AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರನ್ನು ನಾನು ರಕ್ಷಣೆ ಮಾಡುತ್ತೇನೆ ಎಂಬ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಮುಸ್ಲಿಮರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ, ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ. ನಿಮ್ಮನ್ನು (ಮುಸ್ಲಿಂ) ನಾನು ರಕ್ಷಣೆ ಮಾಡುತ್ತೇನೆ ಎಂಬ ತಮ್ಮ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಮುಸ್ಲಿಮರನ್ನು ನಾನು ರಕ್ಷಣೆ ಮಾಡುತ್ತೇನೆ ಎಂಬ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
Sunil MH
| Updated By: ವಿವೇಕ ಬಿರಾದಾರ

Updated on:Dec 05, 2023 | 1:43 PM

ಬೆಳಗಾವಿ ಡಿ.05: ದೇಶದ ಸಂಪತ್ತನ್ನು ಮುಸ್ಲಿಮರಿಗೆ (Muslim) ಹಂಚುತ್ತೇನೆ, ನಿಮ್ಮನ್ನು (ಮುಸ್ಲಿಂ) ನಾನು ರಕ್ಷಣೆ ಮಾಡುತ್ತೇನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೇಳಿಗೆ ಸ್ಪಷ್ಟನೆ ನೀಡಿದ್ದಾರೆ. ವಾಟ್​​ ಇಸ್ ರಾಂಗ್ ಇನ್ ದ್ಯಾಟ್. ಮುಸ್ಲಿಮರು ಸೇರಿ ಎಲ್ಲರನ್ನೂ ರಕ್ಷಣೆ ಮಾಡುತ್ತೇವೆಂದು ನಾನು ಹೇಳಿದ್ದು. ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಒಂದು ಪತ್ರಿಕೆ ಮಾತ್ರ ನಾನು ಹೇಳಿದ್ದನ್ನು ಸರಿಯಾಗಿ ಬರೆದಿದೆ. ಅದನ್ನ ಬಿಟ್ಟು ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸ್ಪಷ್ಟನೆ ನೀಡಿದರು.

ಸಿಎಂ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿ

ಸೋಮವಾರ (ಡಿ.04) ರಂದು ಮುಖ್ಯಮಂತ್ರಿಗಳು ಆಡಿದ ಮಾತು ದೇಶ ಮತ್ತು ರಾಜ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಹಿಂದೆ ಟಿಪ್ಪು ಮೇಲೆ ಅತಿಯಾದ ಪ್ರೀತಿ ತೋರಿಸಿ ಏನಾಯಿತು? ಹಿಂದೂಗಳನ್ನು ಎರಡನೇ ದರ್ಜೆ ಪ್ರಜೆಗಳ ರೀತಿ ನೋಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ: ಸಿಎಂ ಸಿದ್ದರಾಮಯ್ಯ

ಅಲ್ಪಸಂಖ್ಯಾತರು, ಬಹುಸಂಖ್ಯಾತರು ಅನ್ನೋದನ್ನು ಬಿಡಬೇಕು

ದೊಡ್ಡ ಕೋಮುವಾದಿ ಅಂದರೇ ಕಾಂಗ್ರೆಸ್​ನವರು. ಸಿದ್ದರಾಮಯ್ಯ ದೊಡ್ಡ ಕೋಮುವಾದಿ. ಸುಖದಲ್ಲಿ ತೇಲುತ್ತಿರುವ ವ್ಯಕ್ತಿ ಅಂದರೆ ಅದು ಸಿದ್ದರಾಮಯ್ಯ. ಮುಖ್ಯಮಂತ್ರಿಗಳು ಅಲ್ಪಸಂಖ್ಯಾತರು, ಬಹುಸಂಖ್ಯಾತರು ಅನ್ನೋದನ್ನು ಬಿಡಬೇಕು. ರಾಜಕೀಯ ಸಲುವಾಗಿ ಬರಿ ಮತಕ್ಕಾಗಿ ಪುಷ್ಠೀಕರಣ ನೀಡುತ್ತಿದ್ದಾರೆ. ಈ ರೀತಿಯ ವಿಶೇಷ ಹೇಳಿಕೆ ಅಷ್ಟು ಸೂಕ್ತವಲ್ಲ. ನಮ್ಮ ಸಮಾಜದಲ್ಲಿ ಸಮಸ್ಯೆಯಿಂದ ಕಾಡುತ್ತಿದ್ದರೆ ಅದು ಕಾಂಗ್ರೆಸ್ ಎಂದು ಎಂದು ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯನವರು ಒಳ್ಳೆಯ ಆಡಳಿತ ಕೊಟ್ಟು, ಭ್ರಷ್ಟಾಚಾರ ನಿರ್ಮೂಲನೆ ಮಾಡಿ ಜನಪರವಾಗಿ ಕೆಲಸ ಮಾಡಿದರೇ, ಎಲ್ಲಾ ಸಮುದಾಯಗಳಿಗೂ ಸಲ್ಲುವಂತಹದ್ದು ಆಗಲಿದೆ. ಗುಣಮಟ್ಟದ ಆರೋಗ್ಯ ಸೇವೆ ಕೊಡುತ್ತಿಲ್ಲ. ಜನರಿಗೆ ಸಮರ್ಪಕವಾಗಿ ವಿದ್ಯುತ್ ಕೊಡುತ್ತಿಲ್ಲ. ಬರ, ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಪರಿಹಾರ ಕೊಡುತ್ತಿಲ್ಲ. ನಿಮ್ಮ ಪಾದಾರ್ಪಣೆ ವೇಳೆ ಹಲವು ಸಮಸ್ಯೆಗಳು‌ ತಲೆದೂರಿವೆ. ಕಿವಿಗೆ ಹೂವು ಇಡುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Tue, 5 December 23