ಮಹಾರಾಷ್ಟ್ರದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ: ಫಡ್ನವಿಸ್​​ಗೆ ಹಣಕಾಸು, ಗೃಹ ಇಲಾಖೆ

ಮಂಗಳವಾರ 18 ಸಚಿವರನ್ನು ಸೇರ್ಪಡೆಗೊಳಿಸುವ ಮೂಲಕ ತಮ್ಮ ಇಬ್ಬರು ಸದಸ್ಯರ ಸಂಪುಟವನ್ನು ವಿಸ್ತರಿಸಿದ ಶಿಂಧೆ  ನಗರಾಭಿವೃದ್ಧಿ ಖಾತೆಯನ್ನು ತಮ್ಮಲ್ಲಿಯೇ ಇಟ್ಟುಕೊಂಡಿದ್ದಾರೆ.

ಮಹಾರಾಷ್ಟ್ರದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ: ಫಡ್ನವಿಸ್​​ಗೆ ಹಣಕಾಸು, ಗೃಹ ಇಲಾಖೆ
ಏಕನಾಥ್ ಶಿಂಧೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 14, 2022 | 6:32 PM

ಮುಂಬೈ: ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ನೇತೃತ್ವದ ಮಹಾರಾಷ್ಟ್ರ ಸಚಿವ ಸಂಪುಟದಲ್ಲಿ ನೂತನ ಸಚಿವರಿಗೆ ಖಾತೆಗಳನ್ನು ಹಂಚಿದ್ದು, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಅವರಿಗೆ ಗೃಹ ಮತ್ತು ಹಣಕಾಸು ಇಲಾಖೆ ನೀಡಲಾಗಿದೆ. ಮಂಗಳವಾರ 18 ಸಚಿವರನ್ನು ಸೇರ್ಪಡೆಗೊಳಿಸುವ ಮೂಲಕ ತಮ್ಮ ಇಬ್ಬರು ಸದಸ್ಯರ ಸಂಪುಟವನ್ನು ವಿಸ್ತರಿಸಿದ ಶಿಂಧೆ  ನಗರಾಭಿವೃದ್ಧಿ ಖಾತೆಯನ್ನು ತಮ್ಮಲ್ಲಿಯೇ ಇಟ್ಟುಕೊಂಡಿದ್ದಾರೆ. ಫಡ್ನವಿಸ್ ಅವರು ಯೋಜನಾ ಖಾತೆಯನ್ನೂ ನಿಭಾಯಿಸಲಿದ್ದಾರೆ. ಬಿಜೆಪಿ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಅವರು ನೂತನ ಕಂದಾಯ ಸಚಿವರಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. ಬಿಜೆಪಿ ಸಚಿವ ಸುಧೀರ್ ಮುಂಗಂಟಿವಾರ್ ಅವರನ್ನು ಅರಣ್ಯ ಸಚಿವರನ್ನಾಗಿ ಮಾಡಲಾಗಿದೆ, ಅವರು ಈ ಹಿಂದೆಯೂ ಇದೇ ಖಾತೆ ನಿಭಾಯಿಸಿದ್ದರು. ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರಿಗೆ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಖಾತೆ ನೀಡಲಾಗಿದ್ದು, ಸಂಸದೀಯ ವ್ಯವಹಾರ ಖಾತೆಗಳನ್ನೂ ಇವರು ನೋಡಿಕೊಳ್ಳಲಿದ್ದಾರೆ.

ಏಕನಾಥ್ ಶಿಂಧೆ ನೇತೃತ್ವದ  ಶಿವಸೇನಾದಿಂದ ದೀಪಕ್ ಕೇಸರ್ಕರ್ ಅವರಿಗೆ ಶಾಲಾ ಶಿಕ್ಷಣ ಇಲಾಖೆ ಜವಾಬ್ದಾರಿ ನೀಡಲಾಗಿದ್ದು, ಅಬ್ದುಲ್ ಸತ್ತಾರ್ ವರಿಗೆ ಕೃಷಿ ಖಾತೆ ನೀಡಲಾಗಿದೆ.

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದಲ್ಲಿ ಬಂಡಾಯವೆದ್ದು ಸರ್ಕಾರ ಪತನವಾಗುವಂತೆ ಮಾಡಿದ ಏಕನಾಥ್ ಶಿಂಧೆ, ಆಮೇಲೆ ಬಿಜೆಪಿ ಜತೆ ಕೈಜೋಡಿಸಿ ಮಹಾ ಮುಖ್ಯಮಂತ್ರಿಯಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:27 pm, Sun, 14 August 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ