AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ: ನಿತೀಶ್​​ ಕುಮಾರ್​​ ಭರವಸೆ

ಪ್ರಸ್ತುತ, ದೇಶದಲ್ಲಿ 11 ವಿಶೇಷ ವರ್ಗದ ರಾಜ್ಯಗಳಿವೆ. ಅವುಗಳು ಅರುಣಾಚಲ ಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ (ಈಗ ಕೇಂದ್ರಾಡಳಿತ ಪ್ರದೇಶ), ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಮತ್ತು ಉತ್ತರಾಖಂಡ್.

2024ರಲ್ಲಿ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ: ನಿತೀಶ್​​ ಕುಮಾರ್​​ ಭರವಸೆ
ನಿತೀಶ್ ಕುಮಾರ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 15, 2022 | 8:22 PM

Share

ಪಾಟ್ನಾ: 2024 ರ ಸಾರ್ವತ್ರಿಕ ಚುನಾವಣೆಯ ನಂತರ ಬಿಜೆಪಿಯೇತರ ಪಕ್ಷಗಳು ಕೇಂದ್ರದಲ್ಲಿ ಅಧಿಕಾರಕ್ಕೇರಿದ್ದರೆ ದೇಶದ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ (special status) ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಗುರುವಾರ ಭರವಸೆ ನೀಡಿದ್ದಾರೆ. ನಮಗೆ ಸರ್ಕಾರ ರಚಿಸಲು ಅವಕಾಶ ಸಿಕ್ಕರೆ, ನಾವು ಖಂಡಿತವಾಗಿಯೂ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ನೀಡುತ್ತೇವೆ. ನಾನು ಬಿಹಾರದ ಬಗ್ಗೆ ಮಾತ್ರವಲ್ಲ, ವಿಶೇಷ ಸ್ಥಾನಮಾನ ಪಡೆಯಬೇಕಾದ ಇತರ ರಾಜ್ಯಗಳ ಬಗ್ಗೆಯೂ ಮಾತನಾಡುತ್ತಿದ್ದೇನೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ನಿತೀಶ್ ಹೇಳಿದ್ದಾರೆ. ನಿತೀಶ್ ಕುಮಾರ್ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದು ವಿಪಕ್ಷಗಳನ್ನು ಒಟ್ಟಿಗೆ ಸೇರಿಸುವ ಸಾಧ್ಯತೆಯನ್ನು ಅನ್ವೇಷಿಸಲು ಹಲವಾರು ವಿರೋಧ ಪಕ್ಷಗಳ ನಾಯಕರನ್ನು ಭೇಟಿ ಮಾಡಿದ್ದರು.

ಕಳೆದ ತಿಂಗಳು ಬಿಜೆಪಿ ಮೈತ್ರಿ ಮುರಿದುಕೊಂಡ ನಿತೀಶ್ ಕುಮಾರ್, ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಮತ್ತು ಕಾಂಗ್ರೆಸ್ ಬೆಂಬಲದೊಂದಿಗೆ ಬಿಹಾರದಲ್ಲಿ ಹೊಸ ಸರ್ಕಾರವನ್ನು ರಚಿಸಿದರು. ಅವರು 2007 ರಿಂದ ಬಿಹಾರಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಈ ವಿಷಯವನ್ನು ಜನತಾ ದಳವು ಕಾರ್ಯತಂತ್ರವಾಗಿ ಎತ್ತಿದೆ.

ಒಂದು ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದರೆ, ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಕೇಂದ್ರ-ರಾಜ್ಯ ನಿಧಿಯ ಅನುಪಾತವು 90:10 ಆಗಿದೆ, ಇದು ಇತರ ರಾಜ್ಯಗಳಿಗೆ ಅನುಪಾತಕ್ಕಿಂತ ಹೆಚ್ಚು ಅನುಕೂಲಕರವಾಗಿರುತ್ತದೆ. ಪ್ರಸ್ತುತ, ದೇಶದಲ್ಲಿ 11 ವಿಶೇಷ ವರ್ಗದ ರಾಜ್ಯಗಳಿವೆ. ಅವುಗಳು ಅರುಣಾಚಲ ಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ (ಈಗ ಕೇಂದ್ರಾಡಳಿತ ಪ್ರದೇಶ), ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಮತ್ತು ಉತ್ತರಾಖಂಡ್.

ಸಂವಿಧಾನವು ರಾಜ್ಯಗಳಿಗೆ ಯಾವುದೇ ವಿಶೇಷ ವರ್ಗಕ್ಕೆ ಅವಕಾಶವನ್ನು ಹೊಂದಿಲ್ಲ. ಆದಾಗ್ಯೂ, ಈಗ ನಿಷ್ಕ್ರಿಯವಾಗಿರುವ ಯೋಜನಾ ಆಯೋಗದ ಭಾಗವಾಗಿರುವ ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಎಂಬ ಸಂಸ್ಥೆಯು ಹಲವಾರು ಅಂಶಗಳ ಆಧಾರದ ಮೇಲೆ ಈ 11 ರಾಜ್ಯಗಳಿಗೆ ವಿಶೇಷ ಸ್ಥಾನಮಾನವನ್ನು ಶಿಫಾರಸು ಮಾಡಿದೆ.

ತಾನು ಪ್ರಧಾನಿ ಹುದ್ದೆಯ ಆಕಾಂಕ್ಷಿ ಅಲ್ಲ ಎಂದು ನಿತೀಶ್ ಹೇಳಿದ್ದರೂ  ಬಿಜೆಪಿಯನ್ನು ಎದುರಿಸಲು ಒಗ್ಗೂಡುವ ಯಾವುದೇ ವಿರೋಧ ಪಕ್ಷದ ಪ್ರಮುಖ ಧ್ವನಿಯಾಗಿ ಅವರು ತಮ್ಮನ್ನು  ನೋಡುತ್ತಾರೆ ಎಂಬುದನ್ನು ಈ ಘೋಷಣೆಗಳು ತೋರಿಸುತ್ತವೆ.

Published On - 8:20 pm, Thu, 15 September 22

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ