2028ಕ್ಕೆ ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ನಾನು ಬೇಡಿಕೆ ಇಡುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ PWD ಸಚಿವ ಸತೀಶ್ ಜಾರಕಿಹೊಳಿ, 2028ಕ್ಕೆ ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ನಾನು ಬೇಡಿಕೆ ಇಡುತ್ತೇನೆ ಎಂದು ಹೇಳಿದ್ದಾರೆ. ಆ ಮೂಲಕ ನಾವು ಸಿಎಂ ಆಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸದ್ಯ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಹೇಳಿದ್ದಾರೆ. 

2028ಕ್ಕೆ ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ನಾನು ಬೇಡಿಕೆ ಇಡುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on:Nov 06, 2023 | 7:54 PM

ಬೆಂಗಳೂರು, ನವೆಂಬರ್​​​​​ 06: 2028ಕ್ಕೆ ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ನಾನು ಬೇಡಿಕೆ ಇಡುತ್ತೇನೆ ಎಂದು PWD ಸಚಿವ ಸತೀಶ್ ಜಾರಕಿಹೊಳಿ (satish jarkiholi) ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ಬೇರೆಯವರು ಕೇಳೋದು ಅವರವರ ಇಷ್ಟ. ನಾನು 2028ರಲ್ಲಿ ಸಿಎಂ ಸ್ಥಾನಕ್ಕೆ ಬೇಡಿಕೆ ಇಡುತ್ತೇನೆ. ರಾಜ್ಯದಲ್ಲಿ ಈಗ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಹೇಳಿದ್ದಾರೆ. ಆ ಮೂಲಕ ಸಿಎಂ ಆಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿ ಅಂತ ಹೇಳಿದ್ದಾರೆ. ಬೇರೆಯವರು ಹೇಳುವ ಅಗತ್ಯವಿಲ್ಲ. ರಾಜ್ಯದಲ್ಲಿ ಈಗ ಮುಖ್ಯಮಂತ್ರಿ ಬದಲಾವಣೆ ಪರಿಸ್ಥಿತಿ ಉದ್ಭವಿಸಿಲ್ಲ. ಪಕ್ಷದ ತೀರ್ಮಾನವೇ ನನ್ನ ತೀರ್ಮಾನ ಎಂದು ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದಲ್ಲಿ ವಾಕ್​ ಸ್ವಾತಂತ್ರ್ಯವಿಲ್ಲ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ವಿಚಾರವಾಗಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ರಾಜಕೀಯ ಭಾಷಣ ಮಾಡುತ್ತಾರೆ. ನಮ್ಮ ಪಕ್ಷದಲ್ಲಿ ವಾಕ್ ಸ್ವಾತಂತ್ರ್ಯವಿದೆ. ಭಾರತೀಯ ಜನತಾ ಪಕ್ಷದಲ್ಲಿ ವಾಕ್​ ಸ್ವಾತಂತ್ರ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬೆಳಗಾವಿ ರಾಜಕಾರಣದಲ್ಲಿ ಮತ್ತೆ ತಳಮಳ: ಸಚಿವ ಸತೀಶ್ ಜಾರಕಿಹೊಳಿ

ಒಂದು ರಾಜ್ಯದಲ್ಲಿ ಇನ್ನೊಂದು ರಾಜ್ಯದ ಬಗ್ಗೆ ಟೀಕಿಸುವುದು ಸಹಜ. ಪ್ರಧಾನಿ ಮೋದಿ ಆರೋಪ ಮಾಡಿದ್ದನ್ನು ಒಪ್ಪಬೇಕು ಅಂತಿಲ್ಲ. ನಾವು BJP ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದೆವು. ನಾವು ಬಿಜೆಪಿ ವಿರುದ್ಧ ಆರೋಪ ಮಾಡಿದಾಗ ಒಪ್ಪಿಕೊಂಡಿದ್ರಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಿಎಂ ಬದಲಾಗುವುದು ಫಿಕ್ಸ್: ಮೋದಿ ಹೇಳಿಕೆ ಬೆನ್ನಲ್ಲೇ ಹೊಸ ಬಾಂಬ್ ಸಿಡಿಸಿದ ಯತ್ನಾಳ್

ಸಿಎಂ ಬ್ರೇಕ್​ಫಾಸ್ಟ್​ ಮೀಟಿಂಗ್​ಗೆ ಗೈರು ವಿಚಾರವಾಗಿ ಮಾತನಾಡಿದ ಅವರು, ಅನಾರೋಗ್ಯದ ಕಾರಣ ಸಭೆಗೆ ಹೋಗಲು ಆಗಲಿಲ್ಲ. ಸಭೆಗೆ ಗೈರಾಗುವ ಬಗ್ಗೆ ಸಿಎಂ ಸಿದ್ದರಾಮಯ್ಯ ಗಮನಕ್ಕೂ ತಂದಿದ್ದೆ. ಮೀಟಿಂಗ್​ಗೆ ಹೋಗದಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಯಾರೂ ಬಹಿರಂಗ ಹೇಳಿಕೆ ನೀಡಬಾರದು ಅನ್ನೋದು ಸರಿ ಇದೆ ಎಂದು ಹೇಳಿದ್ದಾರೆ.

ಸಚಿವ ಸತೀಶ ಜಾರಕಿಹೊಳಿ ಅವರಿಗೆ ಎಲ್ಲ ರೀತಿಯಲ್ಲಿ ನಾಡಿನ ಸಿಎಂ ಆಗಲು ಅರ್ಹತೆಗಳಿವೆ ಎಂದು ರಾಜನಹಳ್ಳಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ನಿನ್ನೆ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:44 pm, Mon, 6 November 23

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು