ಕೊಲೆಯಾದ ಮೂವರ ನಿವಾಸಕ್ಕೆ ಭೇಟಿ ನೀಡುತ್ತೇನೆ: ಎಚ್.ಡಿ.ಕುಮಾರಸ್ವಾಮಿ
ರಾಜ್ಯದ ಕರಾವಳಿ ಭಾಗದಲ್ಲಿ ಕೊಲೆಯಾದವರ ಮೂವರ ನಿವಾಸಕ್ಕೆ ಭೇಟಿ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಯಾವುದೇ ಕೊಲೆ ನಡೆಯಲಿಲ್ಲ. ಬಿಜೆಪಿ ಅವಧಿಯಲ್ಲಿ ಯಾಕೆ ಕೊಲೆಗಳಾಗುತ್ತಿವೆ ಎಂದು ಅವರು ಪ್ರಶ್ನಿಸಿದ್ದಾರೆ.
ಬೀದರ್: ರಾಜ್ಯದ ಕರಾವಳಿ ಭಾಗದಲ್ಲಿ ಕೊಲೆಯಾದವರ ಮೂವರ ನಿವಾಸಕ್ಕೆ ಭೇಟಿ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (H.D.Kumaraswamy) ಹೇಳಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ಯುವಕರನ್ನು ಬಿಜೆಪಿ ನಾಯಕರು ಗುಲಾಮರನ್ನಾಗಿ ಮಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಯಾವುದೇ ಕೊಲೆ ನಡೆಯಲಿಲ್ಲ. ಬಿಜೆಪಿ ಅವಧಿಯಲ್ಲಿ ಯಾಕೆ ಕೊಲೆಗಳಾಗುತ್ತಿವೆ ಎಂದು ಪ್ರಶ್ನಿಸಿದರು.
ಬೀದರ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಎನ್ಐಎಗೆ ಕೊಡುತ್ತೇವೆಂದು ಹೇಳಿದ್ದಾರೆ. ಆದರೆ ಅವರಿಗೆ ಕೊಟ್ಟಿರುವ ಈ ಹಿಂದಿನ ಪ್ರಕರಣಗಳು ಐದಾರು ವರ್ಷಕಳೆದರೂ ಏನಾಗಿದೆ ಎಂದು ಗೊತ್ತಾಗಿಲ್ಲ. ಹೀಗಿದ್ದಾಗ ಎನ್ಐಎ ಅಧಿಕಾರಿಗಳಿಗೆ ಪ್ರವೀಣ್ ಕೊಲೆ ಪ್ರಕರಣವನ್ನು ಕೊಟ್ಟರೆ ಅದರ ತನಿಕೆ ಮುಗಿಸಲು ಎಷ್ಟು ವರ್ಷಗಳು ಬೇಕು ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಪ್ರವೀಣ್ ಕುಟುಂಬದ ಹೆಣ್ಣು ಮಕ್ಕಳು ಪ್ರಕರಣವನ್ನು ಎನ್ಐಎಗೆ ವಹಿಸಿ ಎಂದು ಕೇಳಿದ್ದಾರೆ. ಪಾಪ ಅವರಿಗೆ ಅದರ ಬಗ್ಗೆ ಗೊತ್ತಿಲ್ಲ. ಪ್ರಕರಣವನ್ನು ತನಿಖೆ ನಡೆಸುವ ಅಧಿಕಾರಿಗಳು ನಮ್ಮಲ್ಲಿಯೇ ಇದ್ದಾರೆ. ಅವರಿಗೆ ಕೊಡಿ ಎಂದು ಹೇಳಿದ್ದಾರೆ.
ನಾನು ಯಾವ ಸಂಘಟನೆಯನ್ನು ಕೂಡ ನಿಷೇಧ ಮಾಡಿ ಎಂದು ಹೇಳುವುದಿಲ್ಲ. ಆದರೆ ಜನ ಸಾಮಾನ್ಯರ ಸಮಸ್ಯೆಗೆ ಹೋರಾಡಿ ಎಂದಷ್ಟೇ ಹೇಳುತ್ತೇನೆ. ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ನಾಯಕರು ಯುವಕರನ್ನ ಗುಲಾಮರನ್ನಾಗಿ ಮಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಯಾಕೆ ಕೊಲೆಗಳಾಗಲಿಲ್ಲ? ಬಿಜೆಪಿ ಅವದಿಯಲ್ಲಿ ಯಾಕೆ ಕೊಲೆಗಳಾಗುತ್ತಿವೆ? ಸರಕಾರ ಜೈ ಬೀಮ್ ಸಿನಿಮಾ ನೋಡಲಿ, ದೇಶದ ಕಾನೂನು ಪೊಲೀಸ್ ವ್ಯವಸ್ಥೆ ಹೆಗಿದೆ ಅನ್ನೊದು ಗೊತ್ತಾಗುತ್ತೆ ಎಂದರು.
ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತರ ಹರ್ಷ ಬಳಿಕ ಕರಾವಳಿಯಲ್ಲಿ ಮಸೂದ್, ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು, ಫಾಜಿಲ್ ಕೊಲೆಗಳು ನಡೆದವು. ಸರಣಿ ಕೊಲೆಗಳಿಂದ ಇಡೀ ರಾಜ್ಯವೇ ಬೆಚ್ಚಿಬಿದ್ದಿದ್ದು, ರಾಜಕೀಯ ಕೆಸರೆರಚಾಟಗಳು ನಡೆಯುತ್ತಿವೆ. ಇನ್ನೊಂದೆಡೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳದ ರಾಜ್ಯ ಬಿಜೆಪಿ ಸರ್ಕಾರವನ್ನು ವಿಪಕ್ಷಗಳು ಮಾತ್ರವಲ್ಲದೆ ಬಿಜೆಪಿ ಕಾರ್ಯಕರ್ತರೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.