ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು? ಸಚಿವ ಕೆ.ವೆಂಕಟೇಶ್​ ಪ್ರಶ್ನೆ

|

Updated on: Jun 03, 2023 | 3:29 PM

ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು ಎಂದು ಪಶುಸಂಗೋಪನಾ ಖಾತೆ ಸಚಿವ ಕೆ.ವೆಂಕಟೇಶ್​ ಪ್ರಶ್ನೆ ಮಾಡಿದ್ದಾರೆ.

ಮೈಸೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು ಎಂದು ಪಶುಸಂಗೋಪನಾ ಖಾತೆ ಸಚಿವ ಕೆ.ವೆಂಕಟೇಶ್ (Minister K Venkatesh)​ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಮಧ್ಯಮದರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

ನಮ್ಮ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ಕಷ್ಟ ಪಡಬೇಕಾಯಿತು. 25 ಜನ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ಮೂಲಕ ಹಸುವಿನ ಮೃತದೇಹ ಹೂಳಬೇಕಾಯಿತು. ಹಾಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚಿಸುವುದಾಗಿ ಹೇಳಿದರು. ಗೋಶಾಲೆಗಳನ್ನು ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ ಎಂದು
ಸಚಿವ ವೆಂಕಟೇಶ್ ತಿಳಿಸಿದರು.

ಇದನ್ನೂ ಓದಿ: ಮಲೆನಾಡು ಭಾಗದಲ್ಲಿ ಗೋಮಾಂಸ ದಂಧೆ: ಗೋವು ಕಳ್ಳರ‌ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ

ಅಮುಲ್​ ವಿಚಾರವಾಗಿ ಮಾತನಾಡಿದ ಅವರು ರಾಜ್ಯಕ್ಕೆ ಅಮುಲ್​ ಬಂದಿಲ್ಲ. ಅಮುಲ್​ ಉತ್ಪನ್ನಗಳಿಂದ ನಂದಿನಿ ಉತ್ಪನ್ನಗಳಿಗೆ ತೊಂದರೆ ಆಗಿಲ್ಲ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಮಾಂಸಕ್ಕಾಗಿ ಗೋವುಗಳ ಮಾರಣಹೋಮ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಗೋಮಾಂಸಕ್ಕೆ ಬೇಡಿಕೆ ಹೆಚ್ಚಾಗಿದ್ದು, ಮಾಂಸಕ್ಕಾಗಿ ಗೋವುಗಳ ಮಾರಣಹೋಮ ನಡೆಯುತ್ತಿದೆ. ಗೋವುಗಳ ಕಳ್ಳತನ ಮಾಡಿ ದಂಧೆಕೋರರು ಗೋಹತ್ಯೆ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಜಿಲ್ಲೆಯ N.R ಪುರ‌‌ ತಾಲೂಕಿನ ಮಾಗುಂಡಿ ಗ್ರಾಮದ ಸೇತುವೆ ಕೆಳಭಾಗದಲ್ಲಿ ಗೋವಿನ ಎರಡು ತಲೆ‌, ಎಂಟು ಕಾಲುಗಳು ಪತ್ತೆ ಆಗಿವೆ.

ಇದನ್ನೂ ಓದಿ: Bengaluru News: ಯಮಲೂರು-ಬೆಳ್ಳಂದೂರು ಕೆರೆ ರಸ್ತೆಯಲ್ಲಿ ಶನಿವಾರದಿಂದ ಲಘು ವಾಹನಗಳಿಗೆ ಸಂಚಾರ ಮುಕ್ತ

ಚಿಕ್ಕಮಗಳೂರು, ಶೃಂಗೇರಿ, ಮೂಡಿಗೆರೆ, N.Rಪುರ ತಾಲೂಕಿನಲ್ಲಿ ನಿರಂತರವಾಗಿ ಗೋಮಾಂಸ ದಂಧೆ ನಡೆಯುತ್ತಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಗೋವುಗಳನ್ನು ದಂಧೆಕೋರರು ಬಿಡುತ್ತಿಲ್ಲ. ಗೋವು ಕಳ್ಳರ‌ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ ಆಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೋವುಗಳ ಕಳ್ಳತನ ನಿರಂತರವಾಗಿ ನಡೆಯುತ್ತಿದೆ. ಸತ್ತಿಹಳ್ಳಿ ಗ್ರಾಮದಲ್ಲಿ ಗೋವುಗಳ ಕಳ್ಳತನ ನಡೆದಿದ್ದು, ಕೃತ್ಯ ಸಿಸಿ ಟಿವಿಯಲ್ಲಿ ಸೆರೆ ಆಗಿದೆ. ಕಳ್ಳತನ ಮಾಡಿದ ಗೋವುಗಳ ಮಾಂಸವನ್ನು ದಂಧೆಕೋರರು ಮಾರಾಟ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:20 pm, Sat, 3 June 23