ನಾನು ಈ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ

ನಾನು ಈ ಸಲ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ನನಗೆ 91 ವರ್ಷ ವಯಸ್ಸಾಗಿದೆ. ಜ್ಞಾಪಕ ಶಕ್ತಿ ಇದೆ, ಓಡಾಡಲು ಕಷ್ಟವಾಗುತ್ತದೆ. ಆದರೂ‌ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಹೇಳಿದರು.

ನಾನು ಈ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ
ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ
Follow us
Sunil MH
| Updated By: ವಿವೇಕ ಬಿರಾದಾರ

Updated on:Jan 13, 2024 | 2:36 PM

ಬೆಂಗಳೂರು, ಜನವರಿ 13: ನಾನು ಈ ಸಲ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಸ್ಪರ್ಧೆ ಮಾಡಲ್ಲ. ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ನನಗೆ 91 ವರ್ಷ ವಯಸ್ಸಾಗಿದೆ. ಜ್ಞಾಪಕ ಶಕ್ತಿ ಇದೆ, ಓಡಾಡಲು ಕಷ್ಟವಾಗುತ್ತದೆ. ಆದರೂ‌ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (HD Devegowda) ಅವರು ಹೇಳಿದರು. ಬೆಂಗಳೂರಿನ ಜೆಡಿಎಸ್​​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಬಗ್ಗೆ ನಿರ್ಧಾರ ಮಾಡಿಲ್ಲ. ಗಾಳಿ ಸುದ್ದಿಗಳ ಬಗ್ಗೆ ನಾನು ಮಾತನಾಡಲ್ಲ. ಮೋದಿ ಅವರು ಏನಾದರೂ ಹೇಳಿದರೇ, ಅಗ ನಾವೆಲ್ಲಾ ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದರು.

ಇನ್ನು ಹೆಚ್​ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗುವ ವಿಚಾರ ನನ್ನ ಮುಂದೆ ಚರ್ಚೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಅವರು ಯಾವುದನ್ನೂ ಬಿಟ್ಟುಕೊಡುವುದಿಲ್ಲ. ಅವರ ಜೊತೆಗಿರುವ ಪೊಲೀಸರಿಗೂ ಗೊತ್ತಾಗಲ್ಲ ಎಂದು ಹೇಳಿದರು.

ಹಾಸನದಿಂದ ಪ್ರಜ್ವಲ್​ ಸ್ಪರ್ಧೆ: ಸುಳಿವು ಬಿಟ್ಟುಕೊಟ್ಟ ದೇವೇಗೌಡ

ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅಥವಾ ಡಾ.ಮಂಜುನಾಥ್ ಯಾರು ಸ್ಪರ್ಧೆ ಮಾಡುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾಕೆ ಆ ಸಮಸ್ಯೆಗಳು? ಪ್ರಜ್ವಲ್​ಗೆ ಪ್ರಧಾನಿ ಮೋದಿ ಅವರು ಆಶೀರ್ವಾದ ಮಾಡಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಅವರು ಕೂಡಾ ಆಶೀರ್ವಾದ ಮಾಡುತ್ತಾರೆ. ನಾನೂ ಆಶೀರ್ವಾದ ಮಾಡುತ್ತೇನೆ, ಜನರು ಆಶೀರ್ವಾದ ಮಾಡುತ್ತಾರೆ ಎಂದು ಹೇಳುವ ಮೂಲಕ ಹಾಸನದಿಂದ ಮತ್ತೆ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುತ್ತಾರೆ ಎಂಬ ಸುಳಿವು ಬಿಟ್ಟುಕೊಟ್ಟರು.

ಇದನ್ನೂ ಓದಿ: ಕಾಂಗ್ರೆಸ್ಸಿಗರು ಸೇಡಿನ ರಾಜಕಾರಣ ಮಾಡಿ ತುಳಿಯಲು ಹೊರಟಿದ್ದಾರೆ: ಶ್ರೀಕಾಂತ್ ಪ್ರಕರಣ ಉಲ್ಲೇಖಿಸಿ ದೇವೇಗೌಡ ವಾಗ್ದಾಳಿ

ಸಿದ್ದರಾಮಯ್ಯ ರಾಮನ ದರ್ಶನ ಮಾಡಿಕೊಂಡು ಬರಲಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಮನ ದರ್ಶನ ಮಾಡಿಕೊಂಡು ಬರಲಿ. ಸಿಎಂ ಸಿದ್ದರಾಮಯ್ಯ ಅವರು ಅಯೋಧ್ಯೆಗೆ ಜನವರಿ 22ರಂದು ಹೋಗುವುದಿಲ್ಲ ನಂತರ ಹೋಗುತ್ತೇನೆಂದು ಹೇಳಿದ್ದಾರೆ. ಅವರ ಪಕ್ಷ ನಿರ್ಧಾರ ತೆಗೆದುಕೊಂಡಿದೆ. ಮುಜರಾಯಿ ಇಲಾಖೆ ದೇವಾಲಯದಲ್ಲಿ ಪೂಜೆಗೆ ಸೂಚಿಸಿದೆ. ಸಾಫ್ಟ್ ಹಿಂದುತ್ವವೋ, ಹಾರ್ಡ್ ಹಿಂದುತ್ವವೋ ಒಟ್ಟಿನಲ್ಲಿ ಸಿದ್ದರಾಮಯ್ಯ ರಾಮನ ದರ್ಶನ ಮಾಡಿಕೊಂಡು ಬರಲಿ. ಶ್ರೀರಾಮನ ಆಶೀರ್ವಾದ ಪಡೆದುಕೊಳ್ಳಲಿ. ನಾನು ಆಯೋಧ್ಯೆಗೆ ಭೇಟಿ ನೀಡುತ್ತೇನೆ. ಸಿದ್ದರಾಮಯ್ಯ ಯುವನಿಧಿ ಕಾರ್ಯಕ್ರಮ ತಂದಿದ್ದಾರೆ. ಒಳ್ಳೆಯದು, ನಾನು ಅದನ್ನ ಅಭಿನಂದಿಸುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:27 pm, Sat, 13 January 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್