ಸಿಎಂ ಆಗಿದ್ದಾಗ ವರ್ಗಾವಣೆಯಲ್ಲಿ ಮಕ್ಕಳು ಭಾಗಿ ಆರೋಪ: ಸಾಬೀತಾದರೇ ರಾಜಕೀಯ ನಿವೃತ್ತಿ ಘೋಷಿಸುವೆ ಎಂದ ಹೆಚ್​ಡಿ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವಧಿಯಲ್ಲೂ ವರ್ಗಾವಣೆ ದಂಧೆ ನಡೆದಿತ್ತು ಎಂಬ ಆರೋಪಕ್ಕೆ ಹೆಚ್​​.ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ಸಿಎಂ ಆಗಿದ್ದಾಗ ವರ್ಗಾವಣೆಯಲ್ಲಿ ಮಕ್ಕಳು ಭಾಗಿ ಆರೋಪ: ಸಾಬೀತಾದರೇ ರಾಜಕೀಯ ನಿವೃತ್ತಿ ಘೋಷಿಸುವೆ ಎಂದ ಹೆಚ್​ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ
Follow us
Sahadev Mane
| Updated By: ವಿವೇಕ ಬಿರಾದಾರ

Updated on:Jul 06, 2023 | 2:25 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ (HD Kumaraswamy) ಅವಧಿಯಲ್ಲೂ ವರ್ಗಾವಣೆ ದಂಧೆ (Transfer Allegations) ನಡೆದಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ  ಹೆಚ್​​.ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ವರ್ಗಾವಣೆ ವಿಚಾರದಲ್ಲಿ ನನ್ನ ಮಕ್ಕಳು ಭಾಗಿಯಾಗಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ನನ್ನ ಮಕ್ಕಳಿಂದ ಅಧಿಕಾರ ದುರ್ಬಳಕೆ ಆಗಿದ್ದರೇ ದಾಖಲೆ ನೀಡಿ. ಸಾಬೀತಾದರೇ ರಾಜಕೀಯ ನಿವೃತ್ತಿ ಘೋಷಿಸುವೆ ಎಂದು ವಿಧಾನಸೌಧದಲ್ಲಿ ಹೇಳಿದ್ದಾರೆ.

ಇನ್ನು ಕಾಂಗ್ರೆಸ್​​ ಸರ್ಕಾರದ ವರ್ಗಾವಣೆ ದಂಧೆ ಆರೋಪಕ್ಕೆ ಸಾಕ್ಷಿ ಎಂಬಂತೆ ಪೈನ್ ಡ್ರೈವ್ ಅಸ್ತ್ರ ವಿಚಾರವಾಗಿ ಮಾತನಾಡಿದ ಅವರು ಹೆದರಿ ಓಡೋಗಲ್ಲ, ಹಿಟ್ ಅಂಡ್ ರನ್ ಮಾಡಲ್ಲ. ಕಾಂಗ್ರೆಸ್ ನಾಯಕರು ಏನು ಮಾತಾಡ್ತಾರೆ ನೋಡೋಣ. ಪೆನ್ ಡ್ರೈವ್ ಅಸಲಿ, ಹೈದ್ರಾಬಾದ್​ನಲ್ಲಿ ಮಾಡಿಸಿದ್ದಲ್ಲ. ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಕ್ರಮ ಏನು ಅಂತ ಹೇಳಬೇಕಲ್ಲ ಎಂದರು.

ಸಿದ್ದರಾಮಯ್ಯ ದಾಖಲೆ ಇಟ್ಟು ಮಾತನಾಡಿದ್ದನ್ನು ನಾನು ನೋಡಿಲ್ಲ.  ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ ಯಾವತ್ತಾದರೂ ದಾಖಲೆ ಬಿಡುಗಡೆ ಮಾಡಿದ್ರಾ?ಸಿದ್ದರಾಮಯ್ಯ ದಾಖಲೆ ಇಟ್ಟು ಮಾತನಾಡಿದನ್ನ ನೋಡಲೇ ಇಲ್ಲ. ತಾರ್ಕಿಕ ಅಂತ್ಯ ಎಂಬುದು ನನ್ನಿಂದ ಅಲ್ಲ, ಈ ದೇಶದ ವ್ಯವಸ್ಥೆ. ರಾಜಕೀಯ ಪ್ರಭಾವ, ಧನ ಬಲ ಇರುವವರಿಂದ ತಾರ್ಕಿಕ ಅಂತ್ಯ ಅಸಾಧ್ಯ ಎಂದು ಕಿಡಿಕಾರಿದರು.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಬಸ್ ಚಾಲಕ ಆತ್ಮಹತ್ಯೆ ಯತ್ನಕ್ಕೂ ಮುನ್ನ ಬರೆದಿದ್ದ ಡೆತ್​ ನೋಟ್​ ಪತ್ತೆ: ಕೃಷಿ ಸಚಿವರ ಹೆಸರು ಉಲ್ಲೇಖ

ನಾಗಮಂಗಲ ಕೆಎಸ್​ಆರ್​ಟಿಸಿ ಚಾಲಕ ಜಗದೀಶ್​​ ಆತ್ಮಹತ್ಯೆಗೆ ಯತ್ನ ಪ್ರಕರಣದ ವಿಚಾರವಾಗಿ ಮಾತನಾಡಿದ ಅವರು ಡೆತ್​ನೋಟ್​​ನಲ್ಲಿ ಸಚಿವ ಎನ್​.ಚಲುವರಾಯಸ್ವಾಮಿ ಹೆಸರು ಪ್ರಸ್ತಾಪ ಇದೆ. ಈವರೆಗೂ ಎಫ್​​ಐಆರ್ ದಾಖಲಾಗಿಲ್ಲ. ಕಾಂಗ್ರೆಸ್​ ಸರ್ಕಾರ ರಾಜಕೀಯ ದ್ವೇಷ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು.

ನಾಗಮಂಗಲ ಕೆಎಸ್​ಆರ್​ಟಿಸಿ ಚಾಲಕ ಜಗದೀಶ್​​ ಆತ್ಮಹತ್ಯೆಗೆ ಯತ್ನ ಪ್ರಕರಣದ ಬಗ್ಗೆ ನಿಯಮ 60ರ ಅಡಿ ಚರ್ಚೆಗೆ ಸಮಯ ಕೊಡುವಂತೆ ಹೆಚ್​ ಡಿ ಕುಮಾರಸ್ವಾಮಿ ಸ್ಪೀಕರ್​​ಗೆ ಮನವಿ ಮಾಡಿದರು. ಇನ್ನು ಚಲುವರಾಯಸ್ವಾಮಿ ರಾಜೀನಾಮೆಗೆ ಒತ್ತಾಯಿಸಲಿರುವ ಜೆಡಿಎಸ್​ ಶಾಸಕರು ಸದನದಲ್ಲಿ ಪಟ್ಟು ಹಿಡಿದಿದ್ದಾರೆ.

ಹೆಚ್​ಡಿ.ಕುಮಾರಸ್ವಾಮಿ ಅವಧಿಯಲ್ಲೂ ವರ್ಗಾವಣೆ ದಂಧೆ: ಸಿದ್ದರಾಮಯ್ಯ ಪೊರೋಕ್ಷ ವಾಗ್ದಾಳಿ

ಕುಮಾರಸ್ವಾಮಿ ಯಾವಾಗಲೂ ಹಿಟ್ ಆ್ಯಂಡ್​ ರನ್ ಮಾಡುತ್ತಾರೆ. ಹಾಗಾದರೇ ಹೆಚ್​ಡಿಕೆ ಸರ್ಕಾರ ಇದ್ದಾಗ ಹಣ ತೆಗೆದುಕೊಂಡಿದ್ದಾರಾ? ಆ ರೀತಿ ಊಹಿಸಿಕೊಳ್ಳುವುದು ಸರಿಯಲ್ಲ. ಯಾವ ಪ್ರಕರಣ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಪುತ್ರ ಯತೀಂದ್ರ ಮನೆಯಲ್ಲಿ ಇರುತ್ತಾರೆ, ಅವರು ಮಾಜಿ ಶಾಸಕ. ಹೆಚ್​.ಡಿ.ಕುಮಾರಸ್ವಾಮಿ ಮನೆಯಲ್ಲಿ ಅವರ ಪುತ್ರ ಇರುತ್ತಾರೆ ಹೆಚ್​. ಡಿ ಕುಮಾರಸ್ವಾಮಿ ಅಣ್ಣ ಸಚಿವರು ಆಗಿದ್ದರು, ಅವರ ತಂದೆ ಪಿಎಂ ಆಗಿದ್ದವರು. ಅಣ್ಣ, ಮಕ್ಕಳು ಶಾಸಕರು ಆಗಿದ್ದರು, ಏನಂತ ಕರೆಯಬೇಕು. ನಾನು ಇದಕ್ಕೆಲ್ಲಾ ಅಧಿವೇಶನದಲ್ಲೇ ಉತ್ತರ ಕೊಡುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:25 pm, Thu, 6 July 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ