AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣರಂಗದಿಂದ ಓಡಿ ಹೋಗುವ ಹೇಡಿ ನಾನಲ್ಲ ಎಂದ ಸಿದ್ದರಾಮಯ್ಯ: ಏನಿದು ಸಿಎಂ ಸರಣಿ ಪೋಸ್ಟ್​ಗಳ ಮರ್ಮ?

ಸಿಎಂ ಸಿದ್ದರಾಮಯ್ಯರ ಸರಣಿ ಟ್ವೀಟ್‌ಗಳು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿವೆ. ರಣರಂಗದಿಂದ ಓಡುವ ಹೇಡಿ ನಾನಲ್ಲ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವೆ ಎಂದಿರುವ ಸಿದ್ದರಾಮಯ್ಯ, ತಮ್ಮ ರಾಜಕೀಯ ಜೀವನದ ಕಷ್ಟಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಇನ್ನು ಈ ಟ್ವೀಟ್‌ಗಳು ಸಿಎಂ ಕುರ್ಚಿ ಕದನಕ್ಕೂ ಕಾರಣವಾಗಿದೆ.

ರಣರಂಗದಿಂದ ಓಡಿ ಹೋಗುವ ಹೇಡಿ ನಾನಲ್ಲ ಎಂದ ಸಿದ್ದರಾಮಯ್ಯ: ಏನಿದು ಸಿಎಂ ಸರಣಿ ಪೋಸ್ಟ್​ಗಳ ಮರ್ಮ?
ಸಿಎಂ ಸಿದ್ದರಾಮಯ್ಯ
ಗಂಗಾಧರ​ ಬ. ಸಾಬೋಜಿ
|

Updated on:Feb 21, 2026 | 6:27 PM

Share

ಬೆಂಗಳೂರು, ಫೆಬ್ರವರಿ 21: ಸಿಎಂ ಸಿದ್ದರಾಮಯ್ಯ (Siddaramaiah) ನಿನ್ನೆ ಮಾಡಿದ ಸರಣಿ ಟ್ವೀಟ್​ಗಳು ಸದ್ಯ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಪಕ್ಷಗಳ ನಾಯಕರಿಗೆ ಸಿದ್ದರಾಮಯ್ಯ ಮಾಡಿರುವ ಪೋಸ್ಟ್​ಗಳೇ ಅಸ್ತ್ರವಾಗಿವೆ. ಇನ್ನು ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ ಅಂತಾ ಅವರ ಆಪ್ತ ಶಾಸಕರು ನೀಡುತ್ತಿರುವ ಡೇಟ್​ಗಳು ಕಾಂಗ್ರೆಸ್​ ಪಕ್ಷದಲ್ಲಿ ಪಟ್ಟದ ಕಾಳಗವನ್ನ ತೀವ್ರಗೊಳಿಸಿದೆ.

ರಣರಂಗದಿಂದ ಓಡಿ ಹೋಗುವ ಹೇಡಿ ನಾನಲ್ಲ

ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರ ಇರೋವರೆಗೆ ಹೋರಾಡುತ್ತೇನೆ. ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು-ಮುಳ್ಳುಗಳ ಹಾದಿಯಾಗಿತ್ತು. ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ. ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ. ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ನನ್ನ ವಿರುದ್ಧ ಯಾಕೆ ಷಡ್ಯಂತ್ರ ಮಾಡುತ್ತಿದ್ದಾರೆ ಎನ್ನುವುದೂ ನನಗೆ ಗೊತ್ತಿದೆ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವವರೆಗೆ ನಡೆಸುತ್ತೇನೆ, ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದಿದ್ದಾರೆ.

ಸಾಮಾಜಿಕ ನ್ಯಾಯವೆಂದರೆ ನಾನು ಆರಿಸಿಕೊಂಡ ಬದುಕಿನ ಹಾದಿ

ಸಾಮಾಜಿಕ ನ್ಯಾಯ ಎನ್ನುವುದು ನನ್ನ ಪಾಲಿಗೆ ಒಂದು ಸಿದ್ಧಾಂತ ಅಲ್ಲ, ಅದು ಸರ್ವ ಸಮಾನತೆಯ ಗುರಿಯನ್ನು ತಲುಪಲು ನಾನು ಆರಿಸಿಕೊಂಡ ಬದುಕಿನ ಹಾದಿ. ಸಾಮಾನ್ಯವಾಗಿ ಸಾಮಾಜಿಕ ನ್ಯಾಯ ಎಂದರೆ ಯಾರಿಂದಲೋ ಕಿತ್ತು, ಇನ್ನಾರಿಗೋ ಹಂಚುವ ಜನವಿರೋಧಿಯಾದ, ತಾರತಮ್ಯದ ನೀತಿ ಎಂಬಂತೆ ಬಿಂಬಿಸಲಾಗುತ್ತಿದೆ. ಸಂಪತ್ತು, ಅಧಿಕಾರ ಮತ್ತು ಅವಕಾಶಗಳು ಎಲ್ಲರಿಗೂ ಸಮಾನವಾಗಿ ಹಂಚಿಕೆಯಾಗಬೇಕು. ಅಭಿವೃದ್ದಿಯ ಫಲವನ್ನು ಜಾತಿ, ಧರ್ಮ, ಪ್ರದೇಶಗಳ ಭೇದವಿಲ್ಲದೆ ಸರ್ವರಿಗೂ ಸಮಾನವಾಗಿ ಹಂಚಿಕೆಯಾಗಬೇಕೆನ್ನುವುದು ಸಂವಿಧಾನದ ಆಶಯವಾಗಿ ಹೊರಹೊಮ್ಮಿರುವ ಸಾಮಾಜಿಕ ನ್ಯಾಯದ ಪರಿಕಲ್ಪನೆ. ಇದೇ ನಿಜವಾದ ವೈಜ್ಞಾನಿಕವಾದ ಅಭಿವೃದ್ಧಿ ಮಾದರಿ. ಜಾತಿ, ಲಿಂಗ, ವರ್ಗ, ಪ್ರದೇಶಗಳ ತಾರತಮ್ಯ ನಿವಾರಣೆಗಳ ಜೊತೆಯಲ್ಲಿ ನಗರ ಮತ್ತು ಹಳ್ಳಿಗಳ ನಡುವಿನ ಅಂತರವನ್ನು ನಿವಾರಿಸುವುದು ಕೂಡಾ ಸಾಮಾಜಿಕ ನ್ಯಾಯವೇ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಲೇವಡಿ

ನಿನ್ನೆ ಸಿಎಂ ಸಿದ್ದರಾಮಯ್ಯ ಮಾಡಿರುವ ಸರಣಿ ಟ್ವೀಟ್​ಗಳು ಸಿಎಂ ಕುರ್ಚಿ ಕಾಳಗಕ್ಕೆ ಹೊಸ ಆಯಾಮ ತಂದು ಕೊಟ್ಟಿವೆ. ಏಕೆಂದರೆ ಸಿಎಂ ಬಳಸಿದ ಪದಗಳು ಅಷ್ಟು ಹರಿತವಾಗಿವೆ. ಇದೆಲ್ಲವನ್ನ ಸಿಎಂ ಸಿದ್ದರಾಮಯ್ಯ ಯಾರಿಗೆ ಹೇಳಿದ್ದು, ಯಾಕೆ ಅನ್ನೋ ಪ್ರಶ್ನೆ ರಾಜಕಾರಣದಲ್ಲಿ ಹರಿದಾಡುತ್ತಿದೆ. ಆದರೆ ಜೆಡಿಎಸ್, ಬಿಜೆಪಿ ನಾಯಕರು ಸಿಎಂರ ಈ ಮಾತುಗಳ ಕಾಂಗ್ರೆಸ್​ನವರಿಗೆ ಅಂತಿದ್ದಾರೆ.

ಇನ್ನು ಕಾಂಗ್ರೆಸ್ ನಾಯಕರು ಸಿಎಂ ಮಾತು ಕೈ ಪಡೆಗೆ ಹೇಳಿದ್ದು ಅನ್ನೋದನ್ನ ತಳ್ಳಿಹಾಕ್ತಿದ್ದಾರೆ. ಡಿಕೆ ಶಿವಕುಮಾರ್​ ಆಪ್ತ ಶಾಸಕ ಇಕ್ಬಾಲ್ ಹುಸೇನ್ ನಮ್ಮಲ್ಲಿ ಯಾವ ಪಟ್ಟಭದ್ರ ಶಕ್ತಿ ಇಲ್ಲ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:26 pm, Sat, 21 February 26

ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ