ಚಾಮರಾಜನಗರ ಅ.07: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಬಿ ಶ್ರೀರಾಮುಲು (Sriramulu) ಸೋಲುಕಂಡಿದ್ದು, ರಾಜಕಾರಣದಲ್ಲಿ ಅಚ್ಚರಿ ಮೂಡಿಸಿತ್ತು. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸೋಲುಂಡ ಬಳಿಕ ತರೆಮರೆಯಲ್ಲಿದ್ದಾರೆ. ರಾಜ್ಯ ಬಿಜೆಪಿಯಲ್ಲಿ (BJP) ಅಷ್ಟೋಂದು ಆ್ಯಕ್ಟಿವ್ ಆಗಿ ಕಾಣಿಸಿಕೊಳ್ಳುತ್ತಿಲ್ಲ. ಈ ಮಧ್ಯೆ ಶ್ರೀರಾಮುಲು ಅವರು ಲೋಕಸಭಾ ಚುನಾವಣೆಗೆ (Lok Sabha Election) ಸ್ಪರ್ಧಿಸುತ್ತಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಿಂದ ಕೇಳಿಬುರತ್ತಿತ್ತು. ಆದರೆ ಇದಕ್ಕೆ ಖುದ್ದು ಬಿಜೆಪಿ ನಾಯಕ ಬಿ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.
ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಸ್ಪರ್ಧಿಸುವುದರ ಕುರಿತು ಯೋಚನೆ ಮಾಡಿಲ್ಲ. ನಾನು ಸ್ಪರ್ಧಿಸುವ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು. ಯಾರಿಗೆ ಟಿಕೆಟ್ ನೀಡುತ್ತಾರೆ ಅವರ ಪರವಾಗಿ ನಾವು ಕೆಲಸ ಮಾಡುತ್ತೇವೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 25ಕ್ಕೂ ಅಧಿಕ ಸ್ಥಾನವನ್ನ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಎಸ್ಟಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರವಾಗಿ ಮಾತನಾಡಿದ ಅವರು ಇದು ಅವರ ಪಕ್ಷದ ಆಂತರಿಕ ವಿಚಾರ ನಾನು ಪ್ರಶ್ನೆ ಮಾಡುವುದಿಲ್ಲ. ಸೂಕ್ತ ಸ್ಥಾನ ಮಾನ ನೀಡುವುದು ಅವರಿಗೆ ಬಿಟ್ಟ ವಿಚಾರ ಎಂದರು.
ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ನಡೆದ ಧಂಗೆ ವಿಚಾರವಾಗಿ ಮಾತನಾಡಿದ ಅವರು ಹಿಂದುಗಳನ್ನು ಓಲೈಸಲು ಸಾದ್ಯವಿಲ್ಲವೆಂದು ಒಂದು ಕೋಮಿನ ಮತಕ್ಕಾಗಿ ಕಾಂಗ್ರೆಸ್ ಮುಂದಾಗಿದೆ. ಹಿಂದು ಕಾರ್ಯಕರ್ತರ ಮೇಲೆ ಪ್ರಕರಣ ಹಾಕುವುದು ದೌರ್ಜನ್ಯ ನಡೆಸುವಂತ ಕೆಲಸಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಎಸ್ಸಿ, ಎಸ್ಟಿಯ 11 ಸಾವಿರ ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುತ್ತಿದೆ. ಇವರು ಚುನಾವಣಾ ಸಂದರ್ಭದಲ್ಲಿ ಈ ವಿಚಾರವನ್ನು ಪ್ರಸ್ಥಾಪ ಮಾಡದೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು.
ಜೆಡಿಎಸ್-ಬಿಜೆಪಿ ಮೈತ್ರಿ ಕುರಿತು ಮಾತನಾಡಿದ ಅವರು ಹಿರಿಯರ ನಿರ್ಧಾರ ಅಂತಿಮ ನಿರ್ಧಾರವಾಗಲಿದೆ. ಎಲ್ಲವನ್ನು ಅಳೆದು ತೂಗಿ ಮೈತ್ರಿ ಆಗಲಿದೆ. ಬಿಜೆಪಿಯಲ್ಲಿ ಉಸಿರು ಗಟ್ಟಿಸುವ ಪರಿಸ್ಥಿತಿ ಖಂಡಿತ ಇಲ್ಲ. ನಾವೆಲ್ಲ ಒಂದಾಗಿದ್ದೇವೆ ಚೆನ್ನಾಗಿದ್ದೇವೆ. ಲೋಕಸಬೆ ಚುನಾವಣೆ ಬಳಿಕ ಕಾಂಗ್ರೆಕ್ ಸರ್ಕಾರ ಪತನಗೊಳ್ಳುತ್ತೆ ಎಂಬ ವಿಚಾರವಾಗಿ ಮಾತನಾಡಿದ ಅವರು 136 ಜನ ಶಾಸಕರಿದ್ದಾರೆ ಸರ್ಕಾರ ಬೀಳೋದೆಲ್ಲಿ, ಆದರೆ ಆರ್ಥಿಕ ದಿವಾಳಿ ಆಗುವುದಂತು ಪಕ್ಕಾ ಎಂದು ಭವಿಷ್ಯ ನುಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ