ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಅನುಮಾನ; ಕೈ ನಾಯಕ ಗುಲಾಂ ನಬಿ ಆಜಾದ್ ಭವಿಷ್ಯ

Ghulam Nabi Azad: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಅನುಮಾನ; ಕೈ ನಾಯಕ ಗುಲಾಂ ನಬಿ ಆಜಾದ್ ಭವಿಷ್ಯ
ಗುಲಾಂ ನಬಿ ಆಜಾದ್

ಪೂಂಚ್: 2024ಕ್ಕೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಬಹುಮತದಿಂದ ಗೆಲ್ಲುವ ಸಾಧ್ಯತೆ ಕಡಿಮೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್​ ಸರ್ಕಾರ ರಚಿಸುವ ಪರಿಸ್ಥಿತಿಯಿದೆ ಎಂದು ನನಗೆ ಅನಿಸುತ್ತಿಲ್ಲ ಎನ್ನುವ ಮೂಲಕ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಮುಂದಿನ ಚುನಾವಣೆಯಲ್ಲಿ ತಮ್ಮ ಪಕ್ಷ ಬಹುಮತ ಪಡೆಯುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಅವರ ಈ ಹೇಳಿಕೆಯಿಂದ ಕಾಂಗ್ರೆಸ್​ಗೂ ಮುಜುಗರ ಉಂಟಾಗಿದ್ದು, ಬಿಜೆಪಿ ಪಾಳಯದಲ್ಲೂ ಚರ್ಚೆಗೆ ಕಾರಣವಾಗಿದೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ಕಾಂಗ್ರೆಸ್​ ಸಭೆಯಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ 370 ವಿಧಿಯನ್ನು ರದ್ದುಗೊಳಿಸಿದ್ದು ದೊಡ್ಡ ರಾಜಕೀಯ ಹುನ್ನಾರ. ಈ ಬಗ್ಗೆ ನಾನು ಸಂಸತ್‍ನಲ್ಲಿ ಮಾತನಾಡಿದ್ದೆ. ಸದ್ಯಕ್ಕೆ ಈ ವಿಷಯ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚು ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

2024ರ ಚುನಾವಣೆಯಲ್ಲಿ ನಾವು 300 ಸ್ಥಾನಗಳನ್ನು ಗೆಲ್ಲಬೇಕೆಂಬ ಆಸೆ ನನಗೂ ಇದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಅಂತಹ ಯಾವುದೇ ಸಾಧ್ಯತೆಗಳು ಕಾಣುತ್ತಿಲ್ಲ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷ ಮುಂದಿನ ಬಾರಿಯೂ ಅಧಿಕಾರಕ್ಕೆ ಬರುವುದು ಸುಲಭವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

370ನೇ ವಿಧಿಯ ಬಗ್ಗೆ ನಾನು ವರ್ಷಗಳಿಂದ ಸಂಸತ್​ನಲ್ಲಿ ಮಾತನಾಡಿದ್ದೇನೆ. ಬೇರೆ ಯಾರೂ ಆ ವಿಷಯವಾಗಿ ಮಾತನಾಡಲಿಲ್ಲ. ಈಗ ಆ ವಿಷಯ ಕೋರ್ಟ್​ನಲ್ಲಿ ಇರುವುದರಿಂದ ಆ ಬಗ್ಗೆ ನಾನು ಹೆಚ್ಚು ಮಾತನಾಡುವಂತಿಲ್ಲ. 370 ನೇ ವಿಧಿಗೆ ಸಂಬಂಧಿಸಿದ ಪ್ರಕರಣವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಅದರ ತೀರ್ಪು ಯಾವಾಗ ಎಂದು ಯಾರಿಗೂ ತಿಳಿದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಸ್ಥಾನ ನನಗೆ ಅರ್ಥವಿಲ್ಲದ ಹುದ್ದೆಯಂತೆ ಕಾಣುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆಯಲ್ಲಿ ನಾನು ಯಾರನ್ನೂ ಬೆಂಬಲಿಸುತ್ತಿಲ್ಲ: ಸಂಸದೆ ಸುಮಲತಾ ಸ್ಪಷ್ಟನೆ

2024ರ ಲೋಕಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿ: ಟಿಎಂಸಿಗೆ ಬಿಜೆಪಿ ಒತ್ತಾಯ

Click on your DTH Provider to Add TV9 Kannada