ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಿಡಿದೇಳುವೆ: ವಿ ಸೋಮಣ್ಣ

ವಿಧಾನಸಭೆ ಚುನಾವಣೆಯಲ್ಲಿ ವಿ ಸೋಮಣ್ಣ ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಈ ಎರಡೂ ಕ್ಷೇತ್ರಗಳಲ್ಲಿ ವಿ ಸೋಮಣ್ಣ ಸೋತಿದ್ದಾರೆ. ಈ ಸೋಲಿನ ಬಳಿಕ ಸ್ವಪಕ್ಷದವರ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಇದೀಗ ತಮ್ಮ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಿಡಿದೇಳುವೆ: ವಿ ಸೋಮಣ್ಣ
ವಿ ಸೋಮಣ್ಣ
Follow us
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ

Updated on: Jan 06, 2024 | 12:07 PM

ಬೆಂಗಳೂರು, ಜನವರಿ 06: ನನ್ನ ಸೋಲಿಗೆ ಯಾರು ಯಾರು ಕಾರಣ ಅಂತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರಿಗೆ ಗೊತ್ತಿದೆ. ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದಿದ್ದರೆ ನಾನು ಸಿಡಿದೇಳಬೇಕಾಗುತ್ತದೆ ಎಂದು ಮಾಜಿ ಸಚಿವ ವಿ ಸೋಮಣ್ಣ (V Somanna) ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರಿಪಡಿಸುವುದು, ಬಿಡುವುದು ಅವರಿಗೆ ಸೇರಿದ್ದು ಎಂದರು.

ಲೋಕಸಭೆ ಚುನಾವಣೆ ಇರುವುದರಿಂದ ಕೆಲ ವಿಚಾರ ಮಾತನಾಡಲ್ಲ. ನಮ್ಮಂಥವರಿಗೆ ಏನು ಅನಾನುಕೂಲ ಎಂಬ ಮಾಹಿತಿ ಅವರಿಗೆ ಇದೆ. ಅವರಿಗೇ ಅಂಟಿಕೊಂಡು ಹೋಗ್ತೇನೆ ಅಂದರೇ ಬೇರೆ ಮಾತಾಡಬೇಕಾಗುತ್ತೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಇನ್ನೂ ಯುವಕ. ನೀನು ಬೆಳೆಯಬೇಕು, ರಾಜ್ಯದಲ್ಲಿ ದೊಡ್ಡ ನಾಯಕರು ಅಂತ ಇದ್ದಾರೆ. ಸೋಲಿಗೆ ಕಾರಣರಾದ ಮನೆಹಾಳರನ್ನು ಜೊತೆಯಲ್ಲಿ ಇಟ್ಟುಕೊಳ್ಳಬಾರದು ಎಂದು ಕಿವಿ ಮಾತು ಹೇಳಿದರು.

ಇದನ್ನೂ ಓದಿ: ದೇವೇಗೌಡರು ನನ್ನ ಗುರುಗಳು, ನಾನವರ ಶಿಷ್ಯ ಎಂದ ಮಾಜಿ ಸಚಿವ ವಿ ಸೋಮಣ್ಣ

ನಮ್ಮಂತಹವರ ಮೇಲೆ ಗದಾಪ್ರಹಾರ ಆದರೆ ಪರಿಣಾಮ ಆಗುತ್ತದೆ. ಎಷ್ಟರ ಮಟ್ಟಿಗೆ ಪರಿಣಾಮ ಆಗುತ್ತದೆ ಅಂತಾ ಚಿಂತನೆ ಮಾಡಬೇಕು. ವಿಜಯೇಂದ್ರ ಅವರಿಗೆ ಒಳ್ಳೆಯದಾಗಲಿ. ಹಿಂದಿನದ್ದೇ ನಡೆಸಿಕೊಂಡು ಹೋಗುತ್ತೇನೆ ಎಂಬುದನ್ನು ಬಿಡಬೇಕು. ಚಾಮರಾಜನಗರ ಜಿಲ್ಲೆಗೆ ಬಿ.ವೈ.ವಿಜಯೇಂದ್ರ ಭೇಟಿ ನೀಡುತ್ತಿರುವ ವಿಚಾರವಾಗಿ ಮಾತನಾಡಿದ ಅವರು ವಿಜಯೇಂದ್ರ ರಾಜ್ಯಾಧ್ಯಕ್ಷರು, ಎಲ್ಲಿಗೆ ಬೇಕಾದರೂ ಹೋಗಲಿ ಎಂದು ಮಾತನಾಡಿದರು.

ನನ್ನ ಮತ್ತು ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ

ನನ್ನ ಮತ್ತು ವಿರೋಧ ಪಕ್ಷದ ನಾಯಕ ಆರ್​ ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ. ವಿಪಕ್ಷ ನಾಯಕ ಅಶೋಕ್​ ನನ್ನ ಭೇಟಿಗೆ ಪ್ರಯತ್ನ ಮಾಡಿದ್ದರು. ನಾನು ಮತ್ತು ಅಶೋಕ್ ಸ್ನೇಹಿತರು. ಅಶೋಕ್ ಮೊದಲು ಶಾಸಕನಾದಾಗ ನಾನು ಮಂತ್ರಿಯಾಗಿದ್ದೆ. ವಿಪಕ್ಷ ನಾಯಕ ಅಶೋಕ್​ ನನಗಿಂತ 14 ವರ್ಷ ಚಿಕ್ಕವರು. ಅಶೋಕ್ ಮೇಲೆ ನನಗೆ ಪ್ರೀತಿ, ವಿಶ್ವಾಸ ಇದೆ. ನಮ್ಮವರಿಂದಲೇ ನೋವಾದಾಗ ನನ್ನ ಭಾವನೆ ಹೇಳಿಕೊಂಡಿದ್ದೇನೆ. ಸಂಕ್ರಾಂತಿ ಬಳಿಕ ಎಲ್ಲವೂ ಸುಖಾಂತ್ಯವಾಗಬೇಕು ಎಂದರು.

ಇನ್ನು ವಿ ಸೋಮಣ್ಣ ಜನವರಿ 8ರಂದು ನವದೆಹಲಿಗೆ ತೆರಳಲಿದ್ದಾರೆ. 12ರ ವರೆಗೂ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ಅವಧಿಯಲ್ಲಿ ವರಿಷ್ಠರಿಗೆ ಭೇಟಿಯಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ