AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತ ಪ್ರೇಮ ಇದ್ದರೆ ಅವರನ್ನೇ ಸಿಎಂ ಮಾಡಲಿ: ಕಾಂಗ್ರೆಸ್​ಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಸವಾಲು

ದಲಿತರ ಬಗ್ಗೆ ಇಷ್ಟು ಪ್ರೇಮ ತೋರಿಸುವ ಕಾಂಗ್ರೆಸ್ ಈಗಲಾದರೂ ದಲಿತ ಮುಖ್ಯಮಂತ್ರಿಯನ್ನು ಮಾಡಲಿ ಎಂದು ಉಪ ಸಭಾಧ್ಯಕ್ಷರ ವಿಷಯದಲ್ಲಿ ದಲಿತ ಕಾರ್ಡ್ ಬಿಟ್ಟ ಕಾಂಗ್ರೆಸ್​ಗೆ​ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ದಲಿತ ಪ್ರೇಮ ಇದ್ದರೆ ಅವರನ್ನೇ ಸಿಎಂ ಮಾಡಲಿ: ಕಾಂಗ್ರೆಸ್​ಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಸವಾಲು
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Sunil MH
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 20, 2023 | 3:39 PM

Share

ಬೆಂಗಳೂರು, ಜುಲೈ 20: ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ. ಅದಕ್ಕೆ ರಾಜ್ಸ  ರಕಾರವೇ ಜೀವಂತ ಸಾಕ್ಷಿ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಕಾಂಗ್ರೆಸ್​ ವಿರುದ್ಧ ಸಾಲು ಸಾಲು ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ. ಉಪ ಸಭಾಧ್ಯಕ್ಷರ ವಿಷಯದಲ್ಲಿ ದಲಿತ ಕಾರ್ಡ್ ಬಿಟ್ಟ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿರುವ ಅವರು, ದಲಿತರ ಬಗ್ಗೆ ಇಷ್ಟು ಪ್ರೇಮ ತೋರಿಸುವ ಕಾಂಗ್ರೆಸ್ ಈಗಲಾದರೂ ದಲಿತ ಸಿಎಂಯನ್ನು ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಇಬ್ಬರು ಸಚಿವರು ಉಪ ಸಭಾಧ್ಯಕ್ಷರ ಬಗ್ಗೆ ಕಾಳಜಿ ತೋರಿಸಿದ್ದಾರೆ. ಆದರೆ, ಅವರನ್ನು ಇನ್ನೊಬ್ಬ ಶಾಸಕರು ಬೇಡ ಎಂದ ಉಪ ಸಭಾಧ್ಯಕ್ಷರ ಹುದ್ದೆಯಲ್ಲಿ ಕೂರಿಸಿದ್ದಾರೆ. ಅವರಿಗಾಗಿ ಇವರು ಸಚಿವ ಸ್ಥಾನವನ್ನು ತ್ಯಾಗ ಮಾಡಲಿ ಎಂದು ಟಾಂಗ್ ನೀಡಿದ್ದಾರೆ.

ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ! ಅದಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಜೀವಂತ ಸಾಕ್ಷಿ. 2018ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ಹೊರರಾಜ್ಯಗಳ ಗಣ್ಯರಿಗೆ ಆತಿಥ್ಯ ನೀಡಲು ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿರಲಿಲ್ಲವೆ ಎಂದು ಕೆಲವರು ಪ್ರಶ್ನಿಸಿದ್ದಾರೆ ಎಂದು ಅವರು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಸದನದಿಂದ ಅಮಾನತು: ಕಲಾಪ ಬಹಿಷ್ಕರಿಸಿ ಪ್ರತಿಭಟನೆಗಿಳಿದ ಬಿಜೆಪಿ ಶಾಸಕರು, ರಾಜ್ಯಪಾಲರಿಗೆ ದೂರು ನೀಡಲು ತೀರ್ಮಾನ

ಸ್ವತಃ ಸಿಎಂ, ಸಂಸದೀಯ ಸಚಿವರು, ಇನ್ನೂ ಕೆಲ ಮಂತ್ರಿಗಳು ಸದನವನ್ನೇ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ಆಗ ನಾನು ಕೇವಲ ನಿಯೋಜಿತ ಮುಖ್ಯಮಂತ್ರಿ. ರಾಜಭವನದ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ವ್ಯವಸ್ಥೆ ಮಾಡಿರುತ್ತದೆ ಎಂಬುದು ಇವರಿಗೆ ತಿಳಿಯದೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಪ್ರಮಾಣವನ್ನೇ ಸ್ವೀಕರಿಸದ ನಿಯೋಜಿತ ಸಿಎಂ ಯಾವುದಾದರೂ ಆದೇಶ ನೀಡಲು ಸಾಧ್ಯವೇ? ಇಷ್ಟಕ್ಕೂ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭಕ್ಕೂ, ಪಕ್ಷದ ಕಾರ್ಯಕ್ರಮಕ್ಕೂ ಹೋಲಿಕೆಯೇ? ಇಷ್ಟು ಸಾಮಾನ್ಯ ತಿಳಿವಳಿಕೆ ಸ್ವತಃ ಮುಖ್ಯಮಂತ್ರಿ ಹಾಗೂ ಸಂಸದೀಯ ಸಚಿವರಿಗೆ ಇಲ್ಲ ಎಂದರೆ ಏನು ಹೇಳುವುದು? ಇಂಡಿಯಾ ಒಕ್ಕೂಟದ ಸಭೆಗೆ ಬಂದ ಹೊರರಾಜ್ಯಗಳ ನಾಯಕರಿಗೆ ಐಎಎಸ್ ಅಧಿಕಾರಿಗಳನ್ನು ಚಾಕರಿಗೆ ಬಿಟ್ಟಿದ್ದು ತಪ್ಪು ಎಂಬುದು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಗಿಳಿಪಾಠ ಒಪ್ಪಿಸುವ ಸ್ವಯಂಘೋಷಿತ ಸಂವಿಧಾನ ತಜ್ಞರಿಗೆ ಶೋಭೆಯೇ? ಎಂದಿದ್ದಾರೆ.

ಉಪ ಸಭಾಧ್ಯಕ್ಷರು ದಲಿತರೆನ್ನುವ ಟ್ರಂಪ್ ಕಾರ್ಡ್ ತೇಲಿಬಿಟ್ಟಿದೆ ಸರಕಾರ. ದಲಿತರೆನ್ನುವ ಕಾರಣಕ್ಕೆ ಉಪ ಸಭಾಧ್ಯಕ್ಷರ ಮೇಲೆ ಅನುಕಂಪದ ಹೊಳೆ ಹರಿಸುವ ಕಾಂಗ್ರೆಸ್, ಅವರಿಗೆ ಸಚಿವ ಸ್ಥಾನವನ್ನೇ ನೀಡಬಹುದಿತ್ತು. ನೀಡಲಿಲ್ಲ ಯಾಕೆ? ಶಾಸಕ ಪುಟ್ಟರಂಗಶೆಟ್ಟಿ ಅವರು ಬೇಡವೇ ಬೇಡ ಎಂದ ಹುದ್ದೆಯನ್ನು ರುದ್ರಪ್ಪ ಲಮಾಣಿ ಅವರ ತಲೆಗೆ ಕಟ್ಟಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಐಎಎಸ್​ ಅಧಿಕಾರಿಗಳನ್ನು ಗುಲಾಮರಂತೆ ನಡೆಸಿಕೊಂಡ ಕಾಂಗ್ರೆಸ್​ ಸರ್ಕಾರ; ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಇಂಥ ಅತಿಯಾದ ಜಾಣತನ, ಭಂಡತನ ಯಾಕೆ? ಸಂಪುಟ ರಚನೆ ವೇಳೆ ರುದ್ರಪ್ಪ ಲಮಾಣಿ ಅವರು ದಲಿತರೆನ್ನುವುದು ಕಾಂಗ್ರೆಸ್’ಗೆ ಗೊತ್ತಿರಲಿಲ್ಲವೇ? ದಲಿತ ಕಾರ್ಡ್ ಬಿಟ್ಟ ಪ್ರಿಯಾಂಕ್ ಖರ್ಗೆ ಅಥವಾ ಕೃಷ್ಣ ಭೈರೇಗೌಡರಿಗೆ ಅಷ್ಟು ದಲಿತಪ್ರೇಮ ಇದ್ದರೆ ಅವರ ಸಚಿವಗಿರಿಯನ್ನು ಲಮಾಣಿ ಅವರಿಗೇ ಬಿಟ್ಟುಕೊಟ್ಟು ಈ ಇಬ್ಬರಲ್ಲಿ ಒಬ್ಬರು ಉಪ ಸಭಾಧ್ಯಕ್ಷರಾಗಲಿ ಎಂದರು.

ಅಷ್ಟೇ ಅಲ್ಲ, ದಲಿತ ಮುಖ್ಯಮಂತ್ರಿ ಕೂಗು ಕಾಂಗ್ರೆಸ್ ಪಕ್ಷದಲ್ಲಿ ಬಹಳ ದಿನಗಳಿಂದ ಇದೆ. ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಹುದ್ದೆ ಕೈ ತಪ್ಪುವಂತೆ ಮಾಡಲಾಗಿತ್ತು. ಈಗ ದಲಿತ ಮುಖ್ಯಮಂತ್ರಿ ಮಾಡಲು ಇದೇ ಸಕಾಲ. ದಲಿತರನ್ನೇ ಸಿಎಂ ಮಾಡಲಿ. ನುಡಿದಂತೆ ನಡೆಯುವ ಪಕ್ಷಕ್ಕೆ ಇದು ಅಸಾಧ್ಯವೇನಲ್ಲ. ಅಲ್ಲವೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ