ವಲಸೆ ಎನ್ನುವ ಶಬ್ದ ನಮ್ಮ ಪಕ್ಷದಲ್ಲಿ ಇಲ್ಲ; ರಾಮಗರದಲ್ಲಿ ಇಂಧನ ಸಚಿವ ಸುನೀಲ್ ಕುಮಾರ್ ಹೇಳಿಕೆ

ಡಿಕೆಶಿಯನ್ನ ಆನಂದ್ ಸಿಂಗ್ ಭೇಟಿಯಾದ ತಕ್ಷಣ ರಾಜಕೀಯ ಬಣ್ಣ ಕಟ್ಟುವ ಅವಶ್ಯಕತೆ ಇಲ್ಲ. ಬೊಮ್ಮಾಯಿ ಅವರ ಆರು ತಿಂಗಳ ಆಡಳಿತ ನೋಡಿ ಕಾಂಗ್ರೆಸ್​ಗೆ ಭ್ರಮ ನಿರಸನವಾಗಿದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪರಮೇಶ್ವರ್​ಗೆ ಅಭದ್ರತೆಗೆ ಕಾಡಿದೆ.

ವಲಸೆ ಎನ್ನುವ ಶಬ್ದ ನಮ್ಮ ಪಕ್ಷದಲ್ಲಿ ಇಲ್ಲ; ರಾಮಗರದಲ್ಲಿ ಇಂಧನ ಸಚಿವ ಸುನೀಲ್ ಕುಮಾರ್ ಹೇಳಿಕೆ
ಸಚಿವ ಸುನೀಲ್ ಕುಮಾರ್
Follow us
TV9 Web
| Updated By: sandhya thejappa

Updated on:Feb 02, 2022 | 10:29 AM

ರಾಮನಗರ: ವಲಸೆ ಎನ್ನುವ ಶಬ್ಧ ನಮ್ಮ ಪಕ್ಷದಲ್ಲಿ ಇಲ್ಲ. ನಮ್ಮ ಪಕ್ಷಕ್ಕೆ ಬಂದ ನಂತರ ಅವರೆಲ್ಲ ನಮ್ಮ ಪಕ್ಷದವರಿಗೆ. ನಾವೆಲ್ಲ ಒಂದಾಗಿ ಚುನಾವಣೆ ನಡೆಸುತ್ತೇವೆ. ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸುತ್ತೇವೆ. ಯಾರಿಗೆ ಅಭದ್ರತೆ ಕಾಡುತ್ತೋ, ಅವರಿಗೆ ಹೊರಗಡೆ ಬರಬೇಕು ಅನಿಸುತ್ತದೆ. ಕಾಂಗ್ರೆಸ್​ಗೆ (Congress) ಅಭದ್ರತೆ ಕಾಡುತ್ತೆ. ನಮಗೆ ಆ ರೀತಿಯ ಸಮಸ್ಯೆಯಿಲ್ಲ. ನಮ್ಮ ಕಾರ್ಯಕರ್ತರ ವಿಸ್ತರಣೆಯಿಂದ ರಾಜ್ಯದಲ್ಲಿ ಮತ್ತೊಮ್ಮೆ ಗೆದ್ದು ಬರುತ್ತೇವೆ ಅಂತ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ಇಂಧನ ಸಚಿವ ಸುನೀಲ್ ಕುಮಾರ್ (Sunil Kumar) ಹೇಳಿಕೆ ನೀಡಿದ್ದಾರೆ.

ಡಿಕೆಶಿಯನ್ನ ಆನಂದ್ ಸಿಂಗ್ ಭೇಟಿಯಾದ ತಕ್ಷಣ ರಾಜಕೀಯ ಬಣ್ಣ ಕಟ್ಟುವ ಅವಶ್ಯಕತೆ ಇಲ್ಲ. ಬೊಮ್ಮಾಯಿ ಅವರ ಆರು ತಿಂಗಳ ಆಡಳಿತ ನೋಡಿ ಕಾಂಗ್ರೆಸ್​ಗೆ ಭ್ರಮ ನಿರಸನವಾಗಿದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪರಮೇಶ್ವರ್​ಗೆ ಅಭದ್ರತೆಗೆ ಕಾಡಿದೆ. ನಮ್ಮ ಪಾರ್ಟಿಯಲ್ಲಿ ಒಂದು ವ್ಯವಸ್ಥೆ ಇದೆ. ಎಲ್ಲವನ್ನ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಒಂದು ಚೌಕಟ್ಟಿನಲ್ಲಿ ಕರೆದು ಮಾತನಾಡುತ್ತಾರೆ. ಎಲ್ಲೆ ಮೀರಿ ಕೆಲಸ ಮಾಡುವವರಿಗೆ ಕರೆದು ಮಾತನಾಡುವ, ಎಚ್ಚರಿಕೆ ಕೊಡುವ ಕೆಲಸ ಆಗುತ್ತದೆ ಅಂತ ಸಚಿವ ಸುನೀಲ್ ಕುಮಾರ್ ತಿಳಿಸಿದರು.

ಕಾಂಗ್ರೆಸ್ ಆಕಾಶ, ಭೂಮಿಯಲ್ಲಿ ಹಗರಣ ಮಾಡಿದ್ದಾರೆ ಎಂದ ಜೊಲ್ಲೆ: ಕಾಂಗ್ರೆಸ್​ನಿಂದ ಕೆಲ ಶಾಸಕರು ಬರಬಹುದು. ಆದರೆ ಬಿಜೆಪಿಯಿಂದ ಯಾರೂ ಹೋಗುವುದಿಲ್ಲ ಅಂತ ಕೊಪ್ಪಳದಹುಲಿಗಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಈ ವೇಳೆ ಕೇಂದ್ರದ ಬಜೆಟ್ ಕುರಿತು ದೇಶ ಮಾರುತ್ತಿದ್ದಾರೆ ಎಂಬ ಹೇಳಿಕೆ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜೊಲ್ಲೆ, ಅವರು ಹಿರಿಯ ರಾಜಕಾರಣಿ. ರಾಜ್ಯದಲ್ಲಿ ಬಜೆಟ್ ಮಂಡಿಸಿದವರು. ವಿರೋಧ ಪಕ್ಷದಲ್ಲಿದ್ದಾರೆ ಎಂಬ ಕಾರಣಕ್ಕೆ ಈ ರೀತಿ ಹೇಳುತ್ತಿದ್ದಾರೆ. ಅವರ ಸ್ಥಾನದಲ್ಲಿ ನಾವು ಇದ್ದರೂ ಹೀಗೆ ಹೇಳಬೇಕಾಗುತ್ತದೆ. ಹಿಂದಿನ ಕಾಂಗ್ರೆಸ್ ಆಕಾಶ, ಭೂಮಿಯಲ್ಲಿ ಹಗರಣ ಮಾಡಿದ್ದಾರೆ ಎಂದರು.

ಈಗ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಪ್ರಗತಿಯತ್ತ ಬಜೆಟ್ ಮಂಡನೆಯಾಗಿದೆ. ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ವಹಿಸಿಕೊಂಡಿದ್ದು ನನ್ನ ಪೂರ್ವಜನ್ಮ ಪುಣ್ಯ ಎಂದು ಮಾತನಾಡಿದ ಸಚಿವೆ, ಹೊಸಪೇಟೆಯಲ್ಲಿ ಆನಂದ್ ಸಿಂಗ್ ಬೆಂಬಲಿಗರು ಪ್ರತಿಭಟನೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಹಜವಾಗಿ ಅವರ ಜಿಲ್ಲೆಯವರೇ ಸಚಿವರಾಗಬೇಕೆನ್ನುವ ಬಯಕೆ ಇರುತ್ತದೆ. ಆದರೆ ವಿಜಯನಗರ ಜಿಲ್ಲೆಯಲ್ಲಿ ಜನತೆ, ಜನಪ್ರತಿನಿಧಿಗಳು ಸಹಕಾರ ನೀಡುತ್ತಾರೆ ಎನ್ನುವ ಭರವಸೆ ಇದೆ.ಆನಂದ್ ಸಿಂಗ್ ಅಣ್ಣ ಸಹ ಸಹಕಾರ ನೀಡುತ್ತಾರೆ. ಅವರು ಡಿಕೆಶಿ ಭೇಟಿಯಾಗಿರುವುದು ಗಂಗಾರತಿ ಹಿನ್ನೆಲೆ. ಡಿಕೆಶಿಯವರು ಅವರಿಗೆ ಆತ್ಮೀಯವಾಗಿರುವ ಕಾರಣಕ್ಕೆ ಭೇಟಿಯಾಗಿದ್ದಾರೆ. ಯಡಿಯೂರಪ್ಪ ನಮ್ಮ ನಾಯಕರು. ಅವರು ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅವರ ಮೊಮ್ಮಗಳ ಸಾವಿನ ನಂತರ ಸ್ವಲ್ಪ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಕಾಂಗ್ರೆಸ್ ತ್ಯಜಿಸಿದ್ರೂ ಆಶ್ಚರ್ಯವಿಲ್ಲ- ಬಿಸಿ ಪಾಟೀಲ್: ಕೇಂದ್ರ ಸರಕಾರದ ಬಜೆಟ್ ಅಭಿವೃದ್ಧಿಗೆ ಪೂರಕವಾಗಿದೆ. ಮುಂದಿನ ಇಪ್ಪತ್ತೈದು ವರ್ಷಗಳ ಮುಂದಾಲೋಚನೆ ಇಟ್ಕೊಂಡು ಬಜೆಟ್ ಮಂಡನೆ ಆಗಿದೆ. ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ ಘೋಷಣೆ ಮಾಡಿದ್ದಾರೆ. ಸಮೀಕ್ಷೆಗೆ ದ್ರೋಣ ಟೆಕ್ನಾಲಜಿ ಅಳವಡಿಕೆಗೆ ಹೆಚ್ಚಿನ ಒತ್ತು ನೀಡಿದೆ. ಒಂಬತ್ತು ಲಕ್ಷ ಹೆಕ್ಟೇರ್ ಜಮೀನಿಗೆ ನೀರಾವರಿಗೆ ಒತ್ತು ನೀಡಿದೆ ಎಂದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿಕೆ ನೀಡಿದ್ದಾರೆ. ಇದೆ ವೇಳೆ ಕಾಂಗ್ರೆಸ್​ನಲ್ಲಿ ಮುಖಂಡರು ಪಕ್ಷ ಬಿಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ ಕಾಂಗ್ರೆಸ್ ತ್ಯಜಿಸಿದ್ರೂ ಆಶ್ಚರ್ಯವಿಲ್ಲ. ಅಲ್ಲಿ ಆ ರೀತಿಯ ವಾತಾವರಣವಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ ಒಬ್ಬರ ಮುಖವನ್ನೊಬ್ಬರು ನೋಡದ ಪರಿಸ್ಥಿತಿ ಅಲ್ಲಿದೆ. ಅವರ ಪಿಸುಮಾತು, ಇವರ ಪಿಸುಮಾತು ನೋಡಿದರೆ ಅಲ್ಲಿ ಆ ರೀತಿಯ ಪರಿಸ್ಥಿತಿ ಇದೆ ಎಂದು ಅಭಿಪ್ರಾಯಪಟ್ಟರು.

ನಾವೇ ಅಧಿಕಾರಕ್ಕೆ ಬರುತ್ತೀವಿ ಅಂತಾ ಹಗಲುಗನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ಅನ್ನೋದಕ್ಕಿಂತ ನಾನು ಸಿಎಂ ಆಗುತ್ತೀನಿ, ನಾನು ಸಿಎಂ ಆಗುತ್ತೀನಿ ಅಂತಾ ಸಿದ್ದರಾಮಯ್ಯ ಮತ್ತು ಡಿಕೆಶಿ ಹೊರಟಿದ್ದಾರೆ‌. ಸಿದ್ದರಾಮಯ್ಯ ಮತ್ತು ಸಿಎಂ ಇಬ್ರಾಹಿಂ ಜಿಗರಿ ದೋಸ್ತರು. ಇಬ್ರಾಹಿಂ ಸಾಹೇಬ್ರು ಬಹಳ ಚೆನ್ನಾಗಿ ಭಾಷಣ ಮಾಡುತ್ತಾರೆ. ಪ್ರಾಸಬದ್ಧವಾಗಿ ಮಾತನಾಡ್ತಾರೆ‌. ಜಾತಿಯ ಅಧಾರದ ಮೇಲೆ ರಾಜಕೀಯ ಮಾಡ್ತೀವಿ ಅನ್ನೋದು ಮೂರ್ಖತನದ ಪರಮಾವಧಿ ಎಂದು ಬಿಸಿ ಪಾಟೀಲ್ ತಿಳಿಸಿದರು.

ಇದನ್ನೂ ಓದಿ

ಮಡಿಕೇರಿಯಲ್ಲಿ ವೃದ್ಧೆಯರನ್ನು ಕಟ್ಟಿ ಹಾಕಿ ಮನೆ ದರೋಡೆ! 2.5 ಲಕ್ಷ ರೂ. ನಗದು, 83 ಗ್ರಾಂ ಚಿನ್ನಾಭರಣ ಕದ್ದು ಪರಾರಿ

ನಟಿ ರಮ್ಯಾ ಜೊತೆಗಿರುವ ರಾಣಿ ಯಾರು? ವಾವ್​.. ಆಕಸ್ಮಿಕವಾಗಿ ಸಿಕ್ಕ ಜೀವದ ಬಗ್ಗೆ ಈ ಪರಿ ಪ್ರೀತಿ

Published On - 10:21 am, Wed, 2 February 22

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು