AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎನ್​ಡಿಐಎ ಒಕ್ಕೂಟದವರಿಗೆ ನೀತಿ, ನಿಯತ್ತು, ನೇತೃತ್ವ ಮೂರೂ ಇಲ್ಲ: ಪ್ರಲ್ಹಾದ್ ಜೋಶಿ

ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಹಾಗೂ ಮತ್ತಿತರ ಎಡಪಕ್ಷಗಳು ಒಳಗೊಂಡಿರುವ ಐಎನ್​ಡಿಐಎ ಮೈತ್ರಿಕೂಟದಲ್ಲಿ ಬಿರುಕು ಮೂಡಲಾರಂಭಿಸಿದೆ. ಒಂದೊಂದೇ ಪಕ್ಷಗಳು ಮೈತ್ರಿಯಿಂದ ಹೊರಬಂದು ಸ್ವತಂತ್ರವಾಗಿ ಚುನಾವಣೆ ಎದುರಿಸುವುದಾಗಿ ಘೋಷಣೆ ಮಾಡುತ್ತಿವೆ. ಕಾಂಗ್ರೆಸ್ ನಾಯಕರ ವಿರುದ್ಧ ಮೈತ್ರಿ ಪಕ್ಷಗಳ ನಾಯಕರು ಧ್ವನಿ ಎತ್ತುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.

ಐಎನ್​ಡಿಐಎ ಒಕ್ಕೂಟದವರಿಗೆ ನೀತಿ, ನಿಯತ್ತು, ನೇತೃತ್ವ ಮೂರೂ ಇಲ್ಲ: ಪ್ರಲ್ಹಾದ್ ಜೋಶಿ
ಐಎನ್​ಡಿಐಎ ಒಕ್ಕೂಟದವರಿಗೆ ನೀತಿ, ನಿಯತ್ತು, ನೇತೃತ್ವ ಮೂರೂ ಇಲ್ಲ ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕಿರಣ್​ ಹನಿಯಡ್ಕ
| Updated By: Rakesh Nayak Manchi|

Updated on: Jan 27, 2024 | 2:39 PM

Share

ಬೆಂಗಳೂರು, ಜ.27: ಐಎನ್​ಡಿಐಎ (INDIA) ಮೈತ್ರಿಕೂಟದ ಪಕ್ಷಗಳ ನಡುವೆ ಬಿರುಕು ಮೂಡಿರುವ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಐಎನ್​ಡಿಐಎ ಒಕ್ಕೂಟ ಒಂದು ಫೋಟೋ ಶೂಟ್ ಅಷ್ಟೇ ಆಗಿತ್ತು. ಆ ಒಕ್ಕೂಟದವರಿಗೆ ನೀತಿ, ನಿಯತ್ತು, ನೇತೃತ್ವ ಮೂರೂ ಇಲ್ಲ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಪ್ರಲ್ಹಾದ್ ಜೋಶಿ, ಅದೊಂದು ಅಸಹಜ, ಅಸ್ವಾಭಾವಿಕ ಒಪ್ಪಂದ ಆಗಿತ್ತು. ಹಾಗಾಗಿ ಐಎನ್​ಡಿಐಎ ಒಕ್ಕೂಟ ಸಾಯುತ್ತಿದೆ. ನಿತೀಶ್ ಕುಮಾರ್ ಬಿಜೆಪಿಗೆ ಸೇರುವ ಬಗ್ಗೆ ನಾನು ಏನೂ ಮಾತಾಡಲ್ಲ. ಅವರು ಪಕ್ಷ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ಮಾತಾಡಲು ನಾನು ಸೂಕ್ತವೂ ಅಲ್ಲ ಎಂದರು.

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ವೇಳೆ ಪ್ರಲ್ಹಾದ್ ಜೋಶಿ ಗೈರು

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ವೇಳೆ ಹುಬ್ಬಳ್ಳಿಯ ಬಿಜೆಪಿ ನಾಯಕರ ಪೈಕಿ ಒಬ್ಬರಾಗಿರುವ ಪ್ರಲ್ಹಾದ್ ಜೋಶಿ ಅನುಪಸ್ಥಿತರಾಗಿದ್ದರು. ಈ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೋಶಿ, ಉಪರಾಷ್ಟ್ರಪತಿ ಜೊತೆ ಸಭೆಯಲ್ಲಿದ್ದ ಕಾರಣ ಭಾಗಿಯಾಗಿಲ್ಲ ಎಂದರು.

ಶೆಟ್ಟರ್ ಪಕ್ಷ ಸೇರ್ಪಡೆ ವೇಳೆ ಇನ್ನೊಂದು ಅರ್ಧ ಗಂಟೆಯಲ್ಲಿ ಸೇರ್ಪಡೆ ಆಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ನನಗೆ ಕರೆ ಮಾಡಿ ಹೇಳಿದ್ದರು. ಜಗದೀಶ್​ ಶೆಟ್ಟರ್ ಅವರು ಬಿಜೆಪಿಯಲ್ಲೇ ಇದ್ದವರು. ಶೆಟ್ಟರ್ ವಾಪಸ್​​ ಬಂದಿದ್ದು ಪಕ್ಷಕ್ಕೆ ಒಳ್ಳೆಯದಾಗುತ್ತದೆ. ಶೆಟ್ಟರ್ ಅವರು ಬಂದಿದ್ದು ಬಿಜೆಪಿಗೆ ಅನುಕೂಲ ಆಗುತ್ತದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಇದನ್ನೂ ಓದಿ: TMC ಸ್ವತಂತ್ರ ಸ್ಪರ್ಧೆ: ಐಎನ್​ಡಿಐಎ ಮೈತ್ರಿಕೂಟ ಒಂದಾಗುವ ಗ್ಯಾರಂಟಿ ಇಲ್ಲ ಎಂದ ಆರ್ ಅಶೋಕ್

ಪಕ್ಷ ಬಿಟ್ಟವರನ್ನು ವಾಪಸ್ ಕರೆತರುವ ವಿಚಾರವಾಗಿ ಮಾತನಾಡಿದ ಜೋಶಿ, ಯಾರು ನಮ್ಮ ಪಕ್ಷದ ಸಿದ್ಧಾಂತ, ಮೋದಿ ನಾಯಕತ್ವ ಒಪ್ಪಿ ಬರುತ್ತಾರೋ ಸ್ವಾಗತ ಕೋರುತ್ತೇವೆ. ಅವರೆಲ್ಲರನ್ನೂ ಹಂತಹಂತವಾಗಿ ವಾಪಸ್ ಕರೆತರುವ ಬಗ್ಗೆ ರಾಷ್ಟ್ರೀಯ ಘಟಕ, ರಾಜ್ಯ ಘಟಕಗಳಲ್ಲಿ ತೀರ್ಮಾನ ಮಾಡುತ್ತೇವೆ ಎಂದರು.

ರಾಘವೇಂದ್ರರನ್ನು ಹೊಗಳಿಕೆ ಬಿಜೆಪಿಗೆ ಆಶೀರ್ವಾದ

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರನ್ನು ಹೊಗಳಿದ್ದು ಬಿಜೆಪಿಗೆ ಆಶೀರ್ವಾದ ಎಂದು ಜೋಶಿ ಹೇಳಿದರು. ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿನ್ನೆ ಮಾತನಾಡಿದ್ದ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಸಂಸದ ಬಿವೈ ರಾಘವೇಂದ್ರರ ಬಗ್ಗೆ ಹೊಗಳಿಕೆ ಮಾತುಗಳನ್ನಾಡಿದ್ದರು. ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಗಳನ್ನು ಮಾಡಿದ ರಾಘವೇಂದ್ರ ಅವರು ಮತ್ತೆ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಬೇಕು. ಇದು ಜನರ ಕರ್ತವ್ಯ ಅಂತ ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!