AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಗೌಡರ ಮಾನಸ ಪುತ್ರ ಜೆಡಿಎಸ್​ಗೆ ಗುಡ್​ಬೈ, ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್…!

ಜೆಡಿಎಸ್‌ ತೊರೆಯುವುದರ ಬಗ್ಗೆ ವೈಎಸ್‌ವಿ ದತ್ತಾ ಅವರ ನಿರ್ಧಾರ ಸ್ಪಷ್ಟವಾಗಿದ್ದು, ಕಾಂಗ್ರೆಸ್‌ ಸೇರ್ಪಡೆಗೆ ದಿನಾಂಕ ಕೂಡ ನಿಗದಿಯಾಗಿದೆ.

ದೇವೇಗೌಡರ ಮಾನಸ ಪುತ್ರ ಜೆಡಿಎಸ್​ಗೆ ಗುಡ್​ಬೈ, ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್...!
ದೇವೇಗೌಡರ ಜೊತೆ ದತ್ತಾ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jan 06, 2023 | 4:16 PM

Share

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್‌ ಹಿರಿಯ ನಾಯಕ ವೈಎಸ್‌ವಿ ದತ್ತಾ (YSV Datta) ಈಗಾಗಲೇ ಜೆಡಿಎಸ್​ಗೆ (JDS) ಗುಡ್​ ಬೈ ಹೇಳಿದ್ದು, ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಇತ್ತೀಚೆಗೆ ಅಧಿಕೃತವಾಗಿ ಹೇಳಿದ್ದರು. ಆದ್ರೆ, ಯಾವಾಗ ಏನು ಎಂದು ಹೇಳಿರಲಿಲ್ಲ. ಇದೀಗ ದತ್ತಾ ಅವರು ಅಧಿಕೃತವಾಗಿ ಕಾಂಗ್ರೆಸ್(Congress) ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.

ಇದನ್ನೂ ಓದಿ: ಜೆಡಿ(ಎಸ್) ಪಕ್ಷದ ನಿಷ್ಠಾವಂತ ನಾಯಕ ವೈ ಎಸ್ ವಿ ದತ್ತಾ ಕಾಂಗ್ರೆಸ್ ಪಕ್ಷ ಸೇರುವ ನಿರ್ಧಾರ!

ಹೌದು…ಜೆಡಿಎಸ್ ವರಿಷ್ಠ ಹೆಚ್​.ಡಿ. ದೇವೇಗೌಡ (HD Devegowda) ಅವರ ಮಾನಸಪುತ್ರ ವೈ.ಎಸ್​.ವಿ.ದತ್ತಾ ಇದೇ ಜನವರಿ 15ರಂದು ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್​ ಆಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜ.15ರಂದು ದತ್ತಾ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸ್ವಗ್ರಾಮ ಯಗಟಿಯಲ್ಲಿ ಮಾತನಾಡಿದ ದತ್ತಾ, ಅನಿವಾರ್ಯವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಕರೆ ಬಂದಿದ್ದು, ಜನವರಿ 15ರ ಬಳಿಕ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪಕ್ಷ ಸೇರುತ್ತೇನೆ’ ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಸ್ಪಷ್ಟಪಡಿಸಿದರು.

ಕಳೆದ ಐವತ್ತು ವರ್ಷಗಳಿಂದ ಮಾಜಿ ಪ್ರಧಾನಿ ದೇವೇಗೌಡರು-ನನ್ನದು ತಂದೆ ಮಕ್ಕಳ ಸಂಬಂಧ ಆಗಿದೆ. ನಾನು ಎಲ್ಲೇ ಇದ್ದರೂ ಅವರ ಹಾರೈಕೆ ನನ್ನ ಮೇಲೆ ಇದ್ದೇ ಇರುತ್ತದೆ. ನನ್ನನ್ನ ವಿಧಾನ ಪರಿಷತ್ ಸದಸ್ಯನನ್ನಾಗಿ ಮಾಡಿದ್ದೇ ದೇವೇಗೌಡರು. ಅದು ನನ್ನ ರಾಜಕೀಯ ಜೀವನಕ್ಕೆ ಸಿಕ್ಕ ತಿರುವಾಗಿದೆ. ಇದೀಗ ಅನಿವಾರ್ಯವಾಗಿ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದೇನೆ. ಇದನ್ನ ಅವರಿಗೆ ಹೇಳಲು ಒಂದು ರೀತಿ ಮುಜುಗರವಾಗುತ್ತದೆ. ಆದರೆ, ದೇವೇಗೌಡರು ನನ್ನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬುದು ನನ್ನ ಭಾವನೆ ಆಗಿದೆ ಎಂದು ಹೇಳುತ್ತ ಭಾವುಕರಾದರು.

ಕಡೂರಿನಲ್ಲಿ ಜನಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಕಳೆದ ಒಂದೂವರೆ ವರ್ಷದಿಂದಲೂ ತಾಲೂಕಿನಲ್ಲಿ ಎಲ್ಲೇ ಹೋದರೂ ಕಾಂಗ್ರೆಸ್ ಸೇರಬೇಕೆಂಬ ಸಾರ್ವತ್ರಿಕ ಅಭಿಪ್ರಾಯ ವ್ಯಕ್ತವಾಗುತ್ತಿತ್ತು. ಹಾಗಾಗಿ, ಜನಾಭಿಪ್ರಾಯ, ಅಭಿಮಾನಿಗಳು ಹಾಗೂ ಕಾರ್ಯಕರ್ತರ ಅಭಿಪ್ರಾಯದಂತೆ ನನ್ನ ಸಮಾನ ಮನಸ್ಕ ಸ್ನೇಹಿತರಿರುವ ಕಾಂಗ್ರೆಸ್ ಪಕ್ಷ ಸೇರುವ ನಿರ್ಧಾರ ಮಾಡಿದ್ದೇನೆ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ