AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಪಕ್ಷ ಬಿಡಲು ಸಿದ್ಧ, ಆಯ್ಕೆ ನಿಮ್ಮದು: ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕಮಲ್ ನಾಥ್

ರಾಮ ಮಂದಿರ ಬಿಜೆಪಿಯದ್ದೇ? ಅದು ನನ್ನನ್ನೂ ಒಳಗೊಂಡಂತೆ ಎಲ್ಲರಿಗೂ ಸೇರಿದ್ದು. ಸಾರ್ವಜನಿಕರ ಹಣದಿಂದ ಮಂದಿರ ನಿರ್ಮಾಣವಾಗಿದೆ. ಸುಪ್ರೀಂಕೋರ್ಟ್ ತೀರ್ಪು ನೀಡಿತು. ಅವರು (ಬಿಜೆಪಿ) ಅಧಿಕಾರದಲ್ಲಿರುವುದರಿಂದ ಅವರೇ ಮಂದಿರವನ್ನು ನಿರ್ಮಿಸಿದರು ಎಂದು ಕಾಂಗ್ರೆಸ್ ನಾಯಕ ಕಮಲ್ ನಾಥ್ ಹೇಳಿದ್ದಾರೆ. ಛಿಂದ್ವಾರಾದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದರವರು.

ನಾನು ಪಕ್ಷ ಬಿಡಲು ಸಿದ್ಧ, ಆಯ್ಕೆ ನಿಮ್ಮದು: ಕಾಂಗ್ರೆಸ್ ಕಾರ್ಯಕರ್ತರಲ್ಲಿ  ಕಮಲ್ ನಾಥ್
ಕಮಲ್ ನಾಥ್
ರಶ್ಮಿ ಕಲ್ಲಕಟ್ಟ
|

Updated on: Feb 29, 2024 | 12:50 PM

Share

ಛಿಂದ್ವಾರಾ ಫೆಬ್ರುವರಿ 29: ತಾನು ಬಿಜೆಪಿಗೆ (BJP) ಸೇರಲಿದ್ದೇನೆ ಎಂಬ ವದಂತಿಯನ್ನು ಕಮಲ್ ನಾಥ್ (Kamal Nath) ತಳ್ಳಿಹಾಕಿದ ಒಂದು ದಿನದ ನಂತರ, ಕಾಂಗ್ರೆಸ್ (Congress) ಹಿರಿಯ ನಾಯಕ ಬುಧವಾರ ಪಕ್ಷದ ಕಾರ್ಯಕರ್ತರನ್ನುದ್ದೇಶಿ, ನಾನು ನಿಮ್ಮ ಮೇಲೆ ಹೇರಿಕೆಯಾಗುವುದಿಲ್ಲ, ನೀವು ಬಯಸಿದರೆ ನಾನು ಪಕ್ಷ ತೊರೆಯುತ್ತೇನೆ ಎಂದು ಹೇಳಿದ್ದಾರೆ. ಮಧ್ಯಪ್ರದೇಶದ ತಮ್ಮ ತವರು ಛಿಂದ್ವಾರಾದ ಹರಾಯ್‌ನಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ 77 ವರ್ಷದ ನಾಯಕ, ನಾನು ಹಲವು ವರ್ಷಗಳಿಂದ ನಿಮ್ಮ ಪ್ರೀತಿ ಮತ್ತು ವಿಶ್ವಾಸವನ್ನು ಗಳಿಸಿದ್ದೇನೆ ಎಂದು ಹೇಳಿದರು. “ಕಮಲ್ ನಾಥ್ ಅವರಿಗೆ ಬೀಳ್ಕೊಡಲು ಬಯಸಿದರೆ, ಅದು ನಿಮ್ಮ ಆಯ್ಕೆಯಾಗಿದೆ. ನಾನು ಹೊರಡಲು ಸಿದ್ಧ. ನಾನು ಹೇರಿಕೆಯಾಗಲು ಬಯಸುವುದಿಲ್ಲ. ಇದು ನಿಮ್ಮ ಆಯ್ಕೆಯ ವಿಷಯ” ಎಂದು ಕಮಲ್ ನಾಥ್ ಹೇಳಿದ್ದಾರೆ. ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಅವರು ಛಿಂದ್ವಾರಾ ಲೋಕಸಭಾ ಕ್ಷೇತ್ರದಿಂದ ಸದಸ್ಯರಾಗಿದ್ದಾರೆ.

ಈ ಸ್ಥಾನದಿಂದ ನಕುಲ್ ಮತ್ತೆ ಸ್ಪರ್ಧಿಸಲಿದ್ದಾರೆ ಎಂದು ಹಿರಿಯ ನಾಯಕ ಕಮಲ್  ನಾಥ್ ಈಗಾಗಲೇ ಘೋಷಿಸಿದ್ದರು. ಛಿಂದ್ವಾರಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಹಿರಿಯ ರಾಜಕಾರಣಿ, ಬಿಜೆಪಿ ಇಲ್ಲಿ ಆಕ್ರಮಣಕಾರಿಯಾಗಿ ಯೋಚಿಸುತ್ತಿದೆ. ಆದರೆ ಕಾಂಗ್ರೆಸ್ ಕಾರ್ಯಕರ್ತರು ಭಯಪಡಬಾರದು ಎಂದು ಹೇಳಿದರು. ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ನಾವು ಮತ ಚಲಾಯಿಸಬೇಕು. ನಿಮ್ಮೆಲ್ಲರ ಮೇಲೆ ನನಗೆ ನಂಬಿಕೆ ಇದೆ ಎಂದು ಅವರು ಹೇಳಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ಎಲ್ಲರಿಗೂ ಸೇರಿದ್ದು ಎಂದು ಹೇಳಿದ ಕಮಲ್ ನಾಥ್, ಅದರ ನಿರ್ಮಾಣದ ಶ್ರೇಯವನ್ನು ಬಿಜೆಪಿ ತೆಗೆದುಕೊಳ್ಳಬಾರದು ಎಂದು ಸಲಹೆ ನೀಡಿದರು.

“ರಾಮ ಮಂದಿರ ಬಿಜೆಪಿಯದ್ದೇ? ಅದು ನನ್ನನ್ನೂ ಒಳಗೊಂಡಂತೆ ಎಲ್ಲರಿಗೂ ಸೇರಿದ್ದು. ಸಾರ್ವಜನಿಕರ ಹಣದಿಂದ ಮಂದಿರ ನಿರ್ಮಾಣವಾಗಿದೆ. ಸುಪ್ರೀಂಕೋರ್ಟ್ ತೀರ್ಪು ನೀಡಿತು. ಅವರು (ಬಿಜೆಪಿ) ಅಧಿಕಾರದಲ್ಲಿರುವುದರಿಂದ ಅವರೇ ಮಂದಿರವನ್ನು ನಿರ್ಮಿಸಿದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: Himachal Pradesh Political Crisis: ಕಾಂಗ್ರೆಸ್​ನ 6 ಬಂಡಾಯ ಶಾಸಕರ ಸದಸ್ಯತ್ವ ರದ್ದು

ನಾನು ಭಗವಾನ್ ರಾಮನನ್ನು ಪೂಜಿಸುತ್ತೇನೆ. ಛಿಂದ್ವಾರಾದಲ್ಲಿ ನಮ್ಮ ಒಡೆತನದ ಜಮೀನಿನಲ್ಲಿ ಹನುಮಂತನಿಗೆ ಸಮರ್ಪಿತವಾದ ದೊಡ್ಡ ದೇವಾಲಯವನ್ನು ನಿರ್ಮಿಸಿದ್ದೇನೆ. ನಾವು ಧಾರ್ಮಿಕ ವ್ಯಕ್ತಿಗಳಾಗಿದ್ದು, ನಮ್ಮ ಸಂಸ್ಕೃತಿಯನ್ನು ಹಾಗೇ ಉಳಿಸಿಕೊಂಡಿದ್ದೇವೆ ಎಂದರು. ಕಮಲ್ ನಾಥ್ ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹವನ್ನು ತಳ್ಳಿಹಾಕಿದ ಹಿರಿಯ ರಾಜಕಾರಣಿ ಇದೆಲ್ಲ “ಮಾಧ್ಯಮ ಸೃಷ್ಟಿ” ಎಂದಿದ್ದಾರೆ.

ನೀವು (ಮಾಧ್ಯಮ) ಇಂತಹ ಊಹಾಪೋಹಗಳನ್ನು ಮಾಡುತ್ತಿದ್ದೀರಿ. ಬೇರೆ ಯಾರೂ ಹಾಗೆ ಹೇಳುತ್ತಿಲ್ಲ. ನೀವು ಎಂದಾದರೂ ನನ್ನಿಂದ ಕೇಳಿದ್ದೀರಾ? ನೀವು ಸುದ್ದಿ ಪ್ರಸಾರ ಮಾಡಿ ಬಂದು ನನ್ನಲ್ಲಿ ಕೇಳುತ್ತಿದ್ದೀವಿ ಅಮ ಮತ್ತು ನನ್ನನ್ನು ಕೇಳಿ. ಆ ಸುದ್ದಿಯಲ್ಲೇನೂ ನಿಜವಿಲ್ಲ ಎಂದು ಕಮಲ್ ನಾಥ್ ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ