ಇಟ್ಟುಕೊಳ್ಳುವಂತಾಗಿದೆ‌. ಚುನಾವಣೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ. ಅಥಣಿ ಕ್ಷೇತ್ರದಲ್ಲಿ ನಮ್ಮದೇ ಪಕ್ಷದ ಕುಮಟಳ್ಳಿ ಶಾಸಕರಿದ್ದಾರೆ‌. ಹೀಗಾಗೇ ನನ್ನ ಸ್ಪರ್ಧೆ ಬಗ್ಗೆ ನಾನು ತೀರ್ಮಾನ ಮಾಡೋಕ್ಕಾಗಲ್ಲ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

Published On - 4:50 pm, Sun, 26 February 23