ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬಣಗಳ ಮಧ್ಯೆ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದ ಎಐಸಿಸಿ ಅಧ್ಯಕ್ಷರ ಪುತ್ರ ಪ್ರಿಯಾಂಕ್ ಖರ್ಗೆ

ಮನೆಯೊಳಗಣ ಬೆಂಕಿ ತನ್ನನ್ನು ಸುಡದೆ ಪರರನ್ನು ಸುಟ್ಟಿತೇ ಎನ್ನುವ ಗಾದೆ ಮಾತಿನಂತೆ ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಕಾಳಗ ಧಗಧಗಿಸುತ್ತಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಬಣದ ನಡುವಿನ ಸಿಎಂ ಕುರ್ಚಿ ಸಮರ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಸ್ವತಃ ಹೈಕಮಾಂಡ್ ರಾತ್ರೋರಾತ್ರಿ ಬೆಂಗಳೂರಿಗೆ ಬಂದು ಎಚ್ಚರಿಕೆ ನೀಡಿದ್ದಾರೆ. ಇದರ ಹೊರತಾಗಿಯೂ ಇದರ ಬಗ್ಗೆ ಮಾತು ನಿಲ್ಲಿಸುತ್ತಿಲ್ಲ. ಇದೀಗ ಈ ಉರಿಯುವ ಬೆಂಕಿಗೆ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಸಚಿವ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ತುಪ್ಪ ಸುರಿದ್ದಾರೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬಣಗಳ ಮಧ್ಯೆ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದ ಎಐಸಿಸಿ ಅಧ್ಯಕ್ಷರ ಪುತ್ರ ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ
Follow us
ಪ್ರಶಾಂತ್​ ಬಿ.
| Updated By: ರಮೇಶ್ ಬಿ. ಜವಳಗೇರಾ

Updated on:Nov 03, 2023 | 11:29 AM

ಮೈಸೂರು, (ನವೆಂಬರ್ 03): ಬರೋಬ್ಬರಿ 135 ಸೀಟುಗಳನ್ನು ಪಡೆದು ಕಾಂಗ್ರೆಸ್ (Congress) ಅಧಿಕಾರಕ್ಕೇರಿದೆ. ರಾಜ್ಯದಲ್ಲಿ ಸುಭದ್ರ ಸರ್ಕಾರ ಅಸ್ಥಿತ್ವದಲ್ಲಿದೆ. ಆದ್ರೆ ಚುನಾವಣೆಗೂ ಮುನ್ನ ಸಿದ್ದರಾಮಯ್ಯ(Siddaramaiah) ಮತ್ತು ಡಿಕೆ.ಶಿವಕುಮಾರ್ (DK SHivakumar) ನಡುವೆ ನಡೆಯುತ್ತಿದ್ದ ಸಿಎಂ ಕುರ್ಚಿ ಯುದ್ಧ ಇದೀಗ ಮತ್ತೆ ಪಕ್ಷದೊಳಗೆ ಭುಗಿಲೆದ್ದಿದೆ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದು ಸಿದ್ದರಾಮಯ್ಯ ಬೆಂಬಲಿಗರು ಹೇಳುತ್ತಿದ್ದರೆ, ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ ಎಂದು ಡಿಕೆಶಿ ಬೆಂಬಲಿಗರು ಕೂಗೆಬ್ಬಿಸಿದ್ದಾರೆ. ಇದರಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಸ್ಫೋಟಕ ತಿರುವು ಪಡೆದುಕೊಂಡಿದೆ. ಹೈಕಮಾಂಡ್ ಎಚ್ಚರಿಕೆ ಹೊರತಾಗಿಯೂ ಡಿಕೆ ಬಣದ ಶಾಸಕರು ಮಾತು ನಿಲ್ಲಿಸುತ್ತಿಲ್ಲ. ಇದೀಗ ಸ್ವತಃ ಎಐಇಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ( Priyank Kharge) ಅವರು ಹೇಳಿಕೆ ಹೇಳಿಕೆ ನೀಡಿದ್ದು, ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದ್ರೆ ನಾನೂ ಸಿದ್ಧ ಎಂದಿದ್ದಾರೆ. ಇದರೊಂದಿಗೆ ಸಿಎಂ, ಡಿಸಿಎಂ ಬಣ ನಡುವೆ ಹೊತ್ತಿಕೊಂಡಿರುವ ಬೆಂಕಿಗೆ ಪ್ರಿಯಾಂಕ್ ಖರ್ಗೆ ತುಪ್ಪ ಸುರಿದಿದ್ದಾರೆ.

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣ ನಡುವೆ ಅಧಿಕಾರಿ ಹಂಚಿಕೆ ಬಗ್ಗೆ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದು ಮತ್ತೊಂದು ಹೆಜ್ಜೆ ಮುಂದೆ ಹೋಗುವ ಮುನ್ಸೂಚನೆ ಸಿಗುತ್ತಿದ್ದಂತೆಯೇ ಎಐಸಿಸಿ ನಾಯಕರಾದ ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮೊನ್ನೇ ರಾತ್ರೋರಾತ್ರಿ ಬೆಂಗಳೂರಿಗೆ ದೌಡಾಯಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜೊತೆ ಮಹತ್ವದ ಸಭೆ ಮಾಡಿದ್ದರು. ಅಲ್ಲದೇ ಈ ಬಗ್ಗೆ ಹೇಳಿಕೆ ಕೊಡುವ ಶಾಸಕರು, ಸಚಿವರುಗಳಿಗೆ ಖಡಕ್ ಸೂಚನೆ ನೀಡಿದ್ದರು. ಇದರ ಸಹ ಇಂದು (ನವರಂಬರ್ 03) ಸ್ವತಃ ಎಐಇಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಹೇಳಿಕೆ ಹೇಳಿಕೆ ನೀಡಿದ್ದು, ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದ್ರೆ ನಾನೂ ಸಿದ್ಧ ಎಂದಿದ್ದಾರೆ. ಇದರೊಂದಿಗೆ ಸಿಎಂ, ಡಿಸಿಎಂ ಬಣ ನಡುವೆ ಹೊತ್ತಿಕೊಂಡಿರುವ ಬೆಂಕಿಗೆ ಪ್ರಿಯಾಂಕ್ ಖರ್ಗೆ ಮತ್ತಷ್ಟು ತುಪ್ಪ ಸುರಿದಿದ್ದಾರೆ.

ಇದನ್ನೂ ಓದಿ: ‘ಕೈ’ ಕಟ್, ಬಾಯ್‌ ಮುಚ್‌: ಸಚಿವರು, ಶಾಸಕರಿಗೆ ಸುರ್ಜೇವಾಲ ನೇರ ಎಚ್ಚರಿಕೆ: ಕಾಂಗ್ರೆಸ್‌ ಬಣ ರಾಜಕೀಯಕ್ಕೆ ಬೀಳುತ್ತಾ ಬ್ರೇಕ್‌?

ಸಿಎಂ ಆಗಿ ಮುಂದುವರಿಯುತ್ತೇನೆಂದು ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ. ಯಾರು ಮುಂದುವರಿಯಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದ್ರೆ ನಾನೂ ಸಿದ್ಧ. ಅಧಿಕಾರ ಹಂಚಿಕೆ ಬಗ್ಗೆ ದೆಹಲಿಯಲ್ಲಿ ನಾಲ್ವರು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಎಲ್ಲರಿಗೂ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ, ಇದರಲ್ಲಿ ತಪ್ಪಿಲ್ಲ ಎಂದು ಹೇಳಿದರು.

ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ. ಜಿಲ್ಲಾ ಪಂಚಾಯಿತಿ ಸದಸ್ಯರಿಂದ ಹಿಡಿದು ಶಾಸಕರವರೆಗೆ ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರವಿದೆ. ಇದರಲ್ಲಿ ತಪ್ಪು ಏನು ಇಲ್ಲ . ಆದರೆ ಅವರ ಹೇಳಿಕೆ, ಕಲ್ಲಿನಲ್ಲಿ ಕೆತ್ತಿದ ಶಾಸನವಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯನವರಿಗೆ ಟಾಂಗ್ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣ ನಡುವೆ ಅಧಿಕಾರಿ ಹಂಚಿಕೆ ಬಗ್ಗೆ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದು ಮತ್ತೊಂದು ಹೆಜ್ಜೆ ಮುಂದೆ ಹೋಗುವ ಮುನ್ಸೂಚನೆ ಸಿಗುತ್ತಿದ್ದಂತೆಯೇ ಎಐಸಿಸಿ ನಾಯಕರಾದ ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮೊನ್ನೇ ರಾತ್ರೋರಾತ್ರಿ ಬೆಂಗಳೂರಿಗೆ ದೌಡಾಯಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜೊತೆ ಮಹತ್ವದ ಸಭೆ ಮಾಡಿದ್ದರು. ಅಲ್ಲದೇ ಈ ಬಗ್ಗೆ ಹೇಳಿಕೆ ಕೊಡುವ ಶಾಸಕರು, ಸಚಿವರುಗಳಿಗೆ ಖಡಕ್ ಸೂಚನೆ ನೀಡಿದ್ದರು. ಆದರೂ ಸಹ ಹೈಕಮಾಂಡ್ ಎಚ್ಚರಿಕೆ ಹೊರತಾಗಿಯೂ ಡಿಕೆ ಬಣದ ಶಾಸಕರು ಮಾತು ನಿಲ್ಲಿಸುತ್ತಿಲ್ಲ.

ಎಐಸಿಸಿ ಅಧ್ಯಕ್ಷರ ಪುತ್ರ ಈ ರೀತಿ ಹೇಳಿಕೆ ನೀಡಿರುವುದು ಅಚ್ಚರಿಕೆ ಕಾರಣವಾಗಿದೆ. ಇದರೊಂದಿಗೆ ಹೈಕಮಾಂಡ್ ಎಚ್ಚರಿಕೆ ಕೊಟ್ಟರೂ ಸಹ ರಾಜ್ಯ ಕಾಂಗ್ರೆಸ್​ನಲ್ಲಿ ಬಣ ರಾಜಕೀಯಕ್ಕೆ ಬ್ರೇಕ್‌ ಬೀಳುವ ಲಕ್ಷಣಗಳು ಕಾಣುತ್ತಿಲ್ಲ. ಇದು ಮುಂದೆ ಯಾವ ಹಂತಕ್ಕೆ ಹೋಗಿ ನಿಲ್ಲುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ರಾಜಕಾರಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:29 am, Fri, 3 November 23