‘ನಮಗೆ ತಲೆ ಕತ್ತರಿಸೋದು ಗೊತ್ತಿದೆ, ತಲೆ ತಗ್ಗಿಸೋದು ಗೊತ್ತಿಲ್ಲ’; ವಿವಾದಿತ ಭಾಷಣ ಮಾಡಿದ ಇಮ್ರಾನ್ ಪ್ರತಾಪ್ ಗಡಿ

ದೇಶ ಕಷ್ಟದ ಕಾಲದಲ್ಲಿ ಸಾಗುತ್ತಿದೆ ಎಂದು ಮಾತನಾಡಿದ ಇಮ್ರಾನ್, ಬಿಜೆಪಿ ಸರ್ಕಾರದ ನಿಲುವು ಖಂಡಿಸುವ ಭರದಲ್ಲಿ ವಿವಾದಿತ ಹೇಳಿಕೆ ನೀಡಿದ್ದಾರೆ. ಈ ಹಿಂದೆಯೂ ಸಾಕಷ್ಟು ವಿವಾದಿತ ಹೇಳಿಕೆಯನ್ನು ಇಮ್ರಾನ್ ನೀಡಿದ್ದರು.

‘ನಮಗೆ ತಲೆ ಕತ್ತರಿಸೋದು ಗೊತ್ತಿದೆ, ತಲೆ ತಗ್ಗಿಸೋದು ಗೊತ್ತಿಲ್ಲ’; ವಿವಾದಿತ ಭಾಷಣ ಮಾಡಿದ ಇಮ್ರಾನ್ ಪ್ರತಾಪ್ ಗಡಿ
ಇಮ್ರಾನ್ ಪ್ರತಾಪ್ ಗಡಿ
Follow us
TV9 Web
| Updated By: sandhya thejappa

Updated on: Nov 17, 2021 | 9:25 AM

ಬೆಂಗಳೂರು: ‘ನೀವು ಟಿಪ್ಪು ಸುಲ್ತಾನ್ ನೆಲದಿಂದ ಬಂದವರು’. ‘ನಮಗೆ ತಲೆ ಕತ್ತರಿಸೋದು ಗೊತ್ತಿದೆ, ತಲೆ ತಗ್ಗಿಸೋದು ಗೊತ್ತಿಲ್ಲ’. ‘ನಿಮಗೆ ತಲೆ ಬಾಗುವುದು ತಿಳಿದಿಲ್ಲ, ತಲೆ ಎತ್ತುವುದು ತಿಳಿದಿದೆ’ ಅಂತ ಕಾಂಗ್ರೆಸ್ ರಾಷ್ಟ್ರೀಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಮ್ರಾನ್ ಪ್ರತಾಪ್ ಗಡಿ ವಿವಾದಿತ ಭಾಷಣ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ (ನ.16) ನಡೆದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಇಮ್ರಾನ್ ಪ್ರತಾಪ್ ಗಡಿ ವಿವಾದಿತ ಹೇಳಿಕೆ ನೀಡಿದ್ದಾರೆ.

ದೇಶ ಕಷ್ಟದ ಕಾಲದಲ್ಲಿ ಸಾಗುತ್ತಿದೆ ಎಂದು ಮಾತನಾಡಿದ ಇಮ್ರಾನ್, ಬಿಜೆಪಿ ಸರ್ಕಾರದ ನಿಲುವು ಖಂಡಿಸುವ ಭರದಲ್ಲಿ ವಿವಾದಿತ ಹೇಳಿಕೆ ನೀಡಿದ್ದಾರೆ. ಈ ಹಿಂದೆಯೂ ಸಾಕಷ್ಟು ವಿವಾದಿತ ಹೇಳಿಕೆಯನ್ನು ಇಮ್ರಾನ್ ನೀಡಿದ್ದರು. ಶಾಹಿನ್ ಭಾಗ್ ಮಾದರಿ ಹೋರಾಟ ಹೈದರಾಬಾದ್ನಲ್ಲಿ ಏಕಿಲ್ಲ ಎಂದು ಪ್ರಶ್ನಿಸಿ ವಿವಾದ ಹುಟ್ಟುಹಾಕಿದ್ದರು. ಇಮ್ರಾನ್ ವಿರುದ್ಧ ಹೈದರಾಬಾದ್ ಪೋಲಿಸರು ಕೇಸ್ ಕೂಡಾ ದಾಖಲಿಸಿದ್ದರು.

ಅಧಿಕಾರಕ್ಕಾಗಿ ಆಡಳಿತಶಾಹಿ ಆಥವಾ ಕಾರ್ಯಾಂಗವನ್ನ ಮುಸ್ಲಿಂಮರು ವಶಕ್ಕೆ ಪಡೆದುಕೊಳ್ಳಬೇಕು ಅಂತ ಇಮ್ರಾನ್ ವಿವಾದ ಸೃಷ್ಟಿಸಿದ್ದರು. ಉತ್ತರ ಪ್ರದೇಶ ಮೂಲದ ನಾಯಕ ಇಮ್ರಾನ್ ಉರ್ದು ಕವಿಯೂ ಅಗಿದ್ದಾರೆ. ಇವರು ಉತ್ತರ ಪ್ರದೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪವನ್ನು ಹೊಂದಿದ್ದಾರೆ.

ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದ ಸಿದ್ದರಾಮಯ್ಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭ ನಡೆದಿದೆ. ಸಭಾ ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದರು. ಈ ವೇಳೆ ಕೆಲವರು ಡಿಕೆಶಿ, ಡಿಕೆಶಿ ಅಂತ ಮತ್ತು ಜಮೀರ್ ಹೆಸರು ಹೇಳಿ ಘೋಷಣೆ ಕೂಗಿದ್ದಾರೆ. ಹೀಗಾಗಿ ಸಿಟ್ಟಾದ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದಿದ್ದಾರೆ. ಈ ನಡುವೆ ಇದು ಪೂರ್ವ ನಿಯೋಜಿತ ಪ್ಲ್ಯಾನ್ ಎಂಬ ಗುಸುಗುಸು ಕೂಡಾ ಕೇಳಿಬಂದಿದೆ.

ಇದನ್ನೂ ಓದಿ ಡಿಕೆ ಡಿಕೆ ಎಂದು ಘೋಷಣೆ, ಜಮೀರ್ ಫೋಟೋ ಪ್ರದರ್ಶನ! ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದ ಸಿದ್ದರಾಮಯ್ಯ

ವಿಶಾಲ್​​ರನ್ನು ನೋಡಿದರೆ ನನ್ನ ತಮ್ಮನನ್ನು ನೋಡಿದ ಹಾಗಾಗುತ್ತದೆ, ಅದನ್ನು ಅಪ್ಪು ಬಳಿಯೂ ಹೇಳಿದ್ದೆ: ಶಿವರಾಜ್​ ಕುಮಾರ್

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು